ಅಯ್ಯನಕಟ್ಟೆ ಜಾತ್ರೆಗೆ ವೈಭವದ ಚಾಲನೆ

January 29, 2020
5:54 AM

ಸುಳ್ಯ: ಹಲವು ದಶಕಗಳ ಬಳಿಕ ಇತಿಹಾಸ ಪ್ರಸಿದ್ಧ ಅಯ್ಯನಕಟ್ಟೆ ಜಾತ್ರೆಗೆ ಮತ್ತೆ ವೈಭವದ ಚಾಲನೆ ನೀಡಲಾಗಿದೆ. ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಂಪನ್ನಗೊಂಡ ಬಳಿಕ ಮಂಗಳವಾರ ಜಾತ್ರೋತ್ಸವ ಆರಂಭಗೊಂಡಿತು.

ಗತ ವೈಭವವನ್ನು ನೆನೆಪಿಸಿ ಮತ್ತೆ ಆರಂಭಗೊಂಡ ಜಾತ್ರೋತ್ಸವಕ್ಕೆ ನಾಡಿನ ವಿವಿಧ ಭಾಗಗಳಿಂದ ಸಾವಿರಾರು ಮಂದಿ ಆಗಮಿಸಿದ್ದರು. ಮೂರು ದಿನಗಳ ಕಾಲ ಅಯ್ಯನಕಟ್ಟೆ ಜಾತ್ರೋತ್ಸವ ನಡೆಯಲಿದೆ.

ಜ. 28ರಂದು ಬೆಳಗಿನ ಜಾವ ಐದಕ್ಕೆ ಮೂರುಕಲ್ಲಡ್ಕದಿಂದ ಶ್ರೀ ಇಷ್ಟದೇವತಾ ಉಳ್ಳಾಕುಲು ಸಪರಿವಾರ ಹಾಗೂ ತೋಟದಮೂಲೆಯಿಂದ ರುದ್ರಚಾಮುಂಡಿ ದೈವಗಳ ಕಿರುವಾಲು ಹೊರಟು ಬೆಳಿಗ್ಗೆ ಏಳಕ್ಕೆ ಕಲ್ಲಮಾಡದಲ್ಲಿ ಉಳ್ಳಾಕುಲು ಶ್ರೀಮುಡಿ ದೈವಗಳ ನೇಮ ನಡೆಯಿತು‌.

 

ಜ.29 ರಂದು ಬೆಳಗ್ಗೆ 7.30ಕ್ಕೆ ತಂಟೆಪ್ಪಾಡಿಯಿಂದ ಶಿರಾಡಿ ದೈವದ ಭಂಡಾರ, ಬೆಳಗ್ಗೆ 8.00ಕ್ಕೆ ಕಳಂಜ ಗುತ್ತಿನಿಂದ ಧೂಮಾವತಿ ದೈವದ ಭಂಡಾರ, ಬೆಳಗ್ಗೆ 8.30ಕ್ಕೆ ಬಾಳಿಲ ಮೂರುಕಲ್ಲಡ್ಕ ದೈವಸ್ಥಾನದಿಂದ ಕೊಡಮಣಿತ್ತಾಯ ದೈವದ ಭಂಡಾರ ಹೊರಡಲಿದೆ ಬೆಳಗ್ಗೆ 10ಕ್ಕೆ ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಲಿದೆ. ಅಪರಾಹ್ನ 2ರಿಂದ ಕಲ್ಲಮಾಡದ ಬಳಿ ಶಿರಾಡಿ, ಧೂಮಾವತಿ ಹಾಗೂ ಕೊಡಮಣಿತ್ತಾಯ ದೈವಗಳ ನೇಮ ನಡೆಯಲಿದೆ. ಜ. 30ರಂದು ಬೆಳಗ್ಗೆ 10 ಗಂಟೆಗೆ ತಂಟೆಪ್ಪಾಡಿಯಿಂದ ಶಿರಾಡಿ ದೈವದ ಭಂಡಾರ ಹೊರಟು ಅಪರಾಹ್ನ 2.30ಕ್ಕೆ ಕಲ್ಲಮಾಡದ ಬಳಿ ಶಿರಾಡಿ ದೈವದ ದೊಂಪದ ಬಲಿ ನೇಮೋತ್ಸವ, ಸಂಜೆ ಐದಕ್ಕೆ ಕಲ್ಲಮಾಡದಿಂದ ತಂಬಿನಮಕ್ಕಿವರೆಗೆ ಮಾರಿ ಹೊರಡಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ
October 11, 2026
10:37 AM
by: ದ ರೂರಲ್ ಮಿರರ್.ಕಾಂ
ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ
October 9, 2026
7:53 AM
by: ದ ರೂರಲ್ ಮಿರರ್.ಕಾಂ
ಖ್ಯಾತಿ-ಪ್ರಚಾರವಲ್ಲ, ಸಮಾಜ ಪರಿವರ್ತನೆಯೇ ಚಾತುರ್ಮಾಸ್ಯದ ಗುರಿ
September 27, 2026
10:44 PM
by: ದ ರೂರಲ್ ಮಿರರ್.ಕಾಂ
ದೇಶಿ ಗೋವಿನ ಹಾಲು, ತುಪ್ಪದ ಮಹತ್ವದ ಪ್ರತಿಪಾದನೆ – ಪಾರಂಪರಿಕ ಆಹಾರ ಪದ್ಧತಿಗೆ ಒತ್ತು
September 26, 2026
7:36 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror