Advertisement
ಸುದ್ದಿಗಳು

ಅ.6 : ಸುಳ್ಯದಲ್ಲಿ ಸೀತಾರಾಮ ಕಲ್ಯಾಣೋತ್ಸವ

Share

ಸುಳ್ಯ: ಪೈಚಾರು ಶಾಂತಿನಗರ ದೀಪಾಂಜಲಿ ಮಹಿಳಾ ಭಜನಾ ಮಂಡಳಿಯ 7 ನೇ ವರ್ಷದ ವಾರ್ಷಿಕೋತ್ಸವದ ಸಲುವಾಗಿ ಕಾಟುಕುಕ್ಕೆ ಭಜನಾ ಚಾರಿಟೇಬಲ್ ಟ್ರಸ್ಟ್ ಪುತ್ತೂರು ಹಾಗೂ ಶ್ರೀ ಶಾರದಾಂಬಾ ಸೇವಾ ಸಮಿತಿ ಸುಳ್ಯ ಇದರ ಸಹಯೋಗದೊಂದಿಗೆ ಅ.6 ರಂದು ಶ್ರೀ ಶಾರದಾಂಬಾ ಕಲಾ ವೇದಿಕೆಯಲ್ಲಿ ಲೋಕ ಕಲ್ಯಾಣಾರ್ಥವಾಗಿ ಸೀತಾರಾಮ ಕಲ್ಯಾಣೋತ್ಸವ ಕಾರ್ಯಕ್ರಮ ಜರಗಲಿರುವುದು  ಎಂದು ದೀಪಾಂಜಲಿ ಮಹಿಳಾ ಮಂಡಲದ ಅಧ್ಯಕ್ಷೆ ಹರ್ಷ ಕರುಣಾಕರ ಸೇರ್ಕಜೆ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸೀತಾರಾಮ ಕಲ್ಯಾಣೋತ್ಸವವು ಶ್ರೀ ಶಂಕರ ಭಕ್ತಿ ಚಾನೆಲ್ ನ ಭಜನಾ ಸಾಮ್ರಾಟ್ ನಿರ್ಣಾಯಕರಾದ ಹ.ರಾ.ನಾಗರಾಜಾಚಾರ್ಯ ಬೆಂಗಳೂರು ಇವರ ಉಪಸ್ಥಿತಿಯಲ್ಲಿ ನಡೆಯಲಿರುವುದು. ಕಾರ್ಯಕ್ರಮವು ಸಂಜೆ 5 ಗಂಟೆಗೆ ದೀಪಾಂಜಲಿ ಮಹಿಳಾ ಭಜನಾ ಮಂಡಳಿ ಮತ್ತು ಕನಕದಾಸ ಮಕ್ಕಳ ಭಜನಾ ಮಂಡಳಿ ಕನಕಮಜಲು ಇದರ ಸದಸ್ಯರಿಂದ ಭಜನೆಯ ಮೂಲಕ ಆರಂಭವಾಗಲಿದೆ. ನಂತರ ಗಂಟೆ 5.30 ರಿಂದ 6.30 ರ ತನಕ ಸಭಾ ಕಾರ್ಯಕ್ರಮ ನಡೆಯಲಿದ್ದು ಹ.ರಾ.ನಾಗರಾಜಾಚಾರ್ಯ ದ್ವೀಪ ಪ್ರಜ್ವಲನೆ ಮಾಡುವರು. ಸುಳ್ಯ ಶಾಸಕ ಎಸ್.ಅಂಗಾರ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಸಂದರ್ಭದಲ್ಲಿ ದಾಸ ಸಂಕೀರ್ತನಕಾರರಾದ ರಾಮಕೃಷ್ಣ ಕಾಟುಕುಕ್ಕೆ ಯವರಿಗೆ ಗುರುವಂದನೆ ಸಲ್ಲಿಸಲಾಗುವುದು. ಅತಿಥಿಗಳಾಗಿ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕ ಸೀತಾರಾಮ ರೈ ಸವಣೂರು, ಸುಳ್ಯ ತಾಲೂಕು ಭಾರತೀಯ ಮಜ್ದೂರು ಸಂಘ ಅಧ್ಯಕ್ಷ ಗೋಪಾಲಕೃಷ್ಣ ಭಟ್, ದ.ಕ.ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ ಮತ್ತು ದೀಪಾಂಜಲಿ ಭಜನಾ ಮಂಡಳಿಯ ಗೌರವ ಸಲಹೆಗಾರರಾದ ಸುಮಾ ಸುಬ್ಬಾರಾವ್, ಶ್ರೀ ಶಾರದಾಂಬಾ ಸೇವಾ ಸಮಿತಿ ಗೌರವಾಧ್ಯಕ್ಷ ಗೋಕುಲ್ ದಾಸ್ ಉಪಸ್ಥಿತರಿರುತ್ತಾರೆ.
ನಿರಂತರ ನಾಲ್ಕು ಗಂಟೆಗಳ ಕಾಲ ಸೀತಾರಾಮ ಕಲ್ಯಾಣೋತ್ಸವದ ಪೂಜಾ ಕೈಂಕರ್ಯವು ನಡೆಯಲಿರುವುದು. ಈ ಸಂದರ್ಭದಲ್ಲಿ ಭಜನಾ ಸೇವೆಯು ನಡೆಯಲಿರುವುದು ಎಂದು ಅವರು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಗೋಪಾಲಕೃಷ್ಣ ಭಟ್, ಭಜನಾ ಮಂಡಳಿಯ ಪದಾಧಿಕಾರಿಗಳಾದ ಹೇಮಲತಾ ದೇಂಗೋಡಿ, ಕುಸುಮಾ ಮೋಂಟಡ್ಕ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?

ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…

18 hours ago

ಗೋಡಂಬಿ ಬೇರೆ ದೇಶಗಳಿಂದ… ಜಾಗತಿಕ ಮಾರುಕಟ್ಟೆ ವಿಯೆಟ್ನಾಂನ ಕೈಯಲ್ಲಿ..!

ಕಚ್ಚಾ ಗೋಡಂಬಿಯ ದೊಡ್ಡ ಭಾಗವನ್ನು ವಿದೇಶಗಳಿಂದ ಆಮದು ಮಾಡಿಕೊಂಡರೂ, ಸಂಸ್ಕರಣೆ ಮತ್ತು ಮೌಲ್ಯವರ್ಧನೆಯ…

18 hours ago

ರೇಷನ್ ಕಾರ್ಡ್‌ ಇ-ಕೆವೈಸಿಗೆ ಇನ್ನು ಕ್ಯೂ ಬೇಕಿಲ್ಲ – ಮನೆಯಲ್ಲೇ ಇ-ಕೆವೈಸಿಗೆ ‘ಅನ್ನಸೇವೆ’ ಆ್ಯಪ್‌

ಪಡಿತರ ಚೀಟಿಗೆ ಆಧಾರ್‌ ಆಧಾರಿತ ಇ-ಕೆವೈಸಿ ಮಾಡಲು ಇನ್ನು ನ್ಯಾಯಬೆಲೆ ಅಂಗಡಿಗಳ ಮುಂದೆ…

18 hours ago

ಅಡಿಕೆ ವಹಿವಾಟಿನ ಹಿಂದೆ ಮತ್ತೊಂದು ದೊಡ್ಡ ತನಿಖೆ..? ₹1.3 ಕೋಟಿ ನಗದು ವಶ

ಅಕ್ರಮ ಅಡಿಕೆ ವ್ಯಾಪಾರ, ಕಳ್ಳಸಾಗಣೆ ಹಾಗೂ ಜಿಎಸ್‌ಟಿ ವಂಚನೆ ಆರೋಪದ ತನಿಖೆಯಲ್ಲಿ ಪಶ್ಚಿಮ…

19 hours ago

ಇಂಧನ ಮಾತ್ರವಲ್ಲ, ಕೃಷಿಗೂ ಹೊಸ ಮಾರುಕಟ್ಟೆ: ಎಥೆನಾಲ್‌ ಮಿಶ್ರಣ ಕೃಷಿ ವೈವಿಧ್ಯೀಕರಣಕ್ಕೆ ಹೆಜ್ಜೆ ಎಂದ ಗಡ್ಕರಿ

ಎಥೆನಾಲ್‌ ಮಿಶ್ರಣವು ಕೇವಲ ಇಂಧನ ನೀತಿಯಲ್ಲ, ಕೃಷಿ ಉತ್ಪನ್ನಗಳಿಗೆ ಹೊಸ ಮಾರುಕಟ್ಟೆ ಸೃಷ್ಟಿಸುವ…

19 hours ago

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ

ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…

2 days ago