ಅಸಹಕಾರ ಚಳವಳಿ ಮಧ್ಯೆಯೇ ಬಿಜೆಪಿ ರಾಜ್ಯಾಧ್ಯಕ್ಷರ ಪದಗ್ರಹಣಕ್ಕೆ ಸುಳ್ಯ ಬಿಜೆಪಿ

August 25, 2019
10:41 PM

ಸುಳ್ಯ: ಶಾಸಕ ಎಸ್.ಅಂಗಾರ ಅವರಿಗೆ ಸಚಿವ ಸ್ಥಾನ ದೊರೆಯಲಿಲ್ಲ ಎಂದು ಮುನಿಸುಕೊಂಡು ಜಿಲ್ಲೆಯ ಮತ್ತು ರಾಜ್ಯ ಬಿಜೆಪಿ ನೇತೃತ್ವದ ಜೊತೆ ಅಸಹಕಾರ ಚಳವಳಿಯನ್ನು ಸುಳ್ಯ ಬಿಜೆಪಿ ಘೋಷಿಸಿದೆ. ಆದರೆ ಅಸಹಕಾರ ಚಳವಳಿಯ ಮಧ್ಯೆಯೂ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ದ.ಕ.ಸಂಸದ ನಳಿನ್ ಕುಮಾರ್ ಕಟೀಲ್ ಅವರು ಅಧಿಕಾರ ವಹಿಸುವ ಕಾರ್ಯಕ್ರಮಕ್ಕೆ ಸುಳ್ಯ ಬಿಜೆಪಿ ಮುಖಂಡರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ.

Advertisement
Advertisement
Advertisement
Advertisement

ಆ.27 ರಂದು ಬೆಂಗಳೂರು ಕಚೇರಿಯಲ್ಲಿ ನಡೆಯುವ ಸಮಾರಂಭಕ್ಕೆ ಸುಳ್ಯ ವಿಧಾನಸಭಾ ಕ್ಷೇತ್ರದಿಂದ 250 ರಿಂದ 300 ಮಂದಿ ಕಾರ್ಯಕರ್ತರು, ನಾಯಕರು ಭಾಗವಹಿಸಲಿದ್ದಾರೆ ಎಂದು ಮೂಲಗಳು ‘ಸುಳ್ಯ ನ್ಯೂಸ್.ಕಾಂ‘ಗೆ ತಿಳಿಸಿದ್ದಾರೆ. 26 ರಂದು ರಾತ್ರಿಯೇ ಇವರು ಬೆಂಗಳೂರಿನತ್ತ ಪ್ರಯಾಣ ಬೆಳೆಸಲಿದ್ದಾರೆ.

Advertisement

ಬಿಜೆಪಿ ಅಸಹಕಾರ ಚಳವಳಿ ಘೋಷಿಸಿದ ಕಾರಣ ಸುಳ್ಯ ಬಿಜೆಪಿಯವರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರಾ ಎಂಬ ಜಿಜ್ಞಾಸೆ ಇತ್ತು. ಇದಕ್ಕೆ ಬಿಜೆಪಿ ಮುಖಂಡರೇ ತೆರೆ ಎಳೆದಿದ್ದಾರೆ. ಅಸಹಕಾರ ಚಳವಳಿ, ಜನಪ್ರತಿನಿಧಿಗಳ ರಾಜಿನಾಮೆ ಮಧ್ಯೆ ಸುಳ್ಯ ಬಿಜೆಪಿಯವರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರಾ ಎಂಬ ಕುತೂಹಲ ಜಿಲ್ಲಾ ನೇತೃತ್ವಕ್ಕೂ ಇತ್ತು. ಈ ಹಿನ್ನಲೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ನೇತೃತ್ವದಲ್ಲಿ ಜಿಲ್ಲಾ ಮುಖಂಡರು ಸುಳ್ಯಕ್ಕೆ ಆಗಮಿಸಿ ಸುಳ್ಯದ ಮುಖಂಡರ ಮನವೊಲಿಸಿ ಕಾರ್ಯಕ್ರಮಕ್ಕೆ ಭಾಗವಹಿಸುವಂತೆ ಮಾಡಲು ಯಶಸ್ವಿಯಾಗಿದ್ದಾರೆ. ಶಾಸಕರಿಗೆ ಸಚಿವ ಸ್ಥಾನ ಸಿಗುವ ತನಕ ಅಸಹಕರ ಚಳವಳಿ ಮುಂದುವರಿಯಲಿದೆ. ಆದರೆ ರಾಜ್ಯಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮಕ್ಕೆ ಭಾಗವಹಿಸುವುದು ಅನಿವಾರ್ಯವಾಗಿದೆ ಎಂದು ಸುಳ್ಯ ಬಿಜೆಪಿ ಮುಖಂಡರು ಹೇಳುತ್ತಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದ ಗ್ರಾಮ ಪಂಚಾಯತ್‌ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ʼದರ್ಶಿನಿʼ ವಿನೂತನ ಕಾರ್ಯಕ್ರಮಕ್ಕೆ  ಸರ್ಕಾರ ಚಾಲನೆ
February 7, 2025
7:21 AM
by: The Rural Mirror ಸುದ್ದಿಜಾಲ
‘ಜಲಾನಯನ ಯಾತ್ರೆ’ ಕುರುಡು ಮಲೆಯಲ್ಲಿ ಆರಂಭ
February 7, 2025
7:15 AM
by: The Rural Mirror ಸುದ್ದಿಜಾಲ
ದೇಶದ 25 ಸಾವಿರ ಗ್ರಾಮಗಳಲ್ಲಿ ಸಂಪರ್ಕ ಕಲ್ಪಿಸುವ ಕ್ರಮ  | 900 ಕ್ಕೂ ಅಧಿಕ ಗ್ರಾಮಗಳಲ್ಲಿ ಮೊಬೈಲ್‌ ಟವರ್‌ ಅಳವಡಿಕೆ |
February 7, 2025
7:10 AM
by: The Rural Mirror ಸುದ್ದಿಜಾಲ
ಕಪ್ಪತ ಗುಡ್ಡ ರಕ್ಷಣೆ ಕುರಿತು ಜಾಗೃತಿ | ಗುಡ್ಡದ ತಪ್ಪಲಿನ ಗ್ರಾಮಗಳಲ್ಲಿ ಜನಜಾಗೃತಿ
February 7, 2025
7:05 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror