ಅ.26: ವಿವೇಕಾನಂದ ಆಯುರ್ವೇದ ಚಿಕಿತ್ಸಾ ಕೇಂದ್ರದ ಉದ್ಘಾಟನೆ

October 25, 2019
12:00 PM

ಪುತ್ತೂರು:ವಿವೇಕಾನಂದ ಆಯುರ್ವೇದ ಆಸ್ಪತ್ರೆ ವತಿಯಿಂದ ಬನ್ನೂರು ಗ್ರಾಮದಲ್ಲಿ ಉಚಿತ ಆರ್ಯುವೇದ ಚಿಕಿತ್ಸಾ ಕೇಂದ್ರವನ್ನು ಪ್ರಾರಂಭಿಸುತ್ತಿದ್ದು. ಅ. 26ರಂದು ಬೆಳಗ್ಗೆ 10 ಗಂಟೆಗೆ ಬನ್ನೂರು ಗ್ರಾಮ ಪಂಚಾಯತ್ ವಠಾರದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘ, ವಿವೇಕಾನಂದ ಪದವಿಪೂರ್ವ ಕಾಲೇಜು, ಬನ್ನೂರು ಗ್ರಾಮ  ವಿಕಾಸ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ವಿವೇಕಾನಂದ ಆಯುರ್ವೇದ ಚಿಕಿತ್ಸಾ ಕೇಂದ್ರದ ಉದ್ಘಾಟನಾ ಸಮಾರಂಭ ನಡೆಯಲಿದೆ.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕರ್ನಾಟಕ ದಕ್ಷಿಣಪ್ರಾಂತ ಕಾರ್ಯವಾಹಕ ಡಾ.ಜಯಪ್ರಕಾಶ್ ಉದ್ಘಾಟಿಸಲಿದ್ದಾರೆ. ಮಂಗಳೂರಿನ ನಂತೂರು ಭಾರತೀ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಜೀವನ್‍ದಾಸ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದು. ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ.ಎಂ.ಕೃಷ್ಣ ಭಟ್, ವಿವೇಕಾನಂದ ಆಯುರ್ವೇದ ಆಸ್ಪತ್ರೆ ವೈದ್ಯೆ ಡಾ.ರೂಪಶ್ರೀ, ಬನ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ರಮಣಿ ಡಿ. ಗಾಣಿಗ, ಬನ್ನೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜಿನ್ನಪ್ಪಗೌಡ ಕೊಲ್ಯ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಾಲೂಕು ಯೋಜನಾಧಿಕಾರಿ ಜನಾರ್ದನ ಎಸ್., ಮತ್ತಿತರರು ಭಾಗವಹಿಸಲಿದ್ದಾರೆ.

ವಿವೇಕಾನಂದ ವಿದ್ಯಾವರ್ಧಕ ಸಂಘ ಗುಣಮಟ್ಟದ ಮತ್ತು ವ್ಯಕ್ತಿತ್ವ ರೂಪಿಸುವ ಶಿಕ್ಷಣ ಕೊಡುವ ಉದ್ದೇಶದಿಂದ ಪ್ರಾರಂಭವಾದ ಶಿಕ್ಷಣ ಸಂಸ್ಥೆ. ಯಾವುದೇ ಲಾಭದ ಉದ್ದೇಶವಿಲ್ಲದೆ, ಸಮಾಜದ ಜನರಿಂದಲೇ ಪ್ರಜಾಪ್ರಭುತ್ವದ ಮಾದರಿಯಲ್ಲಿ ನಡೆಯುತ್ತಿರುವ ಶಿಕ್ಷಣದ ಮೂಲಕ ಸಮಾಜಕಾರ್ಯದಲ್ಲಿ ತೊಡಗಿಸಿಕೊಂಡಿರುವ ಸಂಸ್ಥೆಯಾಗಿದೆ. ಪ್ರಸ್ತುತ 67 ಶಿಕ್ಷಣ ಸಂಸ್ಥೆಗಳು ಮತ್ತು ಹತ್ತೊಂಬತ್ತು ಸಾವಿರಕ್ಕೂ ಅಧಿಕ ಸಂಖ್ಯೆಯ ವಿದ್ಯಾರ್ಥಿ ಸಮೂಹವನ್ನು ಹೊಂದಿದ್ದು, ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ತನ್ನದೆ ಆದ ಛಾಪನ್ನು ಮೂಡಿಸಿದೆ. ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು 2018ರಲ್ಲಿ ನೆಹರೂನಗರದ ವಿವೇಕಾನಂದ ಕ್ಯಾಂಪಸ್‍ನಲ್ಲಿ ಆರ್ಯುವೇದ ಆಸ್ಪತ್ರೆಯನ್ನು ಪ್ರಾರಂಭಿಸಿದ್ದು ತರಬೇತಿ ಪಡೆದ ನುರಿತ ತಜ್ಞ ವೈದ್ಯರಿಂದ ಪ್ರತಿನಿತ್ಯ ಉಚಿತ ತಪಾಸಣೆ ಮತ್ತು ಚಿಕಿತ್ಸೆ ನೀಡಲಾಗುತ್ತಿದೆ. ಗುಣಮಟ್ಟದ ಆಯುರ್ವೇದ ಔಷಧಗಳು ಚಿಕಿತ್ಸಾ ಕೇಂದ್ರದಲ್ಲಿ ಲಭ್ಯವಿರುತ್ತದೆ.

ಅ.26ಕ್ಕೆ ಆರಂಭಗೊಳ್ಳಲಿರುವ ಬನ್ನೂರಿನ ವಿವೇಕಾನಂದ ಆಯುರ್ವೇದ ಚಿಕಿತ್ಸಾ ಕೇಂದ್ರದಲ್ಲಿ ಪ್ರತಿ ಶನಿವಾರ ಬೆಳಗ್ಗೆ 10ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಉಚಿತ ಚಿಕಿತ್ಸೆಯನ್ನು ನೀಡಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದಕ್ಷಿಣ ಕನ್ನಡ–ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರಿದೆ…!, ರಾಜ್ಯದಲ್ಲಿ ಎಲೆಚುಕ್ಕೆ ರೋಗದಿಂದ 88,559 ಹೆಕ್ಟೇರ್ ಹಾನಿ
March 18, 2026
7:15 AM
by: ದ ರೂರಲ್ ಮಿರರ್.ಕಾಂ
ಚಾಮರಾಜನಗರ–ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ | ಬಿಸಿಲಿನ ನಡುವೆ ಇಳೆ ತಂಪು, ರೈತರಿಗೆ ಆತಂಕ
March 18, 2026
6:51 AM
by: ಮಿರರ್‌ ಡೆಸ್ಕ್
ವಿದ್ಯುತ್ ಕೊರತೆಯ ನಿರ್ಣಾಯಕ ಸಮಸ್ಯೆಗೆ ಪರಿಹಾರ : ದೇಶದ ಸ್ಥಾಪಿತ ಸಾಮರ್ಥ್ಯ 520 ಗಿಗಾ ವ್ಯಾಟ್‌ ದಾಟಿತು
March 18, 2026
6:44 AM
by: ಮಿರರ್‌ ಡೆಸ್ಕ್
ಅಡಿಕೆ ಹಾನಿಕಾರಕವಲ್ಲ – ಅಧ್ಯಯನ ಪ್ರಗತಿಯಲ್ಲಿ | ಹಾಳೆತಟ್ಟೆ ಹಾನಿಕಾರಕವಲ್ಲ
March 17, 2026
10:47 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror