ಸಂಪಾಜೆ: ಸಂಪಾಜೆ ಗ್ರಾಮದ ಅಭಿವೃದ್ಧಿ ಹರಿಕಾರ ದಿ.ಬಾಲಚಂದ್ರ ಕಳಗಿಯವರ ಸ್ಮರಣಾರ್ಥವಾಗಿ ಹಾಗೂ 20ನೇ ವರ್ಷದ ದೃಷ್ಠಿ ದಿನಾಚರಣೆಯ ಅಂಗವಾಗಿ ಅ.23 ರಂದು ಬೆಳಗ್ಗೆ 9.30 ರಿಂದ ಮಧ್ಯಾಹ್ನ ಗಂಟೆ 1.00 ರ ತನಕ ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 11ನೇ ವರ್ಷದ ನೇತ್ರ ಪರೀಕ್ಷೆ ಮತ್ತು ಕಣ್ಣುಪೊರೆ ಶಸ್ತ್ರ ಚಿಕಿತ್ಸಾ ಶಿಬಿರ ನಡೆಯಲಿದೆ.
ಜಿಲ್ಲಾ ಪಂಚಾಯತ್ ಕೊಡಗು, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಬೋಧಕ ಆಸ್ಪತ್ರೆ ಮಡಿಕೇರಿ ಕೊಡಗು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ ಮಡಿಕೇರಿ, ಪ್ರಾಥಮಿಕ ಆರೋಗ್ಯ ಕೇಂದ್ರ ಸಂಪಾಜೆ, ಗ್ರಾಮ ಪಂಚಾಯತ್ ಸಂಪಾಜೆ, ಚೆಂಬು, ಪೆರಾಜೆ, ಮದೆನಾಡು ಮತ್ತು ಗಾಳಿಬೀಡು, ಪಯಶ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಸಂಪಾಜೆ ಕೊಡಗು, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸ್ತ್ರಿ ಶಕ್ತಿ-ಸ್ವಸಹಾಯ ಸಂಘಗಳ ಒಕ್ಕೂಟ ಮತ್ತು ಸಾರ್ವಜನಿಕ ಸಹಭಾಗಿತ್ವದೊಂದಿಗೆ ಅಂಧತ್ವ ನಿವಾರಣಾ ಸಮಿತಿ ಸಂಪಾಜೆ ಹಾಗೂ ಲಯನ್ಸ್ ಕ್ಲಬ್ ಸಂಪಾಜೆ ಮತ್ತು ರೋಟರಿ ಮಿಸ್ಟಿ ಹಿಲ್ಸ್ ಮಡಿಕೇರಿ ಇವರ ಸಂಯುಕ್ತ ಆಶ್ರಯದಲ್ಲಿ ನೇತ್ರ ಪರೀಕ್ಷೆ ಮತ್ತು ಕಣ್ಣುಪೊರೆ ಶಸ್ತ್ರ ಚಿಕಿತ್ಸಾ ಶಿಬಿರವನ್ನು ಏರ್ಪಡಿಸಲಾಗಿದೆ. ಗ್ರಾಮಸ್ಥರು ಭಾಗವಹಿಸಿ ಈ ಕಾರ್ಯಕ್ರಮನ್ನು ಯಶಸ್ವಿಗೊಳಿಸಿ ಕೊಡಬೇಕಾಗಿ ಪ್ರಕಟಣೆ ತಿಳಿಸಿದೆ.
ಮಾಹಿತಿಗಾಗಿ…
ಪ್ರಾಥಮಿಕ ಆರೋಗ್ಯ ಕೇಂದ್ರ 08272-239793
ಲೋಕನಾಥ್ 8762345613
ಅನಂತಕುಮಾರ್ 7760691917
ರಘು 9980359531
ಕಿಶೋರ್ ಕುಮಾರ್ 9880211315
ಮಲ್ಲಿಕಾರ್ಜುನ 9008981023.
ಅಡಿಕೆಯ ಔಷಧೀಯ ಗುಣಗಳು ಹಲವಾರು ಇವೆ. ಅಡಿಕೆಯ ಚೊಗರಿನಿಂದ ತಯಾರು ಮಾಡುವ ಸೋಪು…
ಮಂಗಳೂರಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ 2025ನೇ ಸಾಲಿನ ಇಂಡಿಯನ್ ಅಕಾಡೆಮಿ ಆಫ್ ಓರಲ್…
ಕೃಷಿಗಾಗಿ, ಕೃಷಿ ಉಳಿಸುವುದಕ್ಕಾಗಿ ಸುರಂಗ ಕೊರೆದು ನೀರು ಹರಿಸಿದ ವಿಶೇಷ ಸಾಧನೆಯನ್ನು ಮಾಡಿದ್ದಾರೆ…
ದೇಶಾದ್ಯಂತ ಅಳಿವಿನಂಚಿಗೆ ತಲುಪಿರುವ ಗುಬ್ಬಚ್ಚಿ ಸಂಕುಲದ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು…
ಸ್ವಾವಲಂಬನೆಯ ಜೀವನ ಕಟ್ಟಿಕೊಳ್ಳುತ್ತಿರುವ ಅನೇಕ ಮಹಿಳಾ ಉದ್ಯಮಿದಾರರಿಗೆ ಎನ್‍ಆರ್ ಎಲ್‍ಎಮ್ ಯೋಜನೆಯು ಸ್ಪೂರ್ತಿಯ…
ಕೊಡಗು ಜಿಲ್ಲೆಯಲ್ಲಿ ಅಕ್ರಮ ಲಾಟರಿ, ಇತರೆ ರಾಜ್ಯದ ಲಾಟರಿಗಳು, ಮಟ್ಕಾಗೆ ಪೂರ್ಣ ಪ್ರಮಾಣದಲ್ಲಿ…