ಅರಣ್ಯ ಇಲಾಖಾ ಸಿಬಂದಿಗಳಿಂದ ಹಲ್ಲೆ ಆರೋಪ : ನಾಗರಿಕರಿಂದ ಪ್ರತಿಭಟನೆ

September 21, 2019
7:49 PM

ಸುಬ್ರಹ್ಮಣ್ಯ: ಕಡಬ ತಾಲೂಕು ಸುಬ್ರಹ್ಮಣ್ಯ ಅರಣ್ಯ ವಿಭಾಗದ ಭಾಗಿಮಲೆ ಮೀಸಲು ಅರಣ್ಯದಲ್ಲಿ ಮರ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಲೊಕೇಶ್ ಎಂಬವರ ಮೇಲೆ ಅರಣ್ಯಾಧಿಕಾರಿಗಳ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಸ್ಥರು ಹಾಗೂ ನೀತಿ ತಂಡದ ನೇತೃತ್ವದಲ್ಲಿ ಸುಬ್ರಹ್ಮಣ್ಯ ಸಮೀಪ ಕೆಂಜಳದ ಅರಣ್ಯ ಇಲಾಖೆಯ ಕಚೇರಿಯ ಮುಂದೆ  ಪ್ರತಿಭಟನೆ ನಡೆಯಿತು.

ಕೆಲವು ದಿನಗಳ ಹಿಂದೆ ಭಾಗಿಮಲೆ ಮೀಸಲು ಅರಣ್ಯದಲ್ಲಿ ಮರ ಕಳವು ನಡೆದಿತ್ತು, ಈ ಮರಗಳನ್ನು ಲೋಕೇಶ್ ಎಂಬವರು ಕಳವು ನಡೆಸಿದ್ದಾರೆಂದು ಆರೋಪಿಸಿ ಲೋಕೇಶ್ ಅವರನ್ನು ಅರಣ್ಯ ಇಲಾಖಾ ಅಧಿಕಾರಿಗಳು ಬಂಧಿಸಿ, ಅವರಿಗೆ 25ಸಾವಿರ ದಂಡ ವಿಧಿಸಿದ್ದರು. ಈ ಸಂದರ್ಭದಲ್ಲಿ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ವ್ಯಕ್ತವಾಗಿದೆ. ಹಲ್ಲೆ ಖಂಡಿಸಿ ಶನಿವಾರ  ಕೆಂಜಾಳದಲ್ಲಿ ನಾಗರಿಕರಿಂದ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯಲ್ಲಿ  ಮಾತನಾಡಿದ ನೀತಿ ತಂಡದ ಅಧ್ಯಕ್ಷರು ಹಾಗೂ ಗ್ರಾಮಸ್ಥರು, ಕೊಂಬಾರು ಗ್ರಾಮದ ಕಾಪಾರು ನಿವಾಸಿ ಲೋಕೇಶ್ ಎಂಬವರು ನಿರಾಪರಾಧಿಯಾಗಿದ್ದು ಅವರ ಮೇಲೆ ವಿನಾಃ ಕಾರಣ ಹಲ್ಲೆ ನಡೆಸಲಾಗಿದೆ, ಭಾಗಿಮಲೆ ಮೀಸಲು ಅರಣ್ಯದಲ್ಲಿ ಬೃಹತ್ ಗಾತ್ರದ ಮರ ಕಳವು ನಡೆದಿದ್ದು ಇದರ ಹಿಂದೆ ದೊಡ್ಡ ಜಾಲವಿರುವ ಬಗ್ಗೆ ಸಂಶಯವಿದೆ. ಆದರೆ ಇಲಾಖೆಯ ಅಧಿಕಾರಿಗಳು ಪ್ರಕರಣವನ್ನು ಮುಚ್ಚಿ ಹಾಕಲು ಅಮಾಯಕನ ಮೇಲೆ ದಂಡ ವಿಧಿಸಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದರು.ಲೋಕೇಶ್ ಅವರಿಗೆ ಹಲ್ಲೆ ನಡೆಸಿದ  ಅರಣ್ಯ ಅಧಿಕಾರಿಗಳನ್ನು ಕೂಡಲೇ ಕರ್ತವ್ಯದಿಂದ ಅಮಾನತು ಮಾಡುವಂತೆ ಪ್ರತಿಭಟನಾಕಾರು ಆಗ್ರಹಿಸಿದ್ದಾರೆ.

ಇದಕ್ಕೆ ಒಂದು ವಾರದ ಗಡುವನ್ನು ಪ್ರತಿಭಟನಾಕಾರರು ನೀಡಿದರು. ಇಲ್ಲದೇ ಹೋದಲ್ಲಿ ಮುಂದಿನ ಸೋಮವಾರ ಸುಬ್ರಹ್ಮಣ್ಯ ಅರಣ್ಯ ಇಲಾಖೆಯ ಕಚೇರಿಯ ಮುಂದೆ ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನು ನೀಡಿದ್ದಾರೆ. ಮಾತ್ರವಲ್ಲದೆ ಈ ಮಧ್ಯೆ ನೀತಿ ತಂಡದಿಂದ ಬೆಂಗಳೂರು ಮಾನವ ಹಕ್ಕುಗಳ ಕಚೇರಿಗೂ ದೂರು ಕೂಡ ನೀಡಲಾಗಿದೆ.

ಜಿಲ್ಲಾ ಅರಣ್ಯ ಅಧಿಕಾರಿಗಳ ಆದೇಶದಂತೆ ಸ್ಥಳಕ್ಕೆ ಬಂದ ವಲಯ ಅರಣ್ಯ ಅಧಿಕಾರಿ ಶಿವಾನಂದ  ಅವರಿಗೆ ಮನವಿ ಸಲ್ಲಿಸಲಾಗಿದೆ. ಅರಣ್ಯ ಅಧಿಕಾರಿಗಳು ಮೇಲಾಧಿಕಾರಿಗಳಿಗೆ ತಿಳಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ ನಂತರ ಪ್ರತಿಭಟನೆಯನ್ನು ಹಿಂಪಡೆಲಾಯಿತು.  ಪ್ರತಿಭಟನೆಯಲ್ಲಿ ಹೆಚ್ಚಿನ  ಗ್ರಾಮಸ್ಥರು, ತಂಡದ ಸದಸ್ಯರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ
August 21, 2026
7:49 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ
August 21, 2026
4:04 PM
by: ಸಾಯಿಶೇಖರ್ ಕರಿಕಳ
ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್
August 21, 2026
7:04 AM
by: ದ ರೂರಲ್ ಮಿರರ್.ಕಾಂ
ತೆಂಗಿನ ಮರದಿಂದ 3 ಕೋಟಿ ಜನರಿಗೆ ಬದುಕು…!, ಈಗ ₹7,038 ಕೋಟಿ ರಫ್ತು!
August 21, 2026
6:53 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror