ಸುಳ್ಯ: ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಸ್ಥಾನದಲ್ಲಿ ಪ್ರತಿಷ್ಠೆ ನಡೆಯಿತು.
ಜ. 27ರಂದು ಮೂರುಕಲ್ಲಡ್ಕದಲ್ಲಿ ಪೂ.9.50ರ ಮೀನ ಲಗ್ನದ ಮುಹೂರ್ತದಲ್ಲಿ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಪ್ರತಿಷ್ಠೆ ನಡೆಯಿತು. ಕಲ್ಲಮಾಡದ ಶುದ್ಧಿ ಕಲಶ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.
ದೈವಸ್ಥಾನದಲ್ಲಿ 30ರವರೆಗೆ ಅಯ್ಯನಕಟ್ಟೆ ಜಾತ್ರೆ ನಡೆಯಲಿದೆ. ಜ. 28ರಂದು ಬೆಳಗಿನ ಜಾವ 5.00ಕ್ಕೆ ಮೂರುಕಲ್ಲಡ್ಕದಿಂದ ಶ್ರೀ ಇಷ್ಟದೇವತಾ ಉಳ್ಳಾಕುಲು ಸಪರಿವಾರ ಹಾಗೂ ತೋಟದಮೂಲೆಯಿಂದ ರುದ್ರಚಾಮುಂಡಿ ದೈವಗಳ ಕಿರುವಾಲು ಹೊರಟು ಬೆಳಿಗ್ಗೆ 7 ಕ್ಕೆ ಕಲ್ಲಮಾಡದಲ್ಲಿ ಉಳ್ಳಾಕುಲು ಶ್ರೀಮುಡಿ ದೈವಗಳ ನೇಮ, ಗಂಧಪ್ರಸಾದ ವಿತರಣೆ ನಡೆಯಿತು.
ಜ. 26ರಂದು ಬೆಳಗ್ಗೆ 7.30ಕ್ಕೆ ತಂಟೆಪ್ಪಾಡಿಯಿಂದ ಶಿರಾಡಿ ದೈವದ ಭಂಡಾರ, ಬೆಳಗ್ಗೆ 8 ಕ್ಕೆ ಕಳಂಜ ಗುತ್ತಿನಿಂದ ಧೂಮಾವತಿ ದೈವದ ಭಂಡಾರ, ಬೆಳಗ್ಗೆ 8.30ಕ್ಕೆ ಬಾಳಿಲ ಮೂರುಕಲ್ಲಡ್ಕ ದೈವಸ್ಥಾನದಿಂದ ಕೊಡಮಣಿತ್ತಾಯ ದೈವದ ಭಂಡಾರ ಹೊರಡಲಿದೆ ಬೆಳಗ್ಗೆ 10ಕ್ಕೆ ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಲಿದೆ. ಅಪರಾಹ್ನ 2.00ರಿಂದ ಕಲ್ಲಮಾಡದ ಬಳಿ ಶಿರಾಡಿ, ಧೂಮಾವತಿ ಹಾಗೂ ಕೊಡಮಣಿತ್ತಾಯ ದೈವಗಳ ನೇಮ ನಡೆಯಲಿದೆ. ಜ. 30ರಂದು ಬೆಳಗ್ಗೆ 10ಗಂಟೆಗೆ ತಂಟೆಪ್ಪಾಡಿಯಿಂದ ಶಿರಾಡಿ ದೈವದ ಭಂಡಾರ ಹೊರಟು ಅಪರಾಹ್ನ 2.30ಕ್ಕೆ ಕಲ್ಲಮಾಡದ ಬಳಿ ಶಿರಾಡಿ ದೈವದ ದೊಂಪದ ಬಲಿ ನೇಮೋತ್ಸವ, ಸಂಜೆ 5ಕ್ಕೆ ಕಲ್ಲಮಾಡದಿಂದ ತಂಬಿನಮಕ್ಕಿವರೆಗೆ ಮಾರಿ ಹೊರಡಲಿದೆ.
ಅಡಿಕೆಯ ಔಷಧೀಯ ಗುಣಗಳು ಹಲವಾರು ಇವೆ. ಅಡಿಕೆಯ ಚೊಗರಿನಿಂದ ತಯಾರು ಮಾಡುವ ಸೋಪು…
ಮಂಗಳೂರಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ 2025ನೇ ಸಾಲಿನ ಇಂಡಿಯನ್ ಅಕಾಡೆಮಿ ಆಫ್ ಓರಲ್…
ಕೃಷಿಗಾಗಿ, ಕೃಷಿ ಉಳಿಸುವುದಕ್ಕಾಗಿ ಸುರಂಗ ಕೊರೆದು ನೀರು ಹರಿಸಿದ ವಿಶೇಷ ಸಾಧನೆಯನ್ನು ಮಾಡಿದ್ದಾರೆ…
ದೇಶಾದ್ಯಂತ ಅಳಿವಿನಂಚಿಗೆ ತಲುಪಿರುವ ಗುಬ್ಬಚ್ಚಿ ಸಂಕುಲದ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು…
ಸ್ವಾವಲಂಬನೆಯ ಜೀವನ ಕಟ್ಟಿಕೊಳ್ಳುತ್ತಿರುವ ಅನೇಕ ಮಹಿಳಾ ಉದ್ಯಮಿದಾರರಿಗೆ ಎನ್‍ಆರ್ ಎಲ್‍ಎಮ್ ಯೋಜನೆಯು ಸ್ಪೂರ್ತಿಯ…
ಕೊಡಗು ಜಿಲ್ಲೆಯಲ್ಲಿ ಅಕ್ರಮ ಲಾಟರಿ, ಇತರೆ ರಾಜ್ಯದ ಲಾಟರಿಗಳು, ಮಟ್ಕಾಗೆ ಪೂರ್ಣ ಪ್ರಮಾಣದಲ್ಲಿ…