ಸುಳ್ಯ: ಸುಳ್ಯ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ-2019 ಇದರ ಉದ್ಘಾಟನಾ ಕಾರ್ಯಕ್ರಮ ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ವಠಾರದಲ್ಲಿ ನಡೆಯಿತು.
ಜಿ.ಪಂ.ಸದಸ್ಯ ಹರೀಶ್ ಕಂಜಿಪಿಲಿ ಉದ್ಘಾಟಿಸಿದರು. ತಾ.ಪಂ.ಉಪಾಧ್ಯಕ್ಷೆ ಶುಭದಾ ರೈ ಕಾರ್ಯಕ್ರಮ ಅಧ್ಯಕ್ಷ ತೆ ವಹಿಸಿದ್ದರು.
ಜಿ.ಪಂ.ಸದಸ್ಯರಾದ ಪುಷ್ಪಾವತಿ ಬಾಳಿಲ, ಆಶಾ ತಿಮ್ಮಪ್ಪ, ತಾ.ಪಂ.ಸದಸ್ಯೆ ಪುಷ್ಪಾ ಮೇದಪ್ಪ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಲಕ್ಷ್ಮೀಶ್ ರೈ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶ್ರೀಧರ ಗೌಡ, ಅರಂತೋಡು ಕಾಲೇಜು ಸಂಚಾಲಕ ಕೆ.ಆರ್.ಗಂಗಾಧರ್, ಕಾಲೇಜು ಪ್ರಾಂಶುಪಾಲ ರಮೇಶ್, ಪ್ರೌಢಶಾಲಾ ವಿಭಾಗ ಮುಖ್ಯೋಪಾಧ್ಯಾಯ ಆನಂದ ವೈ.ಕೆ., ದೈ.ಶಿ.ಶಿಕ್ಷಕರ ಸಂಘದ ಅಧ್ಯಕ್ಷ ಸೂಪಿ ಪೆರಾಜೆ, ಪ್ರತಿಭಾ ಕಾರಂಜಿ ನೋಡೆಲ್ ಅಧಿಕಾರಿ ಡಾ. ಸುಂದರ ಕೇನಾಜೆ, ವೇದಿಕೆಯಲ್ಲಿ ದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ. ಮಹಾದೇವ ಪ್ರಾಸ್ತಾವಿಕ ಮಾತನಾಡಿದರು. ಕ್ಷೇತ್ರ ಸಮನ್ವಯಾಧಿಕಾರಿ ವೀಣಾ ಎಂ.ಟಿ. ಸ್ವಾಗತಿಸಿದರು. ಕಿಶೋರ್ ಕಿರ್ಲಾಯ ಕಾರ್ಯಕ್ರಮ ನಿರೂಪಿಸಿದರು.
ಎರಡು ದಿನಗಳ ಕಾರ್ಯಕ್ರಮ ಶುಕ್ರವಾರ ಸಮಾಪನಗೊಳ್ಳಲಿದೆ.