Advertisement
ಸುದ್ದಿಗಳು

ಆನೆ ಬಂದರೆ ಅರಣ್ಯ ಇಲಾಖೆ ಸಿಬ್ಬಂದಿಗಳು ಬರುವುದಿಲ್ಲ….!

Share

ಸುಳ್ಯ:ಮಂಡೆಕೋಲಿನಲ್ಲಿ ಹಲವು ದಿನಗಳಿಂದ ಕಾಡಾನೆಗಳ ಹಿಂಡು ಬೀಡುಬಿಟ್ಟು ದಾಳಿ ನಡೆಸಿದರೂ ಅರಣ್ಯ ಇಲಾಖೆಯ ಸಿಬ್ಬಂದಿಗಳು ಬಂದಿಲ್ಲ ಮತ್ತು ಆನೆಗಳನ್ನು ಓಡಿಸಲು ಇಲಾಖೆ ಪಟಾಕಿಯನ್ನೂ ಒದಗಿಸಿಲ್ಲ ಎಂಬ ದೂರುಗಳು ಬಂದಿದೆ….! ಹೀಗೆಂದು ಅರಣ್ಯ ಇಲಾಖಾ ಸಿಬಂದಿಗಳನ್ನು ಪ್ರಶ್ನಿಸಿದ್ದು ತಾ ಪಂ ಅಧ್ಯಕ್ಷ ಚನಿಯ ಕಲ್ತಡ್ಕ.

ತಾ.ಪಂ.ಅಧ್ಯಕ್ಷ ಚನಿಯ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ತಾಲೂಕು ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಆನೆಯ ವಿಷಯ ಚರ್ಚೆಯಾಯಿತು.  ಆನೆ ಬಂದರೂ ಬಾರದೇ ಇರುವುದು ಮಾತ್ರವಲ್ಲ ಜನಪ್ರತಿನಿಧಿಗಳಲ್ಲಿ  ಈ ಬಗ್ಗೆ ದೂರು ಹೇಳಿದ್ದು ಯಾಕೆ ಎಂದು ಅರಣ್ಯ ಸಿಬ್ಬಂದಿಗಳು ಸ್ಥಳೀಯರ ಮೇಲೆ ಸವಾರಿ ಮಾಡಿರುವ ಬಗ್ಗೆ ದೂರುಗಳಿವೆ. ಇದು ಯಾಕೆ, ಈ ರೀತಿ ವರ್ತಿಸಿದ ಸಿಬ್ಬಂದಿಯ ಮೇಲೆ ಕ್ರಮ ಜರುಗಿಸಿ ಎಂದು ಅಧ್ಯಕ್ಷರು ಅರಣ್ಯ ಇಲಾಖೆಯ ಅಧಿಕಾರಿಗಳನ್ನು ಹೇಳಿದರು. ಈ ಕುರಿತು ಸಿಬ್ಬಂದಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡುವುದಾಗಿ ವಲಯ ಅರಣ್ಯಾಧಿಕಾರಿ ಮಂಜುನಾಥ್ ಹೇಳಿದರು.

ಮಂಡೆಕೋಲು, ದೇಲಂಪಾಡಿಯಲ್ಲಿ ಸಭೆ:
ಗಡಿಪ್ರದೇಶದಲ್ಲಿ ಉಂಟಾಗಿರುವ ಆನೆ ಹಾವಳಿಯ ಕುರಿತು ಕೇರಳ ಮತ್ತು ಕರ್ನಾಟಕದ ಅಧಿಕಾರಿಗಳ ಜಂಟಿ ಸಭೆ ಮಂಗಳೂರಿನಲ್ಲಿ ನಡೆದಿತ್ತು. ಮುಂದಿನ ಹಂತದಲ್ಲಿ ಮಂಡೆಕೋಲು ಮತ್ತು ದೇಲಂಪಾಡಿಯಲ್ಲಿ ಎರಡೂ ರಾಜ್ಯಗಳ ಅಧಿಕಾರಿಗಳ ಸಭೆ ನಡೆಯಲಿದೆ ಎಂದು ಸುಳ್ಯ ವಲಯ ಅರಣ್ಯಾಧಿಕಾರಿ ಎನ್.ಮಂಜುನಾಥ್ ತಿಳಿಸಿದರು. ಸಭೆ ನಡೆಸಿ ಸ್ಥಳೀಯ ಜನರ ಮತ್ತು ಜನಪ್ರತಿನಿಧಿಗಳ ಅಭಿಪ್ರಾಯ ಪಡೆದು ಅದನ್ನು ಕ್ರೂಡೀಕರಿಸಿ ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸಭೆ ನಡೆಸಿ ಶಾಶ್ವತ ಪರಿಹಾರ ಯೋಜನೆ ರೂಪಿಸಲಾಗುವುದು ಎಂದು ಅವರು ವಿವರಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!

ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…

16 hours ago

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

2 days ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

3 days ago

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…

3 days ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

3 days ago