Advertisement
ಸಾಹಿತ್ಯ

ಅರೆಭಾಷೆ ,ಸಂಸ್ಕೃತಿ, ಸಾಹಿತ್ಯ ಬೆಳವಣಿಗೆ ಕಡೆಗೆ ಆದ್ಯತೆ – ಲಕ್ಷ್ಮೀನಾರಾಯಣ ಕಜೆಗದ್ದೆ

Share

ಸುಳ್ಯ: ಅರೆಭಾಷೆಯ ಜೊತೆಗೆ ನಾಡಿನಾದ್ಯಂತ ಪಸರಿಸಬೇಕು. ಅದರ ಜೊತೆಗೆ ಅರೆಭಾಷೆ ಸಂಸ್ಕೃತಿ, ಸಾಹಿತ್ಯದ ಬೆಳವಣಿಗೆಯಾಗಬೇಕು. ಈ ನಿಟ್ಟಿನಲ್ಲಿನ ಯೋಜನೆ ಹಾಗೂ ಯೋಚನೆ ಹಾಕಿಕೊಳ್ಳಲಾಗುವುದು  ಎಂದು ಅರೆಭಾಷೆ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

“ಸುಳ್ಯನ್ಯೂಸ್.ಕಾಂ” ಗೆ ನೀಡಿದ ವಿಶೇಷ ಸಂದರ್ಶನದಲ್ಲಿ  ಮಾತನಾಡಿದ ಅವರು, ಭಾಷೆ ಹಾಗೂ ಸಂಸ್ಕೃತಿ ನಾಡಿನಾದ್ಯಂತ ಬೆಳೆಯಲು ನಾಟಕ ಸೇರಿದಂತೆ ಇತರ ಮಾದ್ಯಮಗಳ ಅಗತ್ಯವೂ ಇದೆ. ಇದರ ಜೊತೆಗೆ ನಗರ ಪ್ರದೇಶದಲ್ಲಿ ಇರುವ ಅರೆಭಾಷೆದ ಸಮುದಾಯದ ಮಂದಿಯ ಮಕ್ಕಳು ಅರೆಭಾಷೆ ಮಾತನಾಡುವಂತೆ ಆಗಬೇಕು. ಇದಕ್ಕಾಗಿ ಕಾರ್ಯಕ್ರಮ ಹಮ್ಮಿಕೊಳ್ಳುವ ಯೋಚನೆ ಇದೆ ಎಂದರು.

ಹಿರಿಯರ ಮಾರ್ಗದರ್ಶನ, ಸಹಕಾರದಲ್ಲಿ ಯುವಕರನ್ನು ಜೊತೆಸೇರಿಸಿ ಸಂಘಟನೆ ಮಾಡುವುದಾಗಿ ಹೇಳಿದ ಲಕ್ಷ್ಮೀನಾರಾಯಣ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸ್ಥಾನ ನಿರೀಕ್ಷೆ ಮಾಡಿರಲಿಲ್ಲ. ಇದಕ್ಕಾಗಿ ಯಾವುದೇ ಪ್ರಯತ್ನವೂ ಮಾಡಲಿಲ್ಲ. ಆದರೆ ಗುರುತಿಸಿ ಈ ಸ್ಥಾನ ನೀಡಿರುವುದಕ್ಕೆ ಎಲ್ಲಾ ಹಿರಿಯರಿಗೆ ಕೃತಜ್ಞತೆ ಸಲ್ಲಿಸುತ್ತೇನೆ.ಅಕಾಡೆಮಿ ಕೆಲಸ ಹೊಸದು. ಆದರೆ ಅನುದಾನಗಳನ್ನು ತರಿಸಿ ಕಾರ್ಯಕ್ರಮ ಮಾಡಿರುತ್ತೇವೆ. ಭಾಷೆ, ಸಾಹಿತ್ಯ, ಸಂಸ್ಕೃತಿಗೆ ಕೆಲಸ ಮಾಡಿದ ಅನುಭವ ಇದೆ. ಹೀಗಾಗಿ ಅಕಾಡೆಮಿಗಳ ಪರಿಚಯ ಇದೆ ಎನ್ನುತ್ತಾರೆ.

ಅಕಾಡೆಮಿಗಳು ಒಂದು ಉದ್ದೇಶ ಹೊಂದಿರುತ್ತದೆ. ಇದೇ ಉದ್ದೇಶ ಎಲ್ಲರದ್ದೂ ಆಗಿರುತ್ತದೆ. ಇಲ್ಲಿ ವ್ಯಕ್ತಿಯಲ್ಲ ಉದ್ದೇಶ ಮುಖ್ಯವಾಗುತ್ತದೆ. ಹೀಗಾಗಿ ಅರೆಭಾಷೆ , ಸಂಸ್ಕೃತಿ, ಸಾಹಿತ್ಯದ ಬೆಳವಣಿಗೆಯೇ ಎಲ್ಲರ ಉದ್ದೇಶ ಆಗಿರುವುದರಿಂದ  ಎಲ್ಲೂ ಭಿನ್ನಾಭಿಪ್ರಾಯ ಇರಲಾರದು. ವೈಯಕ್ತಿಕ ಭಿನ್ನಾಭಿಪ್ರಾಯ ಮರೆತು ಉದ್ದೇಶಕ್ಕಾಗಿ ಕೆಲಸ ಮಾಡುತ್ತಾರೆ ಎನ್ನುವ ನಂಬಿಕೆ ಇದೆ. ಸಂಘಟನೆಯ, ಅರೆಭಾಷಿಕರ , ಎಲ್ಲಾ ಹಿರಿಯರ, ಎಲ್ಲಾ ಭಾಷಿಕರನ್ನು ಜೊತೆ ಸೇರಿಸಿ ಮುಂದುವರಿಯುವೆ ಎಂದು ಲಕ್ಷ್ಮೀನಾರಾಯಣ ಕಜೆಗದ್ದೆ  ಹೇಳುತ್ತಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

16 hours ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

17 hours ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

1 day ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

2 days ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

2 days ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

2 days ago