ಸುಳ್ಯ: ಕರ್ನಾಟಕ ಮತ್ತು ಕೇರಳ ರಾಜ್ಯಗಳ ಗಡಿ ಪ್ರದೇಶದಲ್ಲಿ ಆನೆ ದಾಳಿಯಿಂದ ಉಂಟಾಗಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲು ದ.ಕ.ಉಸ್ತುವಾರಿ ಸಚಿವ ಯು.ಟಿ.ಖಾದರ್ ನೇತೃತ್ವದಲ್ಲಿ ಎರಡೂ ರಾಜ್ಯಗಳ ಅಧಿಕಾರಿಗಳಿಗಳ ಸಭೆ ಮಂಗಳೂರಿನಲ್ಲಿ ನಡೆಯಿತು.
Advertisement
ದ.ಕ.ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್, ಕಾಸರಗೋಡು ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ಮತ್ತು ಎರಡೂ ರಾಜ್ಯಗಳ ಅರಣ್ಯ ಇಲಾಖೆ ಮತ್ತಿತರ ಅಧಿಕಾರಿಗಳು ಭಾಗವಹಸಿದ್ದರು.
ಸುಳ್ಯ ತಾಲೂಕಿನ ಮತ್ತು ಕಾಸರಗೋಡು ಜಿಲ್ಲೆಯ ಗಡಿ ಪ್ರದೇಶದಲ್ಲಿ ಹಲವು ವರ್ಷಗಳಿಂದ ಆನೆಗಳ ಹಾವಳಿ ಅಧಿಕವಾಗಿದ್ದು ಜನರು ರೋಸಿ ಹೋಗಿದ್ದಾರೆ. ಈ ಹಿನ್ನಲೆಯಲ್ಲಿ ವಿಶೇಷ ಆದ್ಯತೆಯ ಮೇರೆಗೆ ಕ್ರಮ ಕೈಗೊಳ್ಳಬೇಕಾಗಿರುವುದರಿಂದ ಸಭೆ ನಡೆಸಲಾಯಿತು. 11 ಆನೆಗಳ ಹಿಂಡು ಗಡಿಪ್ರದೇಶದಲ್ಲಿ ದಾಂಧಲೆ ನಡೆಸುತ್ತಿದ್ದು ಎರಡೂ ರಾಜ್ಯಗಳಿಗೆ ತಲೆ ನೋವು ಸೃಷ್ಟಿಸಿದೆ. ಜನಪ್ರತಿನಿಧಿಗಳ ಮತ್ತು ಅಧಿಕಾರಿಗಳ ಸಭೆ ನಡೆಸಿ ಚರ್ಚೆ ನಡೆಸುವುದಾಗಿ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement