ಸುಳ್ಯ: ರಕ್ತದಾನ ಶಿಬಿರ, ಆಧಾರ್ ಕಾರ್ಡ್ ತಿದ್ದುಪಡಿ, ಮತದಾರರ ಮಿಂಚಿನ ನೋಂದಣಿ, ಇಲಾಖೆಗಳ ಮಾಹಿತಿ ಪ್ರದರ್ಶನ.. ಹೀಗೆ ಹಲವು ಮಾಹಿತಿ ಮತ್ತು ಸೇವೆಗಳು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದಲ್ಲಿ ನಡೆದ ಪತ್ರಕರ್ತರ ಗ್ರಾಮ ವಾಸ್ತವ್ಯದಲ್ಲಿ ಜನರಿಗೆ ದೊರೆಯಿತು.
ಶಾಲಾ ಕೊಠಡಿಯಲ್ಲಿ ಎಜೆ ವೈದ್ಯಕೀಯ ಮಹಾ ವಿದ್ಯಾಲಯ ಹಾಗೂ ಸಂಶೋಧನಾ ಕೇಂದ್ರ, ಎ.ಜೆ.ಆಸ್ಪತ್ರೆ ಸಹಭಾಗಿತ್ವದಲ್ಲಿ ವೈದ್ಯಕೀಯ ಶಿಬಿರ ನಡೆಯಿತು. ಹಲವು ವಿಭಾಗದಲ್ಲಿ ಆರೋಗ್ಯ ತಪಾಸಣೆ ನಡೆಸಲಾಯಿತು. 138 ಕ್ಕೂ ಅಧಿಕ ಮಂದಿ ತಪಾಸಣೆ ನಡೆಸಿದರು. ಎಜೆ ಆಸ್ಪತ್ರೆಯ ನುರಿತ ತಜ್ಞರು ತಪಾಸಣೆ ನಡೆಸಿದರು. ಶಾಸಕ ಎಸ್.ಅಂಗಾರ ಮತ್ತು ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಅವರು ಆರೋಗ್ಯ ತಪಾಸಣೆ ಮಾಡುವ ಮೂಲಕ ಶಿಬಿರಕ್ಕೆ ಚಾಲನೆ ನೀಡಲಾಯಿತು. ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ರಕ್ತದಾನ ಶಿಬಿರ ನಡೆಯಿತು. ಈ ಸಂದರ್ಭದಲ್ಲಿ ಸುಮಾರು 35 ಕ್ಕೂ ಅಧಿಕ ಮಂದಿ ರಕ್ತದಾನ ಮಾಡಿದರು. ಇಬ್ಬರು ಪೊಲೀಸ್ ಅಧಿಕಾರಿಗಳು ಕೂಡ ರಕ್ತದಾನ ಮಾಡುವ ಮೂಲಕ ಗಮನ ಸೆಳೆದರು.
75 ಆಧಾರ್ ತಿದ್ದುಪಡಿ: ಗ್ರಾಮ ವಾಸ್ತವ್ಯದ ಅಂಗವಾಗಿ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಆಧಾರ್ ಕಾರ್ಡ್ ತಿದ್ದುಪಡಿ ಪ್ರಕ್ರಿಯೆ ನಡೆಯಿತು. ಸುಮಾರು 75 ಮಂದಿ ಫಲಾನುಭವಿಗಳು ಇದರ ಪ್ರಯೋಜನ ಪಡೆದುಕೊಂಡರು. ಮಡಪ್ಪಾಡಿ ಶಾಲಾ ಆವರಣದಲ್ಲಿ ಜಿಲ್ಲಾಡಳಿತ, ತಾಲೂಕು ಆಡಳಿತ ಮತ್ತು ಚುನಾವಣಾ ಆಯೋಗದ ವತಿಯಿಂದ ಮತದಾರರ ಮಿಂಚಿನ ನೋಂದಣಿ ಪ್ರಕ್ರಿಯೆ ನಡೆಯಿತು. ಗ್ರಾಮದ ಹಲವರು ಹೆಸರು ತಿದ್ದುಪಡಿ, ಸೇರ್ಪಡೆಗೆ ಅರ್ಜಿ ಸಲ್ಲಿಸಿದರು. ವಿವಿಧ ಇಲಾಖೆಗಳ ವತಿಯಿಂದ ದೊರೆಯುವ ಸೌಲಭ್ಯಗಳ ಬಗ್ಗೆ ಮಾಹಿತಿ ಪ್ರದರ್ಶನ ಏರ್ಪಡಿಸಲಾಗಿತ್ತು. ಹೀಗಾಗಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಲವು ಆಯಾಮಗಳಿಂದ ಗ್ರಾಮಸ್ಥರಿಗೆ ಪ್ರಯೋಜನ ನೀಡಿತ್ತು.
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…