ಅಯ್ಯನಕಟ್ಟೆ ಜಾತ್ರೆ: ಧರ್ಮ ಬದುಕಿಗೆ ಸಂವಿಧಾನವಿದ್ದಂತೆ – ಧಾರ್ಮಿಕ ಸಭೆಯಲ್ಲಿ ಒಡಿಯೂರು ಶ್ರೀ

January 28, 2020
11:22 AM

ಸುಳ್ಯ: ಧರ್ಮದಲ್ಲಿ ನಮ್ಮ ಸಂಸ್ಕೃತಿ ಅಡಗಿದೆ. ಅದು ಬದುಕಿಗೆ ಸಂವಿಧಾನವಿದ್ದಂತೆ. ಸರ್ವರ ಅಭ್ಯುದಯಕ್ಕಾಗಿ ಧರ್ಮ ಹುಟ್ಟಿದೆ ಎಂದು ಶ್ರೀಕ್ಷೇತ್ರ ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಅವರು ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಮತ್ತು ಸಪರಿವಾರ ದೈವಗಳ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು. ಭಜನೆ ಮನಸಿಗೆ ಶಾಂತಿ ನೆಮ್ಮದಿಯನ್ನು ನೀಡುವುದರೊಂದಿಗೆ ಬದುಕಿಗೆ ಮಾರ್ಗಸೂಚಿಯನ್ನು ನೀಡುತ್ತದೆ ಎಂದು ಅವರು ಹೇಳಿದರು.

ಶಾಸಕ ಎಸ್‌.ಅಂಗಾರ, ವಾಸ್ತುಶಿಲ್ಪಿ ಎಸ್.ಎಂ. ಪ್ರಸಾದ ಮುನಿಯಂಗಳ ಮುಖ್ಯ ಅತಿಥಿಗಳಾಗಿದ್ದರು. ಜಿ.ಪಂ. ಸದಸ್ಯ ಹಾಗೂ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಎಸ್.ಎನ್. ಮನ್ಮಥ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕ ಸತೀಶ್ ಶೆಟ್ಟಿ, ಕೋಟೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ನಿಕಟಪೂರ್ವ ಧರ್ಮದರ್ಶಿ ಕೆದ್ಲ ನಾರಾಯಣ ಭಟ್, ಉದ್ಯಮಿ ವಿನೋದ ಕುಮಾರ್ ಶೆಟ್ಟಿ ಬೆಂಗಳೂರು ಅತಿಥಿಗಳಾಗಿ ಭಾಗವಹಿಸಿದ್ದರು. ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಸೇವಾ ಸಮಿತಿ ಗೌರವಾಧ್ಯಕ್ಷ ಬಾಳಿಲ ಸುಬ್ರಾಯ ಅಡಿಕೆಹಿತ್ಲು, ಮೂರು ಸಮಿತಿಗಳ ಪ್ರಧಾನ ಕಾರ್ಯದರ್ಶಿ ಪಿ.ಜಿ.ಎಸ್.ಎನ್. ಪ್ರಸಾದ್, ಬ್ರಹ್ಮ ಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಎನ್. ವಿಶ್ವನಾಥ ರೈ, ಅಧ್ಯಕ್ಷ ಮಾಧವ ಗೌಡ ಕುಯಿಂತೋಡು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶ್ರೀ ಉಳ್ಳಾಕುಲು ಸೇವಾ ಸಮಿತಿ ಅಧ್ಯಕ್ಷ ಲಕ್ಷ್ಮಣ ಗೌಡ ಬೇರಿಕೆ ಮತ್ತು ದಮಯಂತಿ ದಂಪತಿಗಳನ್ನು ಒಡಿಯೂರು ಶ್ರೀಗಳು ಸನ್ಮಾನಿಸಿದರು. ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಎ.ಎಂ. ಸುಧಾಕರ ರೈ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸುಜನ ಕೆ.ವಿ. ಪ್ರಾರ್ಥಿಸಿದರು. ಅಧ್ಯಾಪಕರುಗಳಾದ ಜಗದೀಶ್ ಮುಂಡುಗಾರು, ಯಶೋಧರ ಕಳಂಜ ಮತ್ತು ನವ್ಯ ಅಯ್ಯನಕಟ್ಟೆ ಕಾರ್ಯಕ್ರಮ ನಿರೂಪಿಸಿದರು. ಜಿ.ಪಂ. ಸದಸ್ಯೆ ಪುಷ್ಪಾವತಿ ಬಾಳಿಲ ವಂದಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಖ್ಯಾತಿ-ಪ್ರಚಾರವಲ್ಲ, ಸಮಾಜ ಪರಿವರ್ತನೆಯೇ ಚಾತುರ್ಮಾಸ್ಯದ ಗುರಿ
September 27, 2026
10:44 PM
by: ದ ರೂರಲ್ ಮಿರರ್.ಕಾಂ
ದೇಶಿ ಗೋವಿನ ಹಾಲು, ತುಪ್ಪದ ಮಹತ್ವದ ಪ್ರತಿಪಾದನೆ – ಪಾರಂಪರಿಕ ಆಹಾರ ಪದ್ಧತಿಗೆ ಒತ್ತು
September 26, 2026
7:36 PM
by: ದ ರೂರಲ್ ಮಿರರ್.ಕಾಂ
ಅ.29 ರಿಂದ ನ.11 ರವರೆಗೆ ಹಾಸನಾಂಬ ಜಾತ್ರಾ ಮಹೋತ್ಸವ -12 ದಿನ ಸಾರ್ವಜನಿಕ ದರ್ಶನ
September 25, 2026
12:51 PM
by: ದ ರೂರಲ್ ಮಿರರ್.ಕಾಂ
ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ
September 14, 2026
8:21 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror