ಪುತ್ತೂರು:ವಿವೇಕಾನಂದ ಆಯುರ್ವೇದ ಆಸ್ಪತ್ರೆ ವತಿಯಿಂದ ಬನ್ನೂರು ಗ್ರಾಮದಲ್ಲಿ ಉಚಿತ ಆರ್ಯುವೇದ ಚಿಕಿತ್ಸಾ ಕೇಂದ್ರವನ್ನು ಪ್ರಾರಂಭಿಸುತ್ತಿದ್ದು. ಅ. 26ರಂದು ಬೆಳಗ್ಗೆ 10 ಗಂಟೆಗೆ ಬನ್ನೂರು ಗ್ರಾಮ ಪಂಚಾಯತ್ ವಠಾರದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘ, ವಿವೇಕಾನಂದ ಪದವಿಪೂರ್ವ ಕಾಲೇಜು, ಬನ್ನೂರು ಗ್ರಾಮ ವಿಕಾಸ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ವಿವೇಕಾನಂದ ಆಯುರ್ವೇದ ಚಿಕಿತ್ಸಾ ಕೇಂದ್ರದ ಉದ್ಘಾಟನಾ ಸಮಾರಂಭ ನಡೆಯಲಿದೆ.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕರ್ನಾಟಕ ದಕ್ಷಿಣಪ್ರಾಂತ ಕಾರ್ಯವಾಹಕ ಡಾ.ಜಯಪ್ರಕಾಶ್ ಉದ್ಘಾಟಿಸಲಿದ್ದಾರೆ. ಮಂಗಳೂರಿನ ನಂತೂರು ಭಾರತೀ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಜೀವನ್‍ದಾಸ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದು. ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ.ಎಂ.ಕೃಷ್ಣ ಭಟ್, ವಿವೇಕಾನಂದ ಆಯುರ್ವೇದ ಆಸ್ಪತ್ರೆ ವೈದ್ಯೆ ಡಾ.ರೂಪಶ್ರೀ, ಬನ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ರಮಣಿ ಡಿ. ಗಾಣಿಗ, ಬನ್ನೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜಿನ್ನಪ್ಪಗೌಡ ಕೊಲ್ಯ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಾಲೂಕು ಯೋಜನಾಧಿಕಾರಿ ಜನಾರ್ದನ ಎಸ್., ಮತ್ತಿತರರು ಭಾಗವಹಿಸಲಿದ್ದಾರೆ.
ವಿವೇಕಾನಂದ ವಿದ್ಯಾವರ್ಧಕ ಸಂಘ ಗುಣಮಟ್ಟದ ಮತ್ತು ವ್ಯಕ್ತಿತ್ವ ರೂಪಿಸುವ ಶಿಕ್ಷಣ ಕೊಡುವ ಉದ್ದೇಶದಿಂದ ಪ್ರಾರಂಭವಾದ ಶಿಕ್ಷಣ ಸಂಸ್ಥೆ. ಯಾವುದೇ ಲಾಭದ ಉದ್ದೇಶವಿಲ್ಲದೆ, ಸಮಾಜದ ಜನರಿಂದಲೇ ಪ್ರಜಾಪ್ರಭುತ್ವದ ಮಾದರಿಯಲ್ಲಿ ನಡೆಯುತ್ತಿರುವ ಶಿಕ್ಷಣದ ಮೂಲಕ ಸಮಾಜಕಾರ್ಯದಲ್ಲಿ ತೊಡಗಿಸಿಕೊಂಡಿರುವ ಸಂಸ್ಥೆಯಾಗಿದೆ. ಪ್ರಸ್ತುತ 67 ಶಿಕ್ಷಣ ಸಂಸ್ಥೆಗಳು ಮತ್ತು ಹತ್ತೊಂಬತ್ತು ಸಾವಿರಕ್ಕೂ ಅಧಿಕ ಸಂಖ್ಯೆಯ ವಿದ್ಯಾರ್ಥಿ ಸಮೂಹವನ್ನು ಹೊಂದಿದ್ದು, ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ತನ್ನದೆ ಆದ ಛಾಪನ್ನು ಮೂಡಿಸಿದೆ. ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು 2018ರಲ್ಲಿ ನೆಹರೂನಗರದ ವಿವೇಕಾನಂದ ಕ್ಯಾಂಪಸ್‍ನಲ್ಲಿ ಆರ್ಯುವೇದ ಆಸ್ಪತ್ರೆಯನ್ನು ಪ್ರಾರಂಭಿಸಿದ್ದು ತರಬೇತಿ ಪಡೆದ ನುರಿತ ತಜ್ಞ ವೈದ್ಯರಿಂದ ಪ್ರತಿನಿತ್ಯ ಉಚಿತ ತಪಾಸಣೆ ಮತ್ತು ಚಿಕಿತ್ಸೆ ನೀಡಲಾಗುತ್ತಿದೆ. ಗುಣಮಟ್ಟದ ಆಯುರ್ವೇದ ಔಷಧಗಳು ಚಿಕಿತ್ಸಾ ಕೇಂದ್ರದಲ್ಲಿ ಲಭ್ಯವಿರುತ್ತದೆ.
ಅ.26ಕ್ಕೆ ಆರಂಭಗೊಳ್ಳಲಿರುವ ಬನ್ನೂರಿನ ವಿವೇಕಾನಂದ ಆಯುರ್ವೇದ ಚಿಕಿತ್ಸಾ ಕೇಂದ್ರದಲ್ಲಿ ಪ್ರತಿ ಶನಿವಾರ ಬೆಳಗ್ಗೆ 10ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಉಚಿತ ಚಿಕಿತ್ಸೆಯನ್ನು ನೀಡಲಿದೆ.
ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…
ಮುಂಜಾನೆಯ ಸಮಯದಲ್ಲಿ ಸ್ಥಬ್ಧವೆನ್ನಿಸುವ ವಾತಾವರಣದಲ್ಲೂ ಸಾಕಷ್ಟು ಹಕ್ಕಿಗಳ ಚಿಲಿಪಿಲಿ ಶಬ್ದ ಕೇಳುತ್ತಿರುತ್ತದೆ. ಆದರೆ…
ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಜನವರಿ 18 ರಂದು…
ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಗೆ ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ…
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಲಾಪುರ ಗ್ರಾಮದಲ್ಲಿ ಸಂಕ್ರಾಂತಿ ಸಂಭ್ರಮ ವಿಶೇಷ ಕಾರ್ಯಕ್ರಮ…
ನಾಗರಿಕತೆ ಬೆಳವಣಿಗೆ, ಅಭಿವೃದ್ಧಿ ಅಂದರೆ ವ್ಯಕ್ತಿತ್ವಗಳೂ ಬೆಳೆಯಬೇಕು. ಅಭಿವೃದ್ಧಿಯ ಸೂಚ್ಯಂಕವೇ ವ್ಯಕ್ತಿತ್ವದ ಬೆಳವಣಿಗೆ…