ಸುಳ್ಯ: ಧರ್ಮದಲ್ಲಿ ನಮ್ಮ ಸಂಸ್ಕೃತಿ ಅಡಗಿದೆ. ಅದು ಬದುಕಿಗೆ ಸಂವಿಧಾನವಿದ್ದಂತೆ. ಸರ್ವರ ಅಭ್ಯುದಯಕ್ಕಾಗಿ ಧರ್ಮ ಹುಟ್ಟಿದೆ ಎಂದು ಶ್ರೀಕ್ಷೇತ್ರ ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಅವರು ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಮತ್ತು ಸಪರಿವಾರ ದೈವಗಳ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು. ಭಜನೆ ಮನಸಿಗೆ ಶಾಂತಿ ನೆಮ್ಮದಿಯನ್ನು ನೀಡುವುದರೊಂದಿಗೆ ಬದುಕಿಗೆ ಮಾರ್ಗಸೂಚಿಯನ್ನು ನೀಡುತ್ತದೆ ಎಂದು ಅವರು ಹೇಳಿದರು.
ಶಾಸಕ ಎಸ್.ಅಂಗಾರ, ವಾಸ್ತುಶಿಲ್ಪಿ ಎಸ್.ಎಂ. ಪ್ರಸಾದ ಮುನಿಯಂಗಳ ಮುಖ್ಯ ಅತಿಥಿಗಳಾಗಿದ್ದರು. ಜಿ.ಪಂ. ಸದಸ್ಯ ಹಾಗೂ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಎಸ್.ಎನ್. ಮನ್ಮಥ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕ ಸತೀಶ್ ಶೆಟ್ಟಿ, ಕೋಟೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ನಿಕಟಪೂರ್ವ ಧರ್ಮದರ್ಶಿ ಕೆದ್ಲ ನಾರಾಯಣ ಭಟ್, ಉದ್ಯಮಿ ವಿನೋದ ಕುಮಾರ್ ಶೆಟ್ಟಿ ಬೆಂಗಳೂರು ಅತಿಥಿಗಳಾಗಿ ಭಾಗವಹಿಸಿದ್ದರು. ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಸೇವಾ ಸಮಿತಿ ಗೌರವಾಧ್ಯಕ್ಷ ಬಾಳಿಲ ಸುಬ್ರಾಯ ಅಡಿಕೆಹಿತ್ಲು, ಮೂರು ಸಮಿತಿಗಳ ಪ್ರಧಾನ ಕಾರ್ಯದರ್ಶಿ ಪಿ.ಜಿ.ಎಸ್.ಎನ್. ಪ್ರಸಾದ್, ಬ್ರಹ್ಮ ಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಎನ್. ವಿಶ್ವನಾಥ ರೈ, ಅಧ್ಯಕ್ಷ ಮಾಧವ ಗೌಡ ಕುಯಿಂತೋಡು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶ್ರೀ ಉಳ್ಳಾಕುಲು ಸೇವಾ ಸಮಿತಿ ಅಧ್ಯಕ್ಷ ಲಕ್ಷ್ಮಣ ಗೌಡ ಬೇರಿಕೆ ಮತ್ತು ದಮಯಂತಿ ದಂಪತಿಗಳನ್ನು ಒಡಿಯೂರು ಶ್ರೀಗಳು ಸನ್ಮಾನಿಸಿದರು. ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಎ.ಎಂ. ಸುಧಾಕರ ರೈ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸುಜನ ಕೆ.ವಿ. ಪ್ರಾರ್ಥಿಸಿದರು. ಅಧ್ಯಾಪಕರುಗಳಾದ ಜಗದೀಶ್ ಮುಂಡುಗಾರು, ಯಶೋಧರ ಕಳಂಜ ಮತ್ತು ನವ್ಯ ಅಯ್ಯನಕಟ್ಟೆ ಕಾರ್ಯಕ್ರಮ ನಿರೂಪಿಸಿದರು. ಜಿ.ಪಂ. ಸದಸ್ಯೆ ಪುಷ್ಪಾವತಿ ಬಾಳಿಲ ವಂದಿಸಿದರು.
ಕಳೆದ ಮೂರು ವರ್ಷಗಳಿಂದ ಕಾಡಾನೆ ದಾಳಿಗೆ ಒಟ್ಟು 129 ಮಂದಿ ರೈತರು ಬಲಿಯಾಗಿದ್ದಾರೆ.…
ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಆಗಸ್ಟ್ 15ರಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಈಗಿನಂತೆ…
ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…
ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…
ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…
ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…