ಮಡಿಕೇರಿ: ಶನಿವಾರಸಂತೆಯ ನಮ್ಮ ಬೆಳೆಗಾರರ ಸ್ವಸಹಾಯ ಸಂಘ, ಕರ್ನಾಟಕ ಬೆಳೆಗಾರರ ಒಕ್ಕೂಟದ ಕೊಡಗು ಶಾಖೆಯ ವತಿಯಿಂದ ಅ.1 ರಂದು ಮಂಗಳವಾರ ಶನಿವಾರಸಂತೆಯಲ್ಲಿ ಅಂತರರಾಷ್ಟ್ರೀಯ ಕಾಫಿ ದಿನಾಚರಣೆ ಆಯೋಜಿಸಲ್ಪಟ್ಟಿದೆ.
ಅ.1 ರಂದು ಬೆಳಗ್ಗೆ 10 ಗಂಟೆಗೆ ಶನಿವಾರಸಂತೆಯ ಗುಡುಗಳಲೆ ಶ್ರೀ ಮಂಜುನಾಥ ಪೆಟ್ರೋಲ್ ಬಂಕ್ ಬಳಿಯಲ್ಲಿ ನಡೆಯುವ ಅಂತರರಾಷ್ಟ್ರೀಯ ಕಾಫಿ ದಿನಾಚರಣೆ ಕಾರ್ಯಕ್ರಮದಲ್ಲಿ ಕಾಫಿ ಮಂಡಳಿಯ ಹಾಸನದ ಜಂಟಿ ನಿರ್ದೇಶಕ ಗುಡ್ಡೇಗೌಡ್ರು ಅಂತರರಾಷ್ಟ್ರೀಯ ಕಾಫಿ ದಿನಾಚರಣೆ ಬಗ್ಗೆ ಮಾಹಿತಿ ನೀಡಲಿದ್ದಾರೆ.
ಕೊಡಗು ಜಿಲ್ಲಾ ಕರ್ನಾಟಕ ಬೆಳೆಗಾರರ ಒಕ್ಕೂಟದ ಸಂಘಟನಾ ಕಾರ್ಯದರ್ಶಿ ಕೆ.ಕೆ.ವಿಶ್ವನಾಥ್ ರೈತರ ಉತ್ಪಾದನಾ ಸಂಸ್ಥೆಯ ವಿಚಾರವಾಗಿ ಮಾಹಿತಿ ನೀಡಲಿದ್ದು, ಮಡಿಕೇರಿಯ ಕಾಫಿ ಮಂಡಳಿ ಉಪನಿರ್ದೇಶಕ ಶಿವಕುಮಾರಸ್ವಾಮಿ ಕಾಫಿ ಮಂಡಳಿಯಿಂದ ದೊರಕುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ. ಸೋಮವಾರಪೇಟೆ ಕಾಫಿ ಮಂಡಳಿ ಎಸ್.ಎಲ್.ಓ. ಮುರಳೀಧರ್ ರೈತರ ಕಾಫಿ ಉತ್ಪಾದಕ ಉಪಉತ್ಪನ್ನಗಳಿಂದ ದಿನನಿತ್ಯದ ಪ್ಲಾಸ್ಟಿಕ್ ತ್ಯಜಿಸುವ ಬಗ್ಗೆ ಮಾಹಿತಿ ನೀಡಲಿದ್ದಾರೆ. ಅಂತರರಾಷ್ಟ್ರೀಯ ಕಾಫಿ ದಿನಾಚರಣೆ ಅಂಗವಾಗಿ ನಮ್ಮಬೆಳೆಗಾರರ ಸ್ವಸಹಾಯ ಸಂಘದ ವತಿಯಿಂದ ಕಾಫಿ ಪುಡಿಯನ್ನು ಬಳಸಿ ಕಾರ್ಯಕ್ರಮದಲ್ಲಿ ಪಾಲ್ಗೊಂಡವರಿಗೆ ಕಾಫಿ ವಿತರಿಸಲಾಗುತ್ತದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…