Advertisement
ಸುದ್ದಿಗಳು

ಅ‌.2 ರಂದು ಜನಜಾಗೃತಿ ವೇದಿಕೆಯ ವತಿಯಿಂದ ವ್ಯಸನಮುಕ್ತರ ಸಮಾವೇಶ

Share

ಸುಳ್ಯ: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸುಳ್ಯ ತಾಲೂಕು, ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ‌.ಟ್ರಸ್ಟ್ ಸುಳ್ಯ ತಾಲೂಕು, ನವಜೀವನ ಸಮಿತಿ ಸುಳ್ಯ, ಹಾಗೂ ಪ್ರಗತಿಬಂಧು ಸ್ವಸಹಾಯ ಒಕ್ಕೂಟ ಇದರ ಸಹಯೋಗದಲ್ಲಿ ಗಾಂಧಿ ಜಯಂತಿ ಆಚರಣೆಯ ಅಂಗವಾಗಿ ದುಶ್ಚಟಮುಕ್ತ ಸಮಾಜ ನಿರ್ಮಾಣಕ್ಕಾಗಿ ಗಾಂಧೀ ಸ್ಮೃತಿ ಪ್ರಯುಕ್ತ ವ್ಯಸನಮುಕ್ತರ ಸಮಾವೇಶ ಅ.2ರಂದು ಮಧ್ಯಾಹ್ನ 2 ಗಂಟೆಯಿಂದ ಸುಳ್ಯ ಚೆನ್ನಕೇಶವ ದೇವಸ್ಥಾನದ ಮುಂಭಾಗ ಶ್ರೀ ಶಾರದಾಂಬಾ ವೇದಿಕೆಯಲ್ಲಿ ನಡೆಯಲಿದೆ ಎಂದು ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಕಳಂಜ ವಿಶ್ವನಾಥ ರೈ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಗಾಂಧಿ ಜಯಂತಿ ದಿನ ಬೆಳಿಗ್ಗೆ ಜನಜಾಗೃತಿ ವೇದಿಕೆ ಮತ್ತು ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ 151 ಕಡೆ ಏಕಕಾಲದಲ್ಲಿ ಸ್ವಚ್ಚತಾ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 2 ಗಂಟೆಗೆ ವ್ಯಸನಮುಕ್ತರ ಸಮಾವೇಶ ಮತ್ತು ನವಜೀವನ ಸಮಿತಿ ಸದಸ್ಯರಿಗೆ ಮಾಹಿತಿ ಮಾರ್ಗದರ್ಶನ ನಡೆಯಲಿದೆ. ಮದ್ಯವರ್ಜನ ಶಿಬಿರಗಳ ಮೂಲಕ ವ್ಯಸನ ಮುಕ್ತರಾದವರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

ಪಾನಮುಕ್ತ ತಾಲೂಕಿಗೆ ಹಕ್ಕೊತ್ತಾಯ ನಿರ್ಣಯವನ್ನು ಕೈಗೊಳ್ಳಲಾಗುವುದು. ಶಾಸಕ ಎಸ್‌.ಅಂಗಾರ ಉದ್ಘಾಟಿಸುವರು. ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್, ಜನಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ಎನ್.ಎ.ರಾಮಚಂದ್ರ, ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕ ಸತೀಶ್ ಶೆಟ್ಟಿ, ಕೇಶವ ಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಅಧ್ಯಕ್ಷ ಪುರೋಹಿತ ನಾಗರಾಜ ಭಟ್, ಪರಿವಾರಕಾನ ಮದರ್ ತೆರೇಸಾ ಚರ್ಚ್ ನ ಫಾ.ಜೋಸೆಫ್ ಪುದಕುಯಿಲ್, ತಾಜುಲ್ ಹುದಾ ಎಜ್ಯುಕೇಶನ್ ಟ್ತಸ್ಟ್ ಅಧ್ಯಕ್ಷ ಕೆ.ವಿ.ನೂರುದ್ದೀನ್ ಝುಹರಿ, ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಡಾ.ಹರಪ್ರಸಾದ್ ತುದಿಯಡ್ಕ ಮತ್ತಿತರರು ಭಾಗವಹಿಸಲಿದ್ದಾರೆ ಎಂದರು.

 

ದುಶ್ಚಟಮುಕ್ತ ಸಮಾಜಕ್ಕಾಗಿ ವಿಶೇಷ ಕಾರ್ಯಕ್ರಮ:

ಇದುವರೆಗೆ ತಾಲೂಕಿನಲ್ಲಿ 57 ಮದ್ಯವರ್ಜನ ಶಿಬಿರಗಳು ಆಯೋಜಿಸಿದ್ದು 3314 ಮಂದಿ ಶಿಬಿರದಲ್ಲಿ ಭಾಗವಹಿಸಿ ಪಾನಮುಕ್ತರಾಗಿದ್ದಾರೆ. ಈ ವರ್ಷ ವಿಶೇಷವಾಗಿ ದುಶ್ಚಟ ಮುಕ್ತ ಸಮಾಜ ನಿರ್ಮಾಣದ ನಿಟ್ಟಿನಲ್ಲಿ ಯುವ ಜನತೆಗೆ ಶಾಲಾ ಕಾಲೇಜುಗಳಲ್ಲಿ ಮಾಹಿತಿಯನ್ನು ನೀಡುವ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಸ್ವಾಸ್ಥ್ಯ ಸಂಕಲ್ಪ ಕ್ಲಬ್ ಉದ್ಘಾಟಿಸಲಾಗುವುದು. ನವಜೀವನ ಸಮಿತಿಯ ಬಲವರ್ಧನೆ, ಸ್ವ ಉದ್ಯೋಗದ ಚಿಂತನೆ ನಡೆಸಲಾಗುವುದು. ನವಜೀವನ ಸಮಿತಿಯವರಿಗೆ ಪ್ರೇರಣಾ ಶಿಬಿರ, ಭಜನೋತ್ಸವ, ಕ್ರೀಡಾಕೂಟ ಮತ್ತು ಸಮಿತಿಯವರಿಂದ ಗ್ರಾಮ ಸುಭಿಕ್ಷಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಅವರು ವಿವರಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಜನಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ಎನ್.ಎ.ರಾಮಚಂದ್ರ, ಜನಜಾಗೃತಿ ವೇದಿಕೆಯ ತಾಲೂಕು ಕೋಶಾಧಿಕಾರಿ ಲೋಕನಾಥ್ ಅಮೆಚೂರ್, ಯೋಜನಾಧಿಕಾರಿ ಸಂತೋಷ್ ಕುಮಾರ್ ರೈ, ಬೆಳ್ಳಾರೆ ವಲಯಾಧ್ಯಕ್ಷ ಕೂಸಪ್ಪ ಗೌಡ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

29 minutes ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

1 day ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

1 day ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

2 days ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

3 days ago