ಸುಳ್ಯ: ನರೇಂದ್ರ ಮೋದಿ ಮೊದಲ ಬಾರಿಗೆ ಅಧಿಕಾರ ವಹಿಸಿಕೊಂಡ ಸಮಯದಲ್ಲಿ ಆದರ್ಶ ಗ್ರಾಮದ ಪರಿಕಲ್ಪನೆ ಎಂಬ ಹೆಸರಿನ ಬಹುದೊಡ್ಡ ನಾಟಕದ ವಸ್ತುವಾಗಿದೆ.ಅದರಲ್ಲಿ ದ.ಕ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ಆಯ್ದುಕೊಂಡ ಸುಳ್ಯ ತಾಲೂಕಿನ ಬಳ್ಪ ಗ್ರಾಮ ಕೂಡ ಹೊರತಾಗಿಲ್ಲ ಎಂಬ ವಾಸ್ತವ ಇದೀಗ ಜಗಜ್ಜಾಹಿರಾಗಿದೆ ಎಂದು ಎಸ್ ಡಿಪಿಐ ಜಿಲ್ಲಾ ಪ್ರ.ಕಾರ್ಯದರ್ಶಿ ಶಾಹುಲ್ ಎಸ್ ಎಚ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅನಾರೋಗ್ಯ ಪೀಡಿತ ಒಬ್ಬ ರೋಗಿಯನ್ನು ರಸ್ತೆ ವ್ಯವಸ್ಥೆ ಇಲ್ಲದೆ ಮರದ ಚಯರ್ ನಲ್ಲಿ ಕೂರಿಸಿ ಹೊತ್ತುಕೊಂಡು ಹೋಗುವಂತಹ ಪರಿಸ್ಥಿತಿ ಕೋಟಿಗಟ್ಟಲೆ ಖರ್ಚು ಮಾಡಿ ನಿರ್ಮಾಣ ಮಾಡಿದ ಬುದ್ದಿವಂತರ ಜಿಲ್ಲೆಯ ಒಂದು ಆದರ್ಶ ಗ್ರಾಮದಲ್ಲಿಯೇ ಇರುವುದಾದರೆ,ಇಡೀ ದೇಶದಲ್ಲಿ ಉಳಿದ ಆದರ್ಶ ಮತ್ತು ಸಾಮಾನ್ಯ ಗ್ರಾಮಗಳ ಅವ್ಯವಸ್ಥೆ ಯಾವ ರೀತಿಯಲ್ಲಿ ಇರಬಹುದು ಎಂದು ಗಂಭೀರವಾಗಿ ಆಲೋಚಿಸಬೇಕಾದ ವಿಚಾರವಾಗಿದೆ. ಕಳೆದ ಐದು ವರ್ಷಗಳಿಂದ ಯಾವುದೇ ಅಬಿವೃದ್ದಿಯಾಗಿಲ್ಲ ಎಂಬ ವಾಸ್ತವ ಇದಾಗಿದೆ.
ಒಂದು ವೇಳೆ ಬಿಜೆಪಿಗೆ ಅಬಿವೃದ್ದಿ ರಾಜಕಾರಣ ಮಾಡುವುದಿದ್ದರೆ ನಳಿನ್ ಕುಮಾರ್ ರಂತಹ ಅಸಮರ್ಥ ವ್ಯಕ್ತಿಯನ್ನು ಸಂಸದರನ್ನಾಗಿ ಮತ್ತು ಬಿಜೆಪಿಯ ರಾಜ್ಯಾದ್ಯಕ್ಷರನ್ನಾಗಿ ಮಾಡಿ ಮತದಾರರಿಗೆ ದ್ರೋಹ ಬಗೆಯುವ ಕೆಲಸ ಮಾಡುತ್ತಾ ಇರಲಿಲ್ಲ.ಆದುದರಿಂದ ಮತದಾರರು ಮುಂದಿನ ದಿನಗಳಲ್ಲಿ ಬಿಜೆಪಿಯ ಸುಳ್ಳು ಆಶ್ವಾಸನೆ ಮತ್ತು ಭರವಸೆಗಳಿಗೆ ಮಾರುಹೋಗದೆ ಗಂಭೀರವಾಗಿ ಆಲೋಚಿಸಿ ಪರ್ಯಾಯ ರಾಜಕೀಯದ ಬಗ್ಗೆ ಆಲೋಚಿಸಬೇಕೆಂದು ಎಸ್ ಡಿಪಿಐ ಜಿಲ್ಲಾ ಪ್ರ.ಕಾರ್ಯದರ್ಶಿ ಶಾಹುಲ್ ಎಸ್ ಎಚ್ ಹಾಗೂ ಜಿಲ್ಲಾ ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…