ಸುಳ್ಯ: ಅರೆಭಾಷೆಯ ಸಾಂಸ್ಕೃತಿಕ ಪರಂಪರೆಯನ್ನು ಹೊರತರಲು ಕೆಡ್ಡಸ ಆಚರಣೆ ಅತೀ ಮುಖ್ಯವಾಗಿದೆ ಎಂದು ಕೊಡಗು ಜಿ.ಪಂ. ಅಧ್ಯಕ್ಷ ಬಿ.ಎ ಹರೀಶ್ ಹೇಳಿದರು.
ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡಮಿ ವತಿಯಿಂದ ಶ್ರೀ ಭಗವಾನ್ ಸಂಘ ಊರುಬೈಲು, ಸ್ವಾಮಿ ವಿವೇಕಾನಂದ ಯುವಕ ಮಂಡಲ ಇವರ ಸಹಯೋಗದಲ್ಲಿ ಚೆಂಬು ಗ್ರಾಮದ ಕೂಡಡ್ಕ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಅರೆಭಾಷೆ ಸಿರಿ ಸಂಸ್ಕೃತಿ ಮತ್ತು ಕೆಡ್ಡಾಸ ಗೌಜಿ ಸಾಂಸ್ಕೃತಿಕ ಜಂಬರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಭೂಮಿಗೆ ತೆಂಗಿನ ಎಣ್ಣೆಯನ್ನು ಅರ್ಪಿಸುವ ಮೂಲಕ ಈ ಹಬ್ಬವನ್ನು ಆಚರಿಸಲಾಗುತ್ತದೆ. ಅರೆಭಾಷೆ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕಾರ್ಯಕ್ರಮವಾಗಬೇಕು. ಅರೆಭಾಷೆ ಮಾತನಾಡುವ ಜನಾಂಗದ ಪ್ರತಿಭೆಯನ್ನು ಹೊರತರಲು ಈ ಇಂತಹ ಕಾರ್ಯಕ್ರಮ ಅವಶ್ಯಕ ಎಂದು ಅವರು ಹೇಳಿದರು. ಮಡಿಕೇರಿ ತಾ.ಪಂ.ಅಧ್ಯಕ್ಷೆ ತೆಕ್ಕಡೆ ಶೋಭಾ ಮೋಹನ್ ಮಾತನಾಡಿ, ಅರೆಭಾಷೆ ಸಂಸ್ಕೃತಿ ಪರಂಪರೆಯನ್ನು ಪರಿಚಯಿಸಲು ಇಂತಹ ಕಾರ್ಯಕ್ರಮಗಳು ಸಹಕಾರಿಯಾಗಿದೆ ಎಂದರು. ಅರೆಭಾಷೆ ಜನಾಂಗವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಕಾರ್ಯವಾಗಬೇಕು. ನಮ್ಮ ಮಕ್ಕಳಿಗೆ ಶಿಕ್ಷಣದ ಜತೆಗೆ ಸಾಂಸ್ಕೃತಿಕ ಪರಂಪರೆಯ ಬಗ್ಗೆಯೂ ತಿಳಿಸಬೇಕು ಎಂದರು.
ಮಡಿಕೇರಿ ತಾಲೂಕು ಪಂಚಾಯಿತಿ ಸದಸ್ಯ ನಾಗೇಶ್ ಕುಂದಲ್ಪಾಡಿ, ಚೆಂಬು ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನೇಶ್ ಊರುಬೈಲು, ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡಮಿ ಅಧ್ಯಕ್ಷ ಲಕ್ಷ್ಮಿ ನಾರಾಯಣ ಕಜೆಗದ್ದೆ, ಗೌಡರ ಯುವ ಸೇವಾ ಸಂಘದ ಉಪಾಧ್ಯಕ್ಷ ಡಾ. ಎನ್.ಎ ಜ್ಞಾನೇಶ್ ಮಾತನಾಡಿದರು. ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎನ್.ಸಿ ಅನಂತ, ಲೇಖಕ ಕುಯಿಂತೋಡು ದಾಮೋದರ, ಚೆಂಬು ಸ್ವಾಮಿ ವಿವೇಕಾನಂದ ಯುವಕ ಮಂಡಲದ ಅಧ್ಯಕ್ಷ ದಿನೇಶ್ ಪೂಜಾರಿಗದ್ದೆ, ಕೂಡಡ್ಕ ಸ.ಹಿ.ಪ್ರಾ ಶಾಲೆಯ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಜೀವನ್ ಪೆರಿಗೇರಿ, ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡಮಿ ಸದಸ್ಯರಾದ ಬೈತಡ್ಕ ಜಾನಕಿ ಬೆಳ್ಯಪ್ಪ, ಚೊಕ್ಕಾಡಿ ಪ್ರೇಮ ರಾಘವಯ್ಯ, ಧನಂಜಯ ಅಗೋಳಿಕಜೆ ಮೊದಲಾದವರು ಉಪಸ್ಥಿತರಿದ್ದರು. ಚೆಂಬು ಶಾಲಾ ವಿದ್ಯಾರ್ಥಿಗಳು ನಾಡಗೀತೆ ಹಾಡಿದರು. ಸಂಯೋಜಕ ಲೋಕೇಶ್ ಊರುಬೈಲು ಪ್ರಸ್ತಾವನೆಗೈದರು. ಅಕಾಡಮಿ ಸದಸ್ಯೆ ಸ್ಮಿತಾ ಅಮೃತರಾಜ್ ಸ್ವಾಗತಿಸಿದರು. ಎಂ.ಬಿ ರವಿಕುಮಾರ್ ವಂದಿಸಿದರು. ರಮೇಶ ನಂಬಿಯಾರ್ ಕಾರ್ಯಕ್ರಮ ನಿರೂಪಿಸಿದರು.
ವಿವಿಧ ಗೋಷ್ಟಿ: ಜನಪದರ ಬೊದ್ಕುಲಿ ಕೆಡ್ಡಸ ಹಬ್ಬ ಬಗ್ಗೆ ವಿಷಯ ಮಂಡಿಸಿದ ಜಾನಪದ ವಿದ್ವಾಂಸ ಸುಂದರ್ ಕೇನಾಜೆ, ಕೆಡ್ಡಸ ಹಬ್ಬಕ್ಕೆ ತನ್ನದೇ ಆದ ಸಾಂಸ್ಕೃತಿಕ ಪರಂಪರೆ ಇದೆ. ವರ್ಷವಿಡಿ ಫಲ ಕೊಡುವ ಭೂಮಿಗೆ ಪೂಜೆ ಸಲ್ಲಿಸುವುದೇ ಈ ಹಬ್ಬದ ಮುಖ್ಯ ಉದ್ದೇಶ. ಮನೆಯ ಹಿರಿಯ ಹೆಣ್ಣುಮಗಳು ಭೂಮಿಗೆ ತೆಂಗಿನ ಎಣ್ಣೆಯನ್ನು ಅರ್ಪಿಸಿ ಪೂಜೆ ಸಲ್ಲಿಸುತ್ತಾರೆ. ಕೊಡಗು ಮಾತ್ರವಲ್ಲದೆ ಕರಾವಳಿ ಭಾಗದಲ್ಲೂ ಈ ರೀತಿಯ ಆಚರಣೆಗಳಿವೆ. 3 ದಿನಗಳು ನಡೆಯುವ ಈ ಹಬ್ಬ ವೈಶಿಷ್ಟ್ಯತೆಗಳಿಂದ ಕೂಡಿರುತ್ತದೆ ಎಂದರು.
ಅರೆಭಾಷಾ ಚಿಂತಕ ಮತ್ತು ಕೃಷಿಕ ಹೊಸೂರು ಚಂದ್ರಶೇಖರ್ `ಅರೆಭಾಷೆ ಸಂಸ್ಕೃತಿಲಿ ಮನೆ ಒಕ್ಕಲು ಜಂಬರ ಕುರಿತಾಗಿ ಉಪನ್ಯಾಸ ನೀಡಿದರು. ಲೀಲಾವತಿ ಕಲಾಯಿ ಮತ್ತು ಬಳಗದವರ ಪ್ರಾತ್ಯಕ್ಷಿಕೆ ಪ್ರದರ್ಶಿಸಿದರು. ಅರಂತೋಡು ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಶೀಲಾವತಿ ಕೃಷ್ಣಪ್ಪ ಬಿಳಿಯಾರ್ ಅವರು, ಅರೆಭಾಷೆ ಸಂಸ್ಕೃತಿಲಿ ಕೂಸ್‍ನ ತೊಟ್ಟಿಲಿಗೆ ಹಾಕುವ ಕ್ರಮದ ಬಗ್ಗೆ ಉಪನ್ಯಾಸ ನೀಡಿದರು. ರಮಾನಂದ ಬಾಳೆಕಜೆ ಮತ್ತು ಬಳಗದ ನೇತೃತ್ವದಲ್ಲಿ ತೊಡಿಕಾನ ಗೌಡ ಯುವ ಸೇವಾ ಸಂಘದವರು ಪ್ರಾತ್ಯಕ್ಷಿಕೆ ಪ್ರದರ್ಶಿಸಿದರು.
ಅರೆಭಾಷೆ ಸಂಸ್ಕೃತಿಲಿ ಮದುವೆ ಜಂಬರ ವಿಚಾರದ ಕುರಿತು ಸಂಸ್ಕೃತಿ ಮತ್ತು ಭಾಷಾ ಚಿಂತಕ ದೊಡ್ಡಣ್ಣ ಬರೆಮೇಲು ಉಪನ್ಯಾಸ ನೀಡಿದರು. ಗಣಪಯ್ಯ ಗುಂಡಿಮಜಲು ಮತ್ತು ತಂಡದವರ ನೇತೃತ್ವದಲ್ಲಿ ಚೆಂಬು ಗೌಡ ಯುವ ಸೇವಾ ಸಂಘದವರು ಪ್ರಾತ್ಯಕ್ಷಿಕೆ ಪ್ರದರ್ಶಿಸಿದರು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು.
ಕಳೆದ ಒಂದು ವಾರದಲ್ಲಿ ಚಾರ್ಮಾಡಿ ಘಾಟ್ನಲ್ಲಿ ಉಂಟಾದ ಎರಡನೇ ಕಾಡ್ಗಿಚ್ಚು ಪ್ರಕರಣ ಇದಾಗಿದೆ.…
ಅಡಿಕೆ ಆಮದು ವ್ಯವಹಾರದಲ್ಲಿ ತಪ್ಪು ಮಾಹಿತಿ ನೀಡಿ ವಿದೇಶದಿಂದ ಕಳ್ಳಸಾಗಾಣಿಕೆ ಮಾಡುತ್ತಿದ್ದ ಪ್ರಕರಣದಲ್ಲಿ ತೂತುಕುಡಿಯ…
ಸಾರಡ್ಕದ ಆರಾಧನಾ ಕಲಾಭವನದಲ್ಲಿ ಜ.26 ರಂದು ಕೃಷಿ ಹಬ್ಬ ನಡೆಯಲಿದೆ.ಬೆಳಗ್ಗೆ ಉದ್ಘಾಟನೆಗೊಳ್ಳುವ ಕೃಷಿ…
ಆಮದು ಸುಂಕವನ್ನು ತಪ್ಪಿಸಲು ಹುರಿದ ಅಡಿಕೆಯನ್ನು ಆಮದು ಮಾಡಿಕೊಳ್ಳಲಾಗುತ್ತಿದೆ. ಹುರಿದ ಅಡಿಕೆಯ ಆಮದು…
ಇತ್ತೀಚಿನ ಅಧ್ಯಯನಗಳ ಪ್ರಕಾರ, ಭಾರತವು ಜಾಗತಿಕವಾಗಿ ಪ್ಲಾಸ್ಟಿಕ್ ತ್ಯಾಜ್ಯದ ಅಗ್ರ ಉತ್ಪಾದಕ ಎಂದು…
115 ವರ್ಷಗಳ ಇತಿಹಾಸ ಇರುವ ಹಾಗೂ ರಾಜ್ಯದಲ್ಲಿ ನಿರ್ಮಾಣವಾದ ಮೊದಲ ಜಲಾಶಯ ವಾಣಿವಿಲಾಸ…