ಸಂಪಾಜೆ: ನೆಹರು ಯುವ ಕೇಂದ್ರ ಮಡಿಕೇರಿ, ಜಿಲ್ಲಾ ಯುವ ಒಕ್ಕೂಟ ಕೊಡಗು, ತಾಲೂಕು ಯುವ ಒಕ್ಕೂಟ ಮಡಿಕೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಡಿಕೇರಿ ಮತ್ತು ವನಶ್ರೀ ಯುವಕ ಮಂಡಲಅರೇಕಲ್ಲು ಸಂಪಾಜೆ ಇವರ ಸಂಯುಕ್ತ ಆಶ್ರಯದಲ್ಲಿ ಗ್ರಾಮೀಣ ಕ್ರೀಡಾಕೂಟ ಮತ್ತು 19 ನೆ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ, ಆಟೋಟ ಸ್ಪರ್ಧೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಅರೆಕಲ್ಲಿನಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಮೊಸರು ಕುಡಿಕೆ ಮತ್ತು ರಿಂಗ್ ಎಸೆತ ಹಾಗೂ ಪುರುಷರಿಗೆ ಹಗ್ಗಜಗ್ಗಾಟ ಏರ್ಪಡಿಸಲಾಯಿತು. ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ವನಶ್ರೀ ಯುವಕ ಮಂಡಲದ ಅಧ್ಯಕ್ಷ ರಂಜಿತ್ ಕುಲಾಲ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸಂಪಾಜೆ ಗ್ರಾ.ಪಂ.ಅಧ್ಯಕ್ಷ ಕುಮಾರ್ ಚೆದ್ಕಾರ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇವಾ ಕಾರ್ಯಕರ್ತೆ ಪುಷ್ಪಾವತಿ, ನೆಹರು ಯುವ ಕೇಂದ್ರದ ರಾಷ್ಟ್ರೀಯ ಯುವ ಕಾರ್ಯಕರ್ತ ಸಂತೋಷ, ಶ್ರೀ ಚರಣ್ ಬಿ.ಜೆ ಮತ್ತು ಉಪಸ್ಥಿತರಿದ್ದರು.
ಪುರುಷರ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಅರೇಂಜ್ ಫ್ರೆಂಡ್ಸ್ ಮರ್ಕಂಜ, ಧ್ವಿತೀಯ ಸ್ಥಾನವನ್ನು ಪತಂಜಲಿ ಮಿತ್ರ ಬಳಗ ಸಂಪಾಜೆ ಪಡೆಯಿತು. ಕಾರ್ಯಕ್ರಮದಲ್ಲಿ ತಿಲಕ್ ಕುಲಾಲ್ ಸ್ಚಾಗತಿಸಿ, ಲಕ್ಷ್ಮಣ ಆಚಾರ್ಯ ವಂದಿಸಿದರು. ಉದಯ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.