ಸುಳ್ಯ: ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಮತ್ತು ಸಪರಿವಾರ ದೈವಸ್ಥಾನದ ಬ್ರಹ್ಮ ಕಲಶೋತ್ಸವ ಮತ್ತು ಅಯ್ಯನಕಟ್ಟೆ ಜಾತ್ರೋತ್ಸವವು ಜ. 25 ರಿಂದ 30 ರ ತನಕ ಜರಗಲಿದ್ದು, ಜ. 25 ರಂದು ಬೆಳಿಗ್ಗೆ ನೀಲೇಶ್ವರ ಪದ್ಮನಾಭ ತಂತ್ರಿಗಳು ಆಗಮಿಸಿದರು. ವಿವಿಧ ಸಮಿತಿಗಳ ಪದಾಧಿಕಾರಿಗಳು ಮತ್ತು ಪ್ರಮುಖರು ಸೇರಿ ತಂತ್ರಿಗಳನ್ನು ಸ್ವಾಗತಿಸಿದರು.
ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆದ್ಲ ನರಸಿಂಹ ಭಟ್, ಬ್ರಹ್ಮ ಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಎನ್. ವಿಶ್ವನಾಥ ರೈ, ಅಧ್ಯಕ್ಷ ಮಾಧವ ಗೌಡ ಕುಯಿಂತೋಡು, ಶ್ರೀ ಉಳ್ಳಾಕುಲು ಸೇವಾ ಸಮಿತಿ ಅಧ್ಯಕ್ಷ ಲಕ್ಷ್ಮಣ ಗೌಡ ಬೇರಿಕೆ, ಆಡಳಿತ ಸಮಿತಿ ವಿಶ್ವಸ್ಥರಾದ ತಂಟೆಪ್ಪಾಡಿ ಲಿಂಗಪ್ಪ ಗೌಡ, ಜಗನ್ನಾಥ ರೈ ಕಳಂಜಗುತ್ತು, ಮೂರು ಸಮಿತಿಗಳ ಪ್ರಧಾನ ಕಾರ್ಯದರ್ಶಿ ಪಿ.ಜಿ.ಎಸ್.ಎನ್. ಪ್ರಸಾದ್, ಆಡಳಿತ ಸಮಿತಿ ಕೋಶಾಧಿಕಾರಿ ಗಣೇಶ್ ಮುದ್ದಾಜೆ, ಬ್ರಹ್ಮ ಕಲಶೋತ್ಸವ ಸಮಿತಿ ಕಾರ್ಯದರ್ಶಿ ಚಿದಾನಂದ ಗೌಡ ಬಾಳಿಲ, ಉಪಾಧ್ಯಕ್ಷ ರುಕ್ಮಯ್ಯ ಗೌಡ ಕಳಂಜ, ಸಂಚಾಲಕ ರಾಮಚಂದ್ರ ರಾವ್ ಸೇರಿದಂತೆ ಸಮಿತಿಗಳ ಸಂಚಾಲಕರು, ಸದಸ್ಯರು, ಊರವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…
ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…
ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…
ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…
ಎತ್ತಿನಹೊಳೆ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮೊದಲ…
ಅರಣ್ಯ ಭೂಮಿ ಒತ್ತುವರಿ ಮಾಡಿದರೆ ತೆರವು ಮಾಡಬೇಕಾಗುತ್ತದೆ. ಬೇಲಿ ಹಾಕುವುದರಿಂದ ಅರಣ್ಯ ಭೂಮಿ…