ಸುಳ್ಯ: ಕೆ ಎಸ್ ಆರ್ ಟಿ ಸಿ ಬಸ್‍ಗಳ ಮಧ್ಯೆ ಉಂಟಾದ ಅಪಘಾತದಲ್ಲಿ ಏಳು ಮಂದಿ ಗಾಯಗೊಂಡ ಘಟನೆ ಸುಳ್ಯ ತಾಲೂಕಿನ ಕನಕಮಜಲು ಗ್ರಾಮದ ಆನೆಗುಂಡಿಯಲ್ಲಿ ಬುಧವಾರ ಸಂಜೆ ಸಂಭವಿಸಿದೆ.
ಶುಂಠಿಕೊಪ್ಪದಿಂದ ಮದುವೆಯ ಒಪ್ಪಂದದ ಮೇರೆಗೆ ಮಂಗಳೂರಿಗೆ ಹೋಗಿ ಹಿಂತಿರುಗುತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಬೆಂಗಳೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಮಧ್ಯೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಗಾಯಗೊಂಡ ಏಳು ಮಂದಿ ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಹೊರ ರೋಗಿಗಳಾಗಿ ಚಿಕಿತ್ಸೆ ಪಡೆದಿದ್ದಾರೆ. ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣೆ ದಾಖಲಿಸಿದ್ದಾರೆ.
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…