ಸುಳ್ಯ : ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಮತ್ತು ಸಪರಿವಾರ ದೈವಸ್ಥಾನದ ಬ್ರಹ್ಮ ಕಲಶೋತ್ಸವ ಮತ್ತು ಅಯ್ಯನಕಟ್ಟೆ ಜಾತ್ರೋತ್ಸವಕ್ಕೆ ಹಸಿರು ಕಾಣಿಕೆ ಸಮರ್ಪಣೆ ಶನಿವಾರ ಸಂಜೆ ನಡೆಯಿತು. ಬಾಳಿಲದಿಂದ ಆರಂಭಗೊಂಡ ಹಸಿರು ಕಾಣಿಕೆ ಮೆರವಣಿಗೆ ಕಲ್ಲಮಾಡದವರೆಗೆ ನಡೆಯಿತು. ನೂರಾರು ವಾಹನಗಳಲ್ಲಿ, ಮತ್ತು ಕಾಲ್ನಡಿಗೆಯಲ್ಲಿ ಮೆರವಣಿಗೆಯಲ್ಲಿ ಸಾಗಿ ಬಂದು ಹಸಿರುವಾಣಿ ಸಮರ್ಪಿಸಿದರು. ಚೆಂಡೆ ವಾದ್ಯ ಮೇಳಗಳು ಮೆರವಣಿಗೆಗೆ ಸಾತ್ ನೀಡಿದವು.
ವಿಶ್ವಸ್ಥ ಸಮಿತಿ ಗೌರವಾಧ್ಯಕ್ಷ ರಾಮಚಂದ್ರ ರಾವ್ ತೆಂಗಿನಕಾಯಿ ಒಡೆಯುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ವಿವಿಧ ಸಮಿತಿಗಳ ಪದಾಧಿಕಾರಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel