ಸುಳ್ಯ: ಸುಳ್ಯ ಸಮೀಪದ ಅರಂಬೂರಿನಲ್ಲಿ ಭಾನುವಾರ ಬೆಳಗ್ಗೆ ಕಾರು ಹಾಗೂ ಬಸ್ಸು ಡಿಕ್ಕಿಯಾಗಿ 3 ಮಂದಿ ಸಾವನ್ನಪ್ಪಿದ್ದಾರೆ.
Advertisement
ಸುಳ್ಯದ ಅರಂಬೂರು ಬಳಿ ರಿಕ್ಷಾವನ್ನು ಹಿಂದಿಕ್ಕುವ ಯತ್ನದಲ್ಲಿದ್ದ ಕಾರು ಹಾಗೂ ಬಸ್ಸು ಢಿಕ್ಕಿಯಾಗಿದೆ. ಕಾರಿನಲ್ಲಿದ್ದ ರಾಮನಗರ ಜಿಲ್ಲೆಯ ಚೆನ್ನಪಟ್ಟಣ ತಾಲೂಕಿನ ಕೋಲೂರು ಮುದುಗೆರೆ ನಿವಾಸಿ ಮಂಜುಳಾ ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಮೃತಪಟ್ಟರು. ಗಂಭೀರ ಗಾಯಗೊಂಡಿದ್ದ ಸೋಮಣ್ಣ ಮತ್ತು ನಾಗೇಂದ್ರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
Advertisement
ಮಂಗಳೂರಿನಿಂದ ಮಡಿಕೇರಿ ಮಾರ್ಗವಾಗಿ ಕೊಳ್ಳೆಗಾಲಕ್ಕೆ ತೆರಳುತ್ತಿದ್ದ ಕೆ ಎಸ್ ಆರ್ ಟಿಸಿ ಬಸ್ಸು ಹಾಗೂ ರಾಮನಗರದಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರು ಡಿಕ್ಕಿಯಾಗಿದೆ. ಮೃತರೆಲ್ಲರೂ ರಾಮನಗರ ಜಿಲ್ಲೆಯ ಚೆನ್ನಪಟ್ಟಣ ತಾಲೂಕಿನ ಕೋಲೂರು ಮುದುಗೆರೆಯವರು. ಕಾರಿನಲ್ಲಿ 12 ವರ್ಷ ಪ್ರಾಯದ ತನ್ಮಯಿ ಹಾಗೂ ಇನ್ನೊಬ್ಬ ಮಹಿಳೆ ಜಯಶೀಲ ಅವರಿಗೆ ಗಾಯವಾಗಿದೆ. ಅಪಘಾತವಾದ ತಕ್ಷಣ ಸ್ಥಳೀಯರು ಸರಕಾರಿ ಆಸ್ಪತ್ರೆಗೆ ಕರೆತಂದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement