ಸುಳ್ಯ: ಅರಂಬೂರು ಎಂಬಲ್ಲಿ ಪಯಸ್ವಿನಿ ನದಿಗೆ ಸೇತುವೆ ಕಟ್ಟಲಾಗುತ್ತಿದೆ. ಒಂದಲ್ಲ, ಎರಡಲ್ಲ ಮೂರು ವರ್ಷದ ಹಿಂದೆ 4.90 ಕೋಟಿ ರೂಪಾಯಿ ವೆಚ್ಚದಲ್ಲಿ. ವಿಷಾದ ಎಂದರೆ ಇದುವರೆಗೂ ಸೇತುವೆ ಕಾಮಗಾರಿ ಪೂರ್ತಿಯಾಗಿಲ್ಲ. ಅರ್ಧಂಬರ್ಧ ಕೆಲಸವಾಗಿದೆ. ಹೀಗಾಗಿ ಜನರು ಅಸಮಾಧಾನಗೊಂಡಿದ್ದು ಅಕ್ಟೋಬರ್ ವೇಳೆಗೆ ಕಾಮಗಾರಿ ಆರಂಭವಾಗದೇ ಇದ್ದರೆ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.
ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಅರಂಬೂರು ಎಂಬಲ್ಲಿ ಪಯಸ್ವಿನಿ ನದಿಗೆ ಸೇತುವೆ ನಿರ್ಮಾಣ ಕಾರ್ಯ ನಡೆಯುತ್ತಿದೆ.ಈ ಸೇತುವೆ ಕಾಮಗಾರಿ ಆರಂಭವಾಗಿ ಇದೀಗ ಕೆಲ ಸಮಯಗಳಿಂದ ಸ್ಥಗಿತವಾಗಿದೆ. 4.90 ಕೋಟಿ ಅನುದಾನ ಬಿಡುಗಡೆಯಾಗಿದೆ. ಸೇತುವೆ ಕಾಮಗಾರಿ ಕುಂಟುತ್ತಾ ಸಾಗಿದ್ದು ಈ ಭಾಗದ ಜನರಿಗೆ ನಿರಾಸೆಯಾಗಿದೆ. ಹಲವು ವರ್ಷಗಳ ಬೇಡಿಕೆ ಇನ್ನೂ ಈಡೇರುವ ಲಕ್ಷಣಗಳು ಕಾಣಿಸುತ್ತಿಲ್ಲ. ಕಾಮಗಾರಿ ಕೈಗೆತ್ತಿಗೊಂಡ ಗುತ್ತಿಗೆದಾರರು, ಲೋಕೋಪಯೋಗಿ ಇಲಾಖೆ, ಅಧಿಕಾರಿಗಳು , ಜನಪ್ರತಿನಿಧಿಗಳೂ ಮಾತನಾಡುತ್ತಿಲ್ಲ. ಹೀಗಾಗಿ 3 ವರ್ಷ ಕಳದೆರೂ ಕಾಮಗಾರಿ ಪೂರ್ತಿಯಾಗಿಲ್ಲ. ಹೀಗಾಗಿ ಇದೀಗ ಸಾರ್ವಜನಿಕರು ಇಲಾಖೆಗಳಿಗೆ ಮನವಿ ಮಾಡಿದ್ದಾರೆ ಅಕ್ಟೋಬರ್ ವೇಳೆಗೆ ಕಾಮಗಾರಿ ಆರಂಭಿಸಿ ಡಿಸೆಂಬರ್ ಒಳಗೆ ಮುಗಿಸದೇ ಇದ್ದರೆ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದಾರೆ. ಈಗಾಗಲೇ ಇಲಾಖೆಗಳಿಗೆ ಪತ್ರವನ್ನೂ ಬರೆದಿದ್ದಾರೆ. ಹೀಗಾಗಿ ಶಾಸಕರು, ಅಧಿಕಾರಿಗಳು, ಇತರ ಜನನಾಯಕರು ಸ್ವಲ್ಪ ಗಮನಿಸಿದರೆ ಜನರಿಗೆ ಉಪಯೋಗವಾದೀತು.
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025…
ಬೆಂಗಳೂರಿನ ಯಲಹಂಕ ತಾಲ್ಲೂಕಿನ ಒಟ್ಟು 5678 ಎಕರೆ ಗುಂಟೆ ಪ್ರದೇಶವನ್ನು ಪರಿಸರ ಸಂರಕ್ಷಣೆ…
ಬೆಳೆಗಾರರಿಗೆ ತರಬೇತಿ ನೀಡಲು ತರಬೇತಿ ಕೇಂದ್ರ ಸ್ಥಾಪನೆ ಮಾಡಲಾಗುವುದು ಎಂದು ಕರ್ನಾಟಕ ಕೊಳಚೆ…