ಪೈಚಾರು: ಅಸ್ತ್ರ ಸ್ಪೋರ್ಟ್ಸ್ & ಸೋಶಿಯಲ್ ಕ್ಲಬ್ ಪೈಚಾರ್ ಇದರ ವತಿಯಿಂದ ಸ್ವಾತಂತ್ರ್ಯೋತ್ಸವ ಹಾಗೂ ಸನ್ಮಾನ ಸಮಾರಂಭ .ಪೈಚಾರ್ ಪಿ ಎ ಕಾಂಪ್ಲೆಕ್ಸ್ ಮುಂಭಾಗದಲ್ಲಿ ನಡೆಯಿತು.
ಧ್ವಜಾರೋಹಣವನ್ನು ಮಧುಸೂದನ ಪಿ ಎಮ್ ಇವರು ನೇರವೆರಿಸಿದರು. ನಂತರ ಕಾರ್ಯಕ್ರಮದ ಉದ್ಘಾಟನೆಯನ್ನು ನಗರ ಪಂಚಾಯತ್ ಮಾಜಿ ಸದಸ್ಯರಾದ ಮುಸ್ತಫಾ ಕೆ ಎಮ್ ನೇರವೆರಿಸಿ ಮಾತನಾಡಿದರು.ಈ ಸಂದರ್ಭದಲ್ಲಿ ಎಸ್ ಎಲ್ ಎಲ್ ಸಿಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ನಮಾಝ್ ಸೊಣಂಗೇರಿ ಹಾಗೂ ಸಫ್ರೀನಾ ಪೈಚಾರ್ ಇವರನ್ನು ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.
ನಂತರ ಗೋಪಾಲ ಕೃಷ್ಣ ಭಟ್ ಮಾತನಾಡಿದರು ಹಾಗೂ ತ್ವಾಹ ಶಾಂತಿನಗರ ಗೀತೆಗಳನ್ನು ಹಾಡುವುದರ ಮೂಲಕ ಮಾತನಾಡಿದರು. ಅಧ್ಯಕ್ಷತೆಯನ್ನು ಅಬೂಸಾಲಿ ಪೈಚಾರ್ ವಹಿಸಿದ್ದರು ವೇದಿಕೆಯಲ್ಲಿ ಬಿಜೆಎಂ ಕಾರ್ಯದರ್ಶಿ ರಝಕ್ , ಅರ್ತಾಜೆ .ಪಿಸ್ ಶಿಕ್ಷಣ ಸಂಸ್ಥೆಗಳ ಸ್ಥಾಪಕಧ್ಯಕ್ಷರಾದ ಅಬೂಬಕ್ಕರ್ ಬೊಳುಬೈಲು.ಜಾಲ್ಸೂರ್ ಗ್ರಾಮ ಪಂಚಾಯತ್ ಸದಸ್ಯ ಪ್ರವೀಣ್ ಪಿಲಿಕೋಡಿ, AYC ಇದರ ಅಧ್ಯಕ್ಷ ಕರೀಂ ಕೆ ಎಮ್ .ಉಪಾಧ್ಯಕ್ಷ ಆಶ್ರಫ್ ಪೈಚಾರ್ ,ಕಾರುಣ್ಯ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಬಶೀರ್ ಆರ್ ಬಿ.ಮಾಜಿ ಅಧ್ಯಕ್ಷ ರಿಫಾಯಿ ಎಸ್ ಎ. ಹಾಗೂ ಎಲ್ಲಾ ಸದಸ್ಯರುಗಳು ಹಾಗೂ ಊರಿನ ಎಲ್ಲಾ ನಾಗರಿಕರು ಉಪಸ್ಥಿತರಿದ್ದರು.
ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ಇದರ ಪ್ರಧಾನ ಕಾರ್ಯದರ್ಶಿ ಮುಜೀಬ್ ಪೈಚಾರ್ ಸ್ವಾಗತಿಸಿ ವಂದಿಸಿ ಕಾರ್ಯಕ್ರಮವನ್ನು ನಿರೂಪಿಸಿದರು.
ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…
ರಸ್ತೆ ಬದಿ ತ್ಯಾಜ್ಯ ಎಸೆದ ಪ್ರಕರಣದಲ್ಲಿ ಅಂಗಡಿ ಮಾಲಿಕನ ವಿರುದ್ಧ ಎಫ್‌ಐಆರ್ ದಾಖಲಾಗಿದೆ.…