ಬೆಂಗಳೂರು: ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ಹತ್ತನೇ ತರಗತಿ ಫಲಿತಾಂಶ ಸೋಮವಾರ ಆಗಸ್ಟ್ 10ರಂದು ಪ್ರಕಟವಾಗಲಿದೆ. ಮಧ್ಯಾಹ್ನ 3 ಗಂಟೆಗೆ ಇಲಾಖೆಯ ವೆಬ್ಸೈಟ್ karresults.nic.in ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಅಲ್ಲದೇ ವಿದ್ಯಾ ರ್ಥಿಗಳಿಗೆ ಎಸ್ಎಂಎಸ್ ಮೂಲಕವೂ ಪರೀಕ್ಷೆಯ ಫಲಿತಾಂಶ ದೊರೆಯಲಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
Advertisement
ಕೊರೊನಾ ಸೋಂಕಿನ ಭೀತಿಯಿದ್ದರೂ 8.5 ಲಕ್ಷ ವಿದ್ಯಾರ್ಥಿಗಳು ಜುಲೈ 3ರಂದು ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿದ್ದರು. ಈ ವಾರದಲ್ಲೇ ಪರೀಕ್ಷೆ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಹೆಚ್ಚಾಗಿದೆ ಎನ್ನಲಾಗಿತ್ತು. ಆದರೆ, ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಇಂದು ಫೇಸ್ಬುಕ್ನಲ್ಲಿ ಮಾಹಿತಿ ನೀಡಿದ್ದು, ಸೋಮವಾರ ಮಧ್ಯಾಹ್ನ 3 ಗಂಟೆಗೆ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಿಸಲಾಗುವುದು ಎಂದಿದ್ದಾರೆ. examresults.net ಮತ್ತು indiaresults.com ವೆಬ್ಸೈಟ್ನಲ್ಲಿ ಕೂಡ ರಿಸಲ್ಟ್ ನೋಡಬಹುದು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement