ಸುಳ್ಯ:ಸುಳ್ಯ ತಾಲೂಕಿನಲ್ಲಿ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ಒಂದು ವರುಷದಲ್ಲಿ ಸುಳ್ಯ ತಾಲೂಕಿನಲ್ಲಿ ಒಟ್ಟು 699 ಫಲಾನುಭವಿಗಳಿಗೆ 1,63,56,604 ರೂ ಚಿಕಿತ್ಸಾ ಸೌಲಭ್ಯ ದೊರಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ 5,350 ಆಯುಷ್ಮಾನ್ ಭಾರತ್- ಆರೋಗ್ಯ ಕರ್ನಾಟಕ ಕಾರ್ಡ್ ವಿತರಣೆ ಮಾಡಲಾಗಿದೆ. ಸರಕಾರಿ ಆಸ್ಪತ್ರೆಯಲ್ಲಿ ಆರೋಗ್ಯ ಕಾರ್ಡ್ ಯೋಜನೆಯಲ್ಲಿ 493 ಪ್ರಿ-ಆಥ್ ನ್ನು ಅಪ್ಲೋಡ್ ಮಾಡಲಾಗಿದೆ. ಇದರ ರಿಕ್ವೆಸ್ಟ್ ಮೊತ್ತ 22,63,055 ಆಗಿದ್ದು ರೂ 10,84,520 ಆರೋಗ್ಯಾ ರಕ್ಷಾ ಸಮಿತಿ ಖಾತೆಗೆ ಬಂದಿರುತ್ತದೆ. ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಜನರಲ್ ಮೆಡಿಸಿನ್, ಜನರಲ್ ಸರ್ಜರಿ, ಕಣ್ಣಿನ ಶಸ್ತ್ರ, ಎಲುಬು ಶಸ್ತ್ರ ಚಿಕಿತ್ಸೆ, ಕಿವಿ, ಮೂಗು, ಗಂಟಲು, ಶಸ್ತ್ರ ಚಿಕಿತ್ಸೆ ಮತ್ತು ಸ್ತ್ರೀ ರೋಗ ಶಸ್ತ್ರ ಚಿಕಿತ್ಸೆಗಳು ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ನಡೆಯುತ್ತದೆ.
ಹೃದಯ ರೋಗ ಮತ್ತು ಕ್ಯಾನ್ಸರ್ ಗೆ ಕಿಮೋಥೆರಪಿ ಮತ್ತು ರೇಡಿಯೇಶನ್ ಮತ್ತು ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯಲ್ಲಿ ಇಲ್ಲದ ಚಿಕಿತ್ಸೆಗೆ ನೇರವಾಗಿ ಆಯುಷ್ಮಾನ್ ನೊಂದಾವಣೆ ಮಾಡಿಕೊಂಡ ರೋಗಿಯು ಬಯಸಿದ ಖಾಸಗೀ ಆಸ್ಪತ್ರೆಗೆ ರೆಫರಲ್ ನೀಡಲಾಗುತ್ತದೆ. ಉಳಿದ ರೋಗಿಯನ್ನು ಹೆಚ್ಚುವರಿ ನೆರವಿನ ಚಿಕಿತ್ಸೆಗೆ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗೆ ರೆಫರ್ ಮಾಡಲಾಗುತ್ತಿದ್ದು ಇದುವರೆಗೆ 113 ರೋಗಿಗಳಿಗೆ ರೆಫರ್ ಪತ್ರ ನೀಡಲಾಗಿದೆ ಎಂದು ಸರಕಾರಿ ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.