Advertisement
ಸುದ್ದಿಗಳು

ಅರೆಕಾನಟ್ ಗ್ರೋವರ್ಸ್ ವ್ಯಾಟ್ಸಪ್ ಗ್ರೂಪ್‌ನಿಂದ ಅಡಿಕೆ ಕೃಷಿಕರ ವೈಚಾರಿಕ ಸಮ್ಮಿಲನ

Share

ಪುತ್ತೂರು: ಅರೆಕಾನಟ್ ಗ್ರೋವರ್ಸ್ ವ್ಯಾಟ್ಸಪ್ ಗ್ರೂಪ್ ನ ನೇತೃತ್ವದಲ್ಲಿಅಡಿಕೆ ಕೃಷಿಕರ ವೈಚಾರಿಕ ಸಮ್ಮಿಲನ ಕಾರ್ಯಕ್ರಮವು ಕ್ಯಾಂಪ್ಕೋ ಸಹಯೋಗದೊಂದಿಗೆ ಅ.9ರಂದು ಪುತ್ತೂರು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿರುವ ಚುಂಚಶ್ರೀ ಸಭಾಭವನದಲ್ಲಿ ನಡೆಯಿತು.

ಗ್ರೂಪಿನ ಸದಸ್ಯರು, ಸಮಾನಾಸಕ್ತ ಅಡಿಕೆ ಕೃಷಿಕರು ಭಾಗವಹಿಸಿದ್ದರು.ಅಡಿಕೆ ಪತ್ರಿಕೆ ಕಾರ್ಯನಿರ್ವಾಹಕ ಸಂಪಾದಕ ಶ್ರೀಪಡ್ರೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ತಂತ್ರಜ್ಞಾನ ಬೆಳೆದಂತೆ ರಿಸ್ಕ್ ತೆಗೆದು ಕೊಳ್ಳುವ ಕೆಲಸವೂ ಆಗಬೇಕು. ಯಾಕೆಂದರೆ ಇಲ್ಲಿ ಅಪ್‌ಡೇಟ್ ಮತ್ತು ಔಟ್‌ಡೇಟ್ ನಡುವೆ ನಮ್ಮ ಆಯ್ಕೆ ಇರುತ್ತದೆ ಎಂದರು. ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ಅಧ್ಯಕ್ಷತೆ ವಹಿಸಿದರು. ಅತಿಥಿಗಳಾಗಿ ಕ್ಯಾಂಪ್ಕೋ ಉಪಾಧ್ಯಕ್ಷ ಶಂಕರನಾರಾಯಣ ಖಂಡಿಗೆ, ಆಡಳಿತ ನಿರ್ದೇಶಕ ಸುರೇಶ್ ಭಂಡಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಅರೆಕಾನಟ್ ಗ್ರೋವರ್ಸ್ ವ್ಯಾಟ್ಸಪ್ ಗ್ರೂಪ್‌ನ ಅಡ್ಮಿನ್ ಮಹೇಶ್ ಪುಚ್ಚಪ್ಪಾಡಿ ಸ್ವಾಗತಿಸಿ, ಸುರೇಶ್ಚಂದ್ರ ಕಲ್ಮಡ್ಕ ವಂದಿಸಿದರು. ನಾ.ಕಾರಂತ ಪೆರಾಜೆ ಕಾರ್ಯಕ್ರಮ ನಿರೂಪಿಸಿದರು. ಉದ್ಘಾಟನಾ ಕಾರ್ಯಕ್ರಮದ ಬಳಿಕ ಅಡಿಕೆ ಕೃಷಿ ಮಾರುಕಟ್ಟೆ ಹಾಗೂ ಕ್ಯಾಂಪ್ಕೋ ಪಾತ್ರ, ಸಹಕಾರದ ಆಡಳಿತ ನಿರ್ವಹಣೆ, ಹಾಗೂ ಅಡಿಕೆ ಕೃಷಿ ಉಪಬೆಳೆಗಳು,ಕೃಷಿ ಮಾಧ್ಯಮದ ಬಗ್ಗೆ ಮಾಹಿತಿ ಹಾಗೂ ಸಂವಾದ ನಡೆಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

53 minutes ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

5 hours ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

11 hours ago

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?

ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…

23 hours ago

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

1 day ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

1 day ago