ಸುಳ್ಯ: ಸುಳ್ಯದ ಗಾಂಧಿ ಚಿಂತನ ವೇದಿಕೆಯ ನೇತೃತ್ವದಲ್ಲಿ , ತಾಲೂಕಿನ ಪ್ರಮುಖ ಸಂಘಟನೆಗಳ ಸಹಯೋಗದೊಂದಿಗೆ ಅಕ್ಟೋಬರ್ 2 ರಂದು ಬೆಳ್ಳಾರೆಯಿಂದ ಸುಳ್ಯದವರೆಗೆ ಗಾಂಧಿ ನಡಿಗೆ ಕಾರ್ಯಕ್ರಮ ಆಯೋಜಿಸಲಾಗಿದೆ. ಗಾಂಧಿಜಿಯವರ 150 ವರ್ಷವನ್ನು 15 ಕಿ.ಮೀ.ನಡೆಯುವುದರೊಂದಿಗೆ ಆಚರಿಸಲಾಗುವುದು. ನಡಿಗೆಯಲ್ಲಿ ಭಾಗವಹಿಸುವ 150 ಜನರಿಗೆ ಸೆ.22 ರಂದು ಗಾಂಧಿ ಚಿಂತನೆಯ ಕುರಿತು ಮಾಹಿತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಈ ಕುರಿತು ಸಮಾಲೋಚನಾ ಸಭೆಯು ಸೆ.11ರಂದು ಸಂಜೆ 4 ಗಂಟೆಗೆ ಸುಳ್ಯದ ಯುವಜನ ಸಂಯುಕ್ತ ಮಂಡಳಿಯಲ್ಲಿ ನಡೆಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ. ನಡಿಗೆಯಲ್ಲಿ ಭಾಗವಹಿಸಲು ಇಚ್ಛಿಸುವವರು ಸೆ.14 ರ ಮೊದಲು ಹರೀಶ್ ಬಂಟ್ವಾಳ್ ಸಂಚಾಲಕ, ಗಾಂಧಿ ಚಿಂತನ ವೇದಿಕೆ ಸುಳ್ಯ (9449103555) ಇವರನ್ನು ಸಂಪರ್ಕಿಸಬಹುದು.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?