Advertisement
ಸುದ್ದಿಗಳು

ಅರ್ಚಕರಿಗೆ ಹಲ್ಲೆ ಪ್ರಕರಣ | ಗೃಹರಕ್ಷಕ ದಳದ ಸಿಬಂದಿಯೂ ಅಮಾನತು | ಲಾಕ್ಡೌನ್ ಸನ್ನಿವೇಶದಲ್ಲೂ 24 ಗಂಟೆಯಲ್ಲಿ ನ್ಯಾಯ | ಕುಕ್ಕೆ ಸುಬ್ರಹ್ಮಣ್ಯನ ಮಹಿಮೆಯೇ ಇದು |

Share

ಸುಬ್ರಹ್ಮಣ್ಯ: ರಾಜ್ಯದ ಮಾತ್ರವಲ್ಲ ದೇಶದ ಪ್ರಮುಖ ಆರಾಧನಾ ಕೇಂದ್ರ ಕುಕ್ಕೆ ಸುಬ್ರಹ್ಮಣ್ಯ. ಜನರ ಧಾರ್ಮಿಕ ಶ್ರದ್ದಾಕೇಂದ್ರ. ಇಲ್ಲಿ ನಡೆಯುವ ಪ್ರತೀ ಘಟನೆಗಳೂ ಆಸ್ತಿಕರ ಮೇಲೆ ಪರಿಣಾಮ ಬೀರುತ್ತದೆ. ಅಂತಹದ್ದರಲ್ಲಿ  ದೇವಸ್ಥಾನದ ಅರ್ಚಕರೊಬ್ಬರು ಲಾಕ್ಡೌನ್ ಸಂದರ್ಭ ಏಕಾಂಗಿಯಾಗಿ ಸಾಗುತ್ತಿದ್ದಾಗ ಪೊಲೀಸ್ ಸಿಬಂದಿ ಶಂಕರ್ ಸಂಸಿ ಎಂಬವರು ದಾರಿಯಲ್ಲಿ ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾರೆ ಎನ್ನುವುದು  ರಾಜ್ಯಾದ್ಯಂತ ಸಂಚಲನ  ಉಂಟುಮಾಡಿತ್ತು. ಆದರೆ ಈ ಘಟನೆ ನಡೆದ 24 ಗಂಟೆಯಲ್ಲಿ ಹಲ್ಲೆ ನಡೆಸಿದ ಪೊಲೀಸ್ ಸಿಬಂದಿ ಅಮಾನತು ಮಾಡಲಾಗಿದೆ. ಅದರ ಜೊತೆಗೆ ಇದಕ್ಕೆ ಕುಮ್ಮಕ್ಕು  ನೀಡಿದ ಆರೋಪದ ಮೇರೆಗೆ ಗೃಹರಕ್ಷಕ ವೀಕೇಶ್‌ನನ್ನು ಅಮಾನತುಗೊಳಿಸಿ ಗೃಹರಕ್ಷಕ ದಳದ ಜಿಲ್ಲಾ ಕಮಾಂಡೆಂಟ್ ಮುರಳಿ ಮೋಹನ್ ಚೂಂತಾರು ಆದೇಶಿಸಿದ್ದಾರೆ.

ಲಾಕ್ಡೌನ್ ಆದೇಶ ಮಾಡಿರುವ ಪ್ರಮುಖ ಉದ್ದೇಶ ಜನರು ಗುಂಪು ಸೇರಬಾರದು ಹಾಗೂ ಸ್ಪರ್ಶವಾಗಬಾರದು, ವೈರಸ್ ಹರಡಬಾರದು ಎಂದು ಪ್ರಧಾನಿ ನರೇಂದ್ರ ಮೋದಿ 3 ಬಾರಿ ಭಾಷಣದಲ್ಲೂ ಸೂಚನೆ ನೀಡಿದ್ದಾರೆ. ಆದರೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಏಕಾಂಗಿಯಾಗಿ ತೆರಳುತ್ತಿದ್ದ ಸಜ್ಜನ ಅರ್ಚಕರ ಮೇಲೆ ಪೊಲೀಸ್ ಸಿಬಂದಿ ಹಲ್ಲೆ ನಡೆಸಿರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ತಕ್ಷಣವೇ ಘಟನೆಯನ್ನು  ವಿಪ್ರ ಸಂಘಟನೆ ಖಂಡಿಸಿತು. ಇದರ ಜೊತೆಗೆ ದೇವಸ್ಥಾನದ ಅಧಿಕಾರಿಗಳು, ಸಿಬಂದಿಗಳು ಸ್ಪಂದನೆ ನೀಡಿ ಅಧಿಕಾರಿಗಳ ಗಮನಕ್ಕೆ ತಂದಿದ್ದರು. ಜೊತೆಗೆ ಆಸ್ಥಿಕ ಬಂಧುಗಳು, ವಿವಿಧ ಸಂಘಟನೆಯ ಪ್ರಮುಖರು, ಸುಬ್ರಹ್ಮಣ್ಯ ಸಂಪುಟ ನರಸಿಂಹ ಸ್ವಾಮಿ ಮಠದ ಶ್ರೀಗಳು , ಜನಪ್ರತಿನಿಧಿಗಳ ಸಹಿತ ಎಲ್ಲರೂ ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿ ತಕ್ಷಣವೇ ಕ್ರಮಕ್ಕೆ ಒತ್ತಾಯಿಸಿದ್ದರು.

ಇದೆಲ್ಲಾ ಹಿನ್ನೆಲೆಯಲ್ಲಿ  ಸುಬ್ರಹ್ಮಣ್ಯದ ಪೂಜೆಗೆ ತೆರಳುತ್ತಿದ್ದ ಅರ್ಚಕರಿಗೆ  ಹಲ್ಲೆ ಮಾಡಿದ ಪೊಲೀಸ್ ಸಿಬಂದಿ ಹಾಗೂ ಕುಮ್ಮಕ್ಕು ನೀಡಿದ ಗೃಹರಕ್ಷಕ ದಳದ ಸಿಬಂದಿಯನ್ನು  24 ಗಂಟೆಯೊಳಗೆ ಅಮಾನತು ಮಾಡಲಾಗಿದೆ. ಲಾಕ್ಡೌನ್ ಪರಿಸ್ಥಿತಿಯಲ್ಲೂ , ವಿವಿಧ ಒತ್ತಡದ ನಡುವೆಯೂ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡಿದ್ದಾರೆ. ಇದು ಕುಕ್ಕೆ ಸುಬ್ರಹ್ಮಣ್ಯನ ಮಹಿಮೆಯೇ ಎಂದು ಭಕ್ತರು ಮಾತನಾಡುತ್ತಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?

ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…

9 hours ago

ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ

ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…

15 hours ago

ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ

ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…

15 hours ago

ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು

ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…

15 hours ago

ಹಾಲಿನ ದರ ಏರಿಕೆ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ; ಪರಿಷತ್ ಚುನಾವಣೆ ಬಳಿಕ ಅಂತಿಮ ಘೋಷಣೆ

ಹಾಲಿನ ದರ ಹೆಚ್ಚಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ನಿರ್ಧಾರ…

15 hours ago

ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?

ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…

1 day ago