ಮಂಗಳೂರು : ಅಸಂಘಟಿತ ವಲಯದ ಕಾರ್ಮಿಕರಾದ ಖಾಸಗಿ ವಾಣಿಜ್ಯ ವಾಹನ ಚಾಲಕರು, ಹಮಾಲರು, ಟೈಲರುಗಳು, ಚಿಂದಿ ಆಯುವವರು, ಗೃಹಕಾರ್ಮಿಕರು, ಮೆಕಾನಿಕ್‍ಗಳು, ಅಗಸರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಕ್ಷೌರಿಕರು, ಹಾಗೂ ಮಂಡಕ್ಕಿ ಭಟ್ಟಿ ಕಾರ್ಮಿಕರುಗಳಿಗೆ ಮಾರ್ಚ್ 1 ರಂದು ಶ್ರಮ ಸಮ್ಮಾನ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಕಾರ್ಮಿಕರು ದಾಖಲೆಯೊಂದಿಗೆ ಅರ್ಜಿ ನಮೂನೆ 5ನ್ನು ಕಾರ್ಮಿಕ ಅಧಿಕಾರಿ ಕಚೇರಿಯಿಂದ ಪಡೆದುಕೊಂಡು ಕಾರ್ಮಿಕರ ಬಳಿ ಇರುವ ಸ್ಮಾರ್ಟ್ ಕಾರ್ಡ್, ವಿದ್ಯಾರ್ಹತೆಯ ಪ್ರಮಾಣ ಪತ್ರ, ಸರ್ವಿಸ್ ಸರ್ಟಿಫಿಕೇಟ್, ಪೋಲಿಸ್ ಇಲಾಖೆಯಿಂದ ಯಾವುದೇ ಪ್ರಕರಣ ಇರುವುದಿಲ್ಲವೆಂದು ಮೂಲ ಪ್ರಮಾಣ ಪತ್ರವನ್ನು, ವೃತ್ತಿಯ ಬಗ್ಗೆ ತರಬೇತಿ ಪಡೆದ ಪ್ರಮಾಣ ಪತ್ರಗಳಿದ್ದಲ್ಲಿ ಲಗತ್ತಿಸಿ ಫೆಬ್ರವರಿ 18 ರೊಳಗೆ ಕಾರ್ಮಿಕ ಅಧಿಕಾರಿ, ದ.ಕ ಉಪವಿಭಾಗ-1, ಮಂಗಳೂರು, ಭಾರತ್‍ಬೀಡಿ ಎದುರು, ಬಂಟ್ಸ್‍ಹಾಸ್ಟೇಲ್, ಮಂಗಳೂರು-575003 ಕಚೇರಿಗೆ ಸಲ್ಲಿಸಬೇಕೆಂದು ಮಂಗಳೂರು, ದ.ಕ ಜಿಲ್ಲೆ, ಕಾರ್ಮಿಕ ಅಧಿಕಾರಿ ಪ್ರಕಟಣೆ ತಿಳಿಸಿದೆ.
ದ ರೂರಲ್ ಮಿರರ್.ಕಾಂ ನಲ್ಲಿ "ಹೊಸರುಚಿ" ಯ ಮೂಲಕ ಹಲಸು ಅಡುಗೆಯ ಮೂಲಕ…
ತುಳು ಸಾಹಿತ್ಯ ಅಕಾಡೆಮಿ ಹಾಗೂ ಅಖಿಲ ಭಾರತ ಮುಂಡಾಲ ಯುವ ವೇದಿಕೆಯ ವತಿಯಿಂದ…
ವಿಶ್ವದಲ್ಲಿ ಅಡಿಕೆ ಉತ್ಪಾದನೆ ಆಗುವ ಎಲ್ಲಾ ರಾಷ್ಟ್ರಗಳಲ್ಲಿ ಅದರ ಬಳಕೆಯೂ ಆಗುತ್ತಿದೆ.ಇದರೊಂದಿಗೆ ಈ…
ಪ್ಲಾಸ್ಟಿಕ್ ಮಾಲಿನ್ಯವು ಪರಿಸರ ವಿನಾಶದ ಅಂಶಗಳಲ್ಲಿ ಒಂದಾಗಿದೆ. ನಮ್ಮ ಸಾಗರಗಳು ಮತ್ತು ಕರಾವಳಿಗಳಲ್ಲಿ…
ವಿಯೆಟ್ನಾಂ 2030 ರ ವೇಳೆಗೆ ಕೃಷಿಯಲ್ಲಿ ಹೊರಸೂಸುವ ಮೀಥೇನ್ ಅನ್ನು 30% ರಷ್ಟು…
ಆನೆ ಸೆರೆ ಕಾರ್ಯಾಚರಣೆ, ಆನೆಗಳನ್ನು ಪಳಗಿಸುವುದು ಮತ್ತು ಯಶಸ್ವಿಯಾಗಿ ವನ್ಯಜೀವಿ ಸೆರೆ ಕಾರ್ಯಾಚರಣೆಯಲ್ಲಿ…