ಮಡಿಕೇರಿ: ಸರಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ಹಾಡಿಯ ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಆಧಾರ್ ಗುರುತಿನ ಚೀಟಿ ಕಡ್ಡಾಯವಾಗಿ ಅಗತ್ಯವಿರುವ ಹಿನ್ನೆಲೆ ಪ್ರತಿಯೊಬ್ಬ ಗಿರಿಜನ ಕುಟುಂಬದವರಿಗೆ ಆಧಾರ್ ಗುರುತಿನ ಚೀಟಿ ನೋಂದಾಯಿಸಲು 15 ದಿನಗಳ ಕಾಲ ಮೊಬೈಲ್ ಸಂಚಾರಿ ವಾಹನದ ಮೂಲಕ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಹಾಡಿಗಳಿಗೆ ತೆರಳಿ ಆಧಾರ್ ನೋಂದಣಿ ಮಾಡುವ ಪ್ರಕ್ರಿಯೆಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಸೋಮವಾರ ಚಾಲನೆ ನೀಡಿದರು.
ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಆಧಾರ್ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ರಾಜ್ಯದಲ್ಲಿ ಪ್ರಥಮ ಬಾರಿಗೆ ಹಾಡಿಗಳಿಗೆ ತೆರಳಿ ಆಧಾರ್ ನೋಂದಣಿ ಮಾಡಲಾಗುತ್ತಿದೆ. ಜಿಲ್ಲೆಯ ಮೂರು ತಾಲ್ಲೂಕಿನ ಸುಮಾರು 167 ಹಾಡಿಗಳಿಗೆ ಆಧಾರ್ ಕಿಟ್ಟುಗಳನ್ನು ತೆಗೆದುಕೊಂಡು ಹೋಗಿ ನೋಂದಣಿ ಮಾಡಲಾಗುತ್ತದೆ ಎಂದು ಅವರು ತಿಳಿಸಿದರು.
Advertisement
ವಸತಿ ಸೇರಿದಂತೆ ವೈಯಕ್ತಿಕ ಸೌಲಭ್ಯ ಪಡೆಯುವಂತಾಗಲು ಆಧಾರ್ ಕಡ್ಡಾಯವಾಗಿದ್ದು, ಕೆಲವು ಕುಟುಂಬದವರು ಇನ್ನೂ ಆಧಾರ್ ನೋಂದಣಿ ಮಾಡಿಸದೆ ಸರ್ಕಾರದ ಸೌಲಭ್ಯದಿಂದ ವಂಚಿತರಾಗುತ್ತಿದ್ದಾರೆ. ಇದನ್ನು ಮನಗಂಡು ಹಾಡಿಗಳಿಗೆ ತೆರಳಿ ಆಧಾರ್ ನೋಂದಣಿ ಮಾಡಿಸಲು ಮುಂದಾಗಲಾಗಿದೆ ಎಂದು ಐಟಿಡಿಪಿ ಇಲಾಖೆ ಅಧಿಕಾರಿ ಸಿ.ಶಿವಕುಮಾರ್ ಅವರು ತಿಳಿಸಿದರು.ಜಿಲ್ಲೆಯಲ್ಲಿ ಸುಮಾರು 65 ಸಾವಿರ ಆದಿವಾಸಿ ಜನರಿದ್ದು, ಇವರಿಗೆ ಸರ್ಕಾರದ ವೈಯಕ್ತಿಕ ಸೌಲಭ್ಯಗಳು ಇನ್ನೂ ಮರೀಚಿಕೆಯಾಗಿದೆ. ಎಲ್ಲಾ ಗಿರಿಜನರಿಗೆ ಸೌಲಭ್ಯ ತಲುಪಿಸಬೇಕು ಎಂಬುದು ಸರ್ಕಾರದ ಉದ್ದೇಶವಾಗಿದೆ. ಆದರೆ ಬಳಸಿಕೊಳ್ಳಲು ಮುಂದೆ ಬಂದರೂ ಸಹ ಆಧಾರ್ ಗುರುತಿನ ಚೀಟಿ ಇಲ್ಲದಿರುವುದು ಕಂಡುಬಂದ ಹಿನ್ನೆಲೆ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ ಎಂದರು.
ಜಿಲ್ಲೆಯಲ್ಲಿ 15 ದಿನಗಳ ಕಾಲ ತಾಲ್ಲೂಕಿಗೆ ಒಂದರಂತೆ ಮೂರು ಸಂಚಾರಿ ವಾಹನಗಳನ್ನು ನಿಯೋಜಿಸಲಾಗಿದ್ದು, ಸಂಚಾರಿ ವಾಹನದಲ್ಲಿ ಆಧಾರ್ ಕಿಟ್ ಒಳಗೊಂಡ ಸಲಕರಣೆಗಳು ಇರಲಿದ್ದು, ಆಫ್‍ಲೈನ್ ಮೂಲಕ ಆಧಾರ್ ನೋಂದಣಿ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಕಚೇರಿಯ ಆಧಾರ್ ನೋಂದಣಿ ವಿಭಾಗದ ಪ್ರಶಾಂತ್ ಹಾಗೂ ರಾಕೇಶ್ ಅವರು ಮಾಹಿತಿ ನೀಡಿದರು.
ಒಂದು ದಿನಕ್ಕೆ 60 ಜನರಿಗೆ ಆಧಾರ್ ನೋಂದಣಿ ಮಾಡುವ ಗುರಿ ಇದೆ. ಮೂಲ ನಿವಾಸಿ ಗಿರಿಜನರು ಆಧಾರ್ ನೋಂದಣಿ ಮಾಡಿಸಿ ಸೌಲಭ್ಯ ಪಡೆಯಲು ಮುಂದಾಗಬೇಕಿದೆ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ತಾಲ್ಲೂಕು ಐಟಿಡಿಪಿ ಅಧಿಕಾರಿ ಚಂದ್ರಶೇಖರ್, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿಗಳಾದ ಚಿಕ್ಕಬಸವಯ್ಯ, ಶೇಖರ್, ದೇವರಾಜು, ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳು ಇತರರು ಹಾಜರಿದ್ದರು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…