ಆತ್ಮತೃಪ್ತಿಯಿಂದ ಸೇವೆ ಮಾಡಿದರೆ ನಿಷ್ಠಾವಂತ ಅಧಿಕಾರಿಯೆಂದು ಕರೆಸಿಕೊಳ್ಳಬಹುದು

September 3, 2019
2:00 PM

ಸುಳ್ಯ:ಆತ್ಮತೃಪ್ತಿಯಿಂದ ಸೇವೆ ಮಾಡಿದರೆ ನಿಷ್ಠಾವಂತ ಅಧಿಕಾರಿಯೆಂದು ಕರೆಸಿಕೊಳ್ಳಬಹುದು ಎಂಬುದಕ್ಕೆ ಹಿಮಕರ ಎಂ ಅವರೇ ಜ್ವಲಂತ ಉದಾಹರಣೆ ಎಂದು ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ಉಪನ್ಯಾಸಕರಾದ ಡಾ. ಅನುರಾಧಾ ಕುರುಂಜಿಯವರು ಅಭಿಪ್ರಾಯಪಟ್ಟರು.

Advertisement

ಅವರು ಸುಳ್ಯ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಭಾರ ವಿಸ್ತರಣಾಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಹಿಮಕರ ಎಂ. ರವರಿಗೆ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ, ಕುರುಂಜಿಭಾಗ್, ಸುಳ್ಯ, ಇಲ್ಲಿ ಏರ್ಪಡಿಸಿದ ಅಭಿನಂದನಾ ಸಮಾರಂಭದಲ್ಲಿ ಅಭಿನಂದನಾ ಭಾಷಣ ಮಾಡುತ್ತಾ ಮಾತನಾಡುತ್ತಿದ್ದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಸುದೀರ್ಘ 40 ವರ್ಷಗಳ ಕಾಲ ಪ್ರಾಮಾಣಿಕ ಸೇವೆ ಸಲ್ಲಿಸಿ, ವಸತಿ ನಿಲಯದ ಮೇಲ್ವಿಚಾರಕರಾಗಿದ್ದ ಸಂದರ್ಭದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯೊಂದಿಗೆ ಅವರ ವ್ಯಕ್ತಿತ್ವ ವಿಕಸನಕ್ಕೆ ದಾರಿಮಾಡಿಕೊಟ್ಟು ಓರ್ವ ದಕ್ಷ ಅಧಿಕಾರಿ ಎಂದು ಕರೆಸಿಕೊಂಡವರು. ಇಂತಹ ಅಧಿಕಾರಿ ವರ್ಗದವರಿದ್ದಲ್ಲಿ ಉತ್ತಮ ಪ್ರಜೆಗಳನ್ನು ಸಮಾಜಕ್ಕೆ ನೀಡಲು ಸಾಧ್ಯ ಎಂದರು.

ಹಿಂದುಳಿದ ವರ್ಗಗಳ ಬಾಲಕರ ವಿದ್ಯಾರ್ಥಿ ನಿಲಯದ ಮೇಲ್ವಿಚಾರಕರಾದ ವಿಜಯ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶುಭಹಾರೈಸಿದರು. ಕೆವಿಜಿ ಪಾಲಿಟೆಕ್ನಿಕ್‍ನ ಚಂದ್ರಶೇಖರ ಬಿಳಿನೆಲೆ ಮಾತನಾಡಿ, ಹಿಮಕರ ಅವರು ಹಲವಾರು ಸವಾಲುಗಳನ್ನು ಸ್ವೀಕರಿಸಿ ಓರ್ವ ಉತ್ತಮ ಅಧಿಕಾರಿ ಎಂದು ಕರೆಸಿಕೊಂಡವರು ಎಂದು ಅವರ ಸೇವೆಯನ್ನು ಶ್ಲಾಘಿಸಿದರು.

ಅಭಿನಂದನೆ ಸ್ವೀಕರಿಸಿದ ಹಿಮಕರ ಎಂ ರವರು ತಮ್ಮ ಸೇವಾವಧಿಯ ಅನುಭವಗಳನ್ನು ಹಂಚಿಕೊಳ್ಳುವುದರೊಂದಿಗೆ ತಮಗೆ ಸಹಕರಿಸಿದವರನ್ನು ನೆನಪಿಸಿಕೊಂಡವರು. ವಸತಿ ನಿಲಯದ ಸಿಬ್ಬಂದಿ ವರ್ಗದವರಾದ ಸುವಾಸಿನಿ, ಸತ್ಯವತಿ, ಹೇಮ, ಅಕ್ಷತ, ಗಾಯತ್ರಿ, ವಸತಿ ನಿಲಯದ ನಾಯಕಿ ಅಶ್ವಿನಿ ಎ ವಿ, ಉಪನಾಯಕಿ ಮೌನ ಹೆಚ್ ಜಿ ಮೊದಲಾದವರು ಉಪಸ್ಥಿತರಿದ್ದರು.

ರಶ್ಮಿತಾ ಮತ್ತು ತಂಡ ಪ್ರಾರ್ಥಿಸಿದ ಕಾರ್ಯಕ್ರಮದಲ್ಲಿ ನಿಶ್ಮಿತಾ ಸ್ವಾಗತಿಸಿ, ಕೃತಿ ಕೆ ಹೆಚ್ ವಂದಿಸಿದರು. ಧನ್ಯಾ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 12-07-2025 | ಸಾಮಾನ್ಯ ಮಳೆ ಮುಂದುವರಿಕೆ | ಜು.16 ರಿಂದ ಮಳೆ ಹೆಚ್ಚಳ |
July 12, 2025
1:52 PM
by: ಸಾಯಿಶೇಖರ್ ಕರಿಕಳ
ತಾಳೆ ಬೆಳೆ ಕೃಷಿ | ಅಡಿಕೆಯ ಪರ್ಯಾಯ ಬೆಳೆಯ ಬಗ್ಗೆ ಮಾಹಿತಿ
July 12, 2025
11:32 AM
by: The Rural Mirror ಸುದ್ದಿಜಾಲ
ಹವಾಮಾನ ಬದಲಾವಣೆಯಿಂದ ನಿದ್ರೆಯ ಮೇಲೆ ಪರಿಣಾಮ – ಅಧ್ಯಯನ ವರದಿ
July 12, 2025
7:56 AM
by: ದ ರೂರಲ್ ಮಿರರ್.ಕಾಂ
ಮಾರುಕಟ್ಟೆ ಶುಲ್ಕ ಬದಲಾವಣೆ ಮಾಡಬಾರದೆಂಬ ಕ್ಯಾಂಪ್ಕೋ ಬೇಡಿಕೆ ಪರಿಗಣನೆ
July 12, 2025
7:32 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group