ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನಿರ್ಮಾಣಗೊಂಡ ನೂತನ ಬ್ರಹ್ಮರಥವು ಅ.2 ರಂದು ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಲಿದೆ. ಈ ಹಿನ್ನೆಲೆಯಲ್ಲಿ ಬ್ರಹ್ಮರಥದ ಸ್ವಾಗತ ಹಾಗೂ ಇತರ ಚರ್ಚಿಸಲು ಪೂರ್ವಬಾವಿ ಸಭೆ ಸೋಮವಾರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕಚೇರಿಯಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ವಹಿಸಿದ್ದರು.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೂತನ ಬ್ರಹ್ಮರಥ ಕೋಟೇಶ್ವರದಲ್ಲಿ ಈಗಾಗಲೇ ಸಿದ್ಧಗೊಂಡಿದೆ. ಸೆ.30 ರಂದು ಕೋಟೇಶ್ವರದಿಂದ ರಥ ಹೊರಡಲಿದೆ. ಅ.2 ರಂದು ಕುಕ್ಕೆ ಸುಬ್ರಹ್ಮಣ್ಯಕ್ಕೆ ರಥ ತಲುಪಲಿದೆ. ಈ ಸಂದರ್ಭ ಅದ್ದೂರಿಯಾಗಿ ರಥವನ್ನು ಸ್ವಾಗತಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಈ ಹಿನ್ನೆಲೆಯಲ್ಲಿ ವಿವಿಧ ಸಮಿತಿ ರಚಿಸಲಾಯಿತು.
ಸಭೆಯಲ್ಲಿ ವ್ಯವಸ್ಥಾಪನಾ ಸಮಿತಿ ಸದಸ್ಯರುಗಳಾದ ಮಹೇಶ್ ಕುಮಾರ್ ಕರಿಕಳ, ಕೃಷ್ಣಮೂರ್ತಿ ಭಟ್, ಬಾಲಕೃಷ್ಣ ಬಳ್ಳೇರಿ, ರಾಜೀವಿ ರೈ, ರಥದ ದಾನಿ ಅಜಿತ್ ಶೆಟ್ಟಿ ಕಡಬ, ತಾಪಂ ಸದಸ್ಯ ಅಶೋಕ್ ನೆಕ್ರಾಜೆ, ವಾಸ್ತುಶಿಲ್ಪಿ ಪ್ರಸಾದ ಮುನಿಯಂಗಳ ಮೊದಲಾದವರು ಉಪಸ್ಥಿತರಿದ್ದರು.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?