ಮಂಗಳೂರು: ಅರಬ್ಬಿ ಸಮುದ್ರ ಮತ್ತು ಲಕ್ಷ ದ್ವೀಪದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದರ ಪ್ರಭಾವದಿಂದ ಕೇರಳ, ಕರ್ನಾಟಕ ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಅಲ್ಲಲ್ಲಿ ಅಕ್ಟೋಬರ್ 18 ರಿಂದ 19 ರವರೆಗೆ ಹೆಚ್ಚು ಮಳೆಯಾಗುವ ಸಾಧ್ಯತೆ ಇರುತ್ತದೆ. ದಕ್ಷಿಣ ಕನ್ನಡ ಜಿಲ್ಲೆಗೆ ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಆರೆಂಜ್ ಅಲರ್ಟ್ (64.5 ಮಿ.ಮೀ ನಿಂದ 115.5 ಮಿ.ಮೀ ವರೆಗೆ ಮಳೆ ಬೀಳುವ ಸಾಧ್ಯತೆ) ಸೂಚನೆ ನೀಡಿರುತ್ತಾರೆ. ಸಾರ್ವಜನಿಕರು ಈ ಅವಧಿಯಲ್ಲಿ ಸೂಕ್ತ ಮುಂಜಾಗ್ರತಾ ಕ್ರಮವಹಿಸುವಂತೆ ಎಚ್ಚರಿಕೆ ನೀಡಲಾಗಿದೆ. ಮೀನುಗಾರರು ಮೀನುಗಾರಿಕೆಗಾಗಿ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel