ಸುಳ್ಯ: ಹಲವು ದಶಕಗಳ ಬಳಿಕ ಇತಿಹಾಸ ಪ್ರಸಿದ್ಧ ಅಯ್ಯನಕಟ್ಟೆ ಜಾತ್ರೆಗೆ ಮತ್ತೆ ವೈಭವದ ಚಾಲನೆ ನೀಡಲಾಗಿದೆ. ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಂಪನ್ನಗೊಂಡ ಬಳಿಕ ಮಂಗಳವಾರ ಜಾತ್ರೋತ್ಸವ ಆರಂಭಗೊಂಡಿತು.
ಗತ ವೈಭವವನ್ನು ನೆನೆಪಿಸಿ ಮತ್ತೆ ಆರಂಭಗೊಂಡ ಜಾತ್ರೋತ್ಸವಕ್ಕೆ ನಾಡಿನ ವಿವಿಧ ಭಾಗಗಳಿಂದ ಸಾವಿರಾರು ಮಂದಿ ಆಗಮಿಸಿದ್ದರು. ಮೂರು ದಿನಗಳ ಕಾಲ ಅಯ್ಯನಕಟ್ಟೆ ಜಾತ್ರೋತ್ಸವ ನಡೆಯಲಿದೆ.
ಜ. 28ರಂದು ಬೆಳಗಿನ ಜಾವ ಐದಕ್ಕೆ ಮೂರುಕಲ್ಲಡ್ಕದಿಂದ ಶ್ರೀ ಇಷ್ಟದೇವತಾ ಉಳ್ಳಾಕುಲು ಸಪರಿವಾರ ಹಾಗೂ ತೋಟದಮೂಲೆಯಿಂದ ರುದ್ರಚಾಮುಂಡಿ ದೈವಗಳ ಕಿರುವಾಲು ಹೊರಟು ಬೆಳಿಗ್ಗೆ ಏಳಕ್ಕೆ ಕಲ್ಲಮಾಡದಲ್ಲಿ ಉಳ್ಳಾಕುಲು ಶ್ರೀಮುಡಿ ದೈವಗಳ ನೇಮ ನಡೆಯಿತು.
ಜ.29 ರಂದು ಬೆಳಗ್ಗೆ 7.30ಕ್ಕೆ ತಂಟೆಪ್ಪಾಡಿಯಿಂದ ಶಿರಾಡಿ ದೈವದ ಭಂಡಾರ, ಬೆಳಗ್ಗೆ 8.00ಕ್ಕೆ ಕಳಂಜ ಗುತ್ತಿನಿಂದ ಧೂಮಾವತಿ ದೈವದ ಭಂಡಾರ, ಬೆಳಗ್ಗೆ 8.30ಕ್ಕೆ ಬಾಳಿಲ ಮೂರುಕಲ್ಲಡ್ಕ ದೈವಸ್ಥಾನದಿಂದ ಕೊಡಮಣಿತ್ತಾಯ ದೈವದ ಭಂಡಾರ ಹೊರಡಲಿದೆ ಬೆಳಗ್ಗೆ 10ಕ್ಕೆ ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಲಿದೆ. ಅಪರಾಹ್ನ 2ರಿಂದ ಕಲ್ಲಮಾಡದ ಬಳಿ ಶಿರಾಡಿ, ಧೂಮಾವತಿ ಹಾಗೂ ಕೊಡಮಣಿತ್ತಾಯ ದೈವಗಳ ನೇಮ ನಡೆಯಲಿದೆ. ಜ. 30ರಂದು ಬೆಳಗ್ಗೆ 10 ಗಂಟೆಗೆ ತಂಟೆಪ್ಪಾಡಿಯಿಂದ ಶಿರಾಡಿ ದೈವದ ಭಂಡಾರ ಹೊರಟು ಅಪರಾಹ್ನ 2.30ಕ್ಕೆ ಕಲ್ಲಮಾಡದ ಬಳಿ ಶಿರಾಡಿ ದೈವದ ದೊಂಪದ ಬಲಿ ನೇಮೋತ್ಸವ, ಸಂಜೆ ಐದಕ್ಕೆ ಕಲ್ಲಮಾಡದಿಂದ ತಂಬಿನಮಕ್ಕಿವರೆಗೆ ಮಾರಿ ಹೊರಡಲಿದೆ.
ಮುಂಗಾರು ಮತ್ತಷ್ಟು ದುರ್ಬಲಗೊಳ್ಳತ್ತಿದ್ದು, ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ ತಿಂಗಳಲ್ಲಿ…
ದ ರೂರಲ್ ಮಿರರ್.ಕಾಂ ನಲ್ಲಿ "ಹೊಸರುಚಿ" ಯ ಮೂಲಕ ಹಲಸು ಅಡುಗೆಯ ಮೂಲಕ…
ತುಳು ಸಾಹಿತ್ಯ ಅಕಾಡೆಮಿ ಹಾಗೂ ಅಖಿಲ ಭಾರತ ಮುಂಡಾಲ ಯುವ ವೇದಿಕೆಯ ವತಿಯಿಂದ…
ವಿಶ್ವದಲ್ಲಿ ಅಡಿಕೆ ಉತ್ಪಾದನೆ ಆಗುವ ಎಲ್ಲಾ ರಾಷ್ಟ್ರಗಳಲ್ಲಿ ಅದರ ಬಳಕೆಯೂ ಆಗುತ್ತಿದೆ.ಇದರೊಂದಿಗೆ ಈ…
ಪ್ಲಾಸ್ಟಿಕ್ ಮಾಲಿನ್ಯವು ಪರಿಸರ ವಿನಾಶದ ಅಂಶಗಳಲ್ಲಿ ಒಂದಾಗಿದೆ. ನಮ್ಮ ಸಾಗರಗಳು ಮತ್ತು ಕರಾವಳಿಗಳಲ್ಲಿ…
ವಿಯೆಟ್ನಾಂ 2030 ರ ವೇಳೆಗೆ ಕೃಷಿಯಲ್ಲಿ ಹೊರಸೂಸುವ ಮೀಥೇನ್ ಅನ್ನು 30% ರಷ್ಟು…