ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯಿಂದ ವೈವಿಧ್ಯಮಯ ಕಾರ್ಯಕ್ರಮ- ಅಧ್ಯಕ್ಷ ಕಜೆಗದ್ದೆ ಮಾಹಿತಿ

February 6, 2020
1:32 PM

ಸುಳ್ಯ: ಅರೆಭಾಷಾ ಸಾಹಿತ್ಯ, ಸಂಸ್ಕೃತಿ, ಆಚಾರ ವಿಚಾರ ಪರಂಪರೆಗಳ ಕುರಿತು ಯುವ ಸಮೂಹದಲ್ಲಿ ಅರಿವು ಮೂಡಿಸಿ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಇದೇ ಫೆಬ್ರವರಿ ತಿಂಗಳಿನಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ಅಕಾಡೆಮಿಯ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ ತಿಳಿಸಿದ್ದಾರೆ.

Advertisement
Advertisement
Advertisement
Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತರೆ ಭಾಷಾ ಅಕಾಡೆಮಿಗಳು ರಂಗ ಚಟುವಟಿಕೆಗಳಿಗೆ ಹೆಚ್ಚಿನ ಒತ್ತನ್ನು ನೀಡುತ್ತಿದ್ದು, ಅದರಂತೆಯೇ ಇದೀಗ ಅರೆಭಾಷಾ ಅಕಾಡೆಮಿ ರಂಗ ತರಬೇತಿ ಶಿಬಿರವನ್ನು ಸುಳ್ಯದ ರಂಗಮನೆಯಲ್ಲಿ ಆಯೋಜಿಸಿದೆ. ರಾಜ್ಯದ ವಿವಿಧೆಡೆಗಳ 16  ಶಿಬಿರಾರ್ಥಿಗಳು ಪಾಲ್ಗೊಂಡಿದ್ದು, ಒಂದು ತಿಂಗಳ ಅವಧಿಯ ಶಿಬಿರ ಫೆ.3 ರಿಂದ ಆರಂಭಗೊಂಡಿದೆ. ವಿದ್ಯಾರ್ಥಿಗಳನ್ನು ಕೇಂದ್ರವಾಗಿರಿಸಿಕೊಂಡು ಮೇ ತಿಂಗಳಿನಲ್ಲಿ ಕೊಡಗಿನಲ್ಲಿ ರಂಗ ತರಬೇತಿ ಕಾರ್ಯಕ್ರಮ ನಡೆಸಲು ಉದ್ದೇಶಿಸಿರುವುದಾಗಿ ತಿಳಿಸಿದರು.

Advertisement

ಸಾಹಿತ್ಯ ಸಂಘ ರಚನೆ:  ಅಕಾಡೆಮಿಯು ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯದ ಬೆಳವಣಿಗೆಗೆ ಪೂರಕವಾದ ಕಾರ್ಯಕ್ರಮವನ್ನು ನಿರಂತರವಾಗಿ ನಡೆಸುತ್ತ ಬರುತ್ತಿದೆ. ಇದರ ಭಾಗವಾಗಿ ಫೆ.6 ರಂದು ಕುಕ್ಕೆಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯದಲ್ಲಿ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂಘವನ್ನು ರಚಿಸಲಾಗುತ್ತಿದೆ. ಹಿರಿಯರಾದ ಕುಂಞಿಟಿ ಶಿವರಾಮ ಗೌಡ ಅವರು ಸಂಘವನ್ನು ಉದ್ಘಾಟಿಸಲಿದ್ದಾರೆ.

ಫೆ.8 ರಂದು ಮಡಿಕೇರಿ ತಾಲ್ಲೂಕಿನ ಅವಂದೂರು ಗ್ರಾಮದಲ್ಲಿ ಅರೆಭಾಷೆ ಸಂಸ್ಕೃತಿಲಿ ಕೆಡ್ಡಾಸ ಹಬ್ಬ ಎನ್ನುವ ವಿಶಿಷ್ಟ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

Advertisement

ಅದೇ ರೀತಿ ಫೆ.16 ರಂದು ಅರೆಭಾಷೆ ಸಿರಿ ಸಂಸ್ಕೃತಿ ಮತ್ತು ಕೆಡ್ಡಸ ಗೌಜಿ ಕಾರ್ಯಕ್ರಮವು ಚೆಂಬು ಗ್ರಾಮದಲ್ಲಿ ಶ್ರೀ ಭಗವನ್ ಸಂಘ ಹಾಗೂ ಸ್ವಾಮಿ ವಿವೇಕಾನಂದ ಯುವಕ ಮಂಡಲದ ಸಹಯೋಗದೊಂದಿಗೆ ನಡೆಯಲಿದ್ದು, ಕೊಡಗು ಜಿ.ಪಂ. ಅಧ್ಯಕ್ಷ ಬಿ.ಎ.ಹರೀಶ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಡಿಕೇರಿ ತಾ.ಪಂ. ಅಧ್ಯಕ್ಷೆ ತೆಕ್ಕಡೆ ಶೋಭಾ ಮೋಹನ್, ಸದಸ್ಯರಾದ ನಾಗೇಶ್ ಕುಂದಲ್ಪಡಿ ಮತ್ತಿತರ ಪ್ರಮುಖರು ಪಾಲ್ಗೊಳ್ಳಲಿದ್ದಾರೆ. ಅಂದು ಸಂಜೆ 4 ಗಂಟೆಗೆ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಹೆಸರಾಂತ ಯಕ್ಷಗಾನ ಕಲಾವಿದ ಜಬ್ಬಾರ್ ಸಮೋ ಸಂಪಾಜೆ ಇವರ ನೇತೃತ್ವದಲ್ಲಿ ಶರಸೇತು ಅರೆಭಾಷೆ ಯಕ್ಷಗಾನ ತಾಳಮದ್ದಳೆ ಪ್ರದರ್ಶನಗೊಳ್ಳಲಿದೆ ಎಂದು ಲಕ್ಷ್ಮೀನಾರಯಣ ಕಜೆಗದ್ದೆ ಮಾಹಿತಿ ನೀಡಿದರು.

ಅರೆಭಾಷೆ ಸಾಹಿತ್ಯ ಸಮ್ಮೇಳನ : ಸೋಮವಾರಪೇಟೆ ತಾಲೂಕಿನ ಆಲೂರು ಸಿದ್ದಪುರ ಗೌಡ ಸಮಾಜದ ಸಹಯೋಗದಲ್ಲಿ ಸಂಗಯ್ಯನಪುರ ಗ್ರಾಮದಲ್ಲಿ ಫೆ.23 ರಂದು ಅರೆಭಾಷೆ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗಿದೆ. ಸಮ್ಮೇಳನದ ಅಧ್ಯಕ್ಷರಾಗಿ ಅರೆಭಾಷೆ ಕವಿ, ಅಕಾಡೆಮಿ ಗೌರವ ಪುರಸ್ಕೃತರಾದ ಹೊದ್ದೆಟ್ಟಿ ಭವಾನಿ ಶಂಕರ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಲಕ್ಷ್ಮೀನಾರಾಯಣ ಕಜೆಗದ್ದೆ ತಿಳಿಸಿದರು.

Advertisement

ಸುದ್ದಿಗೋಷ್ಠಿಯಲ್ಲಿ ಅಕಾಡೆಮಿ ಸದಸ್ಯರುಗಳಾದ ಬೈತಡ್ಕ ಜಾನಕಿ ಬೆಳ್ಯಪ್ಪ, ಧನಂಜಯ್ ಅಗೋಳಿಕಜೆ, ಚೊಕ್ಕಾಡಿ ಪ್ರೇಮ ರಾಘವಯ್ಯ ಹಾಗೂ ಸ್ಮಿತಾ ಅಮೃತರಾಜ್ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |
February 23, 2025
11:41 AM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |
February 21, 2025
10:43 AM
by: ಸಾಯಿಶೇಖರ್ ಕರಿಕಳ
ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!
February 20, 2025
8:07 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |
February 20, 2025
11:34 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror