ಸುಳ್ಯ: ಆರಾಮವಾಗಿದ್ದೇವೆ. ಏನೂ ಸಮಸ್ಯೆ ಆಗಿಲ್ಲ ಎಂದು ಕಾರು ಅಪಘಾತಕ್ಕೀಡಾಗಿ ಅಲ್ಪ ಸ್ವಲ್ಪ ಗಾಯಗೊಂಡು ಸುಳ್ಯ ಕೆವಿಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತರುವ ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕ ರಾಮದಾಸ್ ಹೇಳಿದ್ದಾರೆ.
ತಮ್ಮನ್ನು ಭೇಟಿಯಾದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಮಾಡಿದ ಅವರು, ಖಾಸಗೀ ಕಾರ್ಯಕ್ರಮದ ನಿಮಿತ್ತ ಮಂಗಳೂರಿಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಹೆಚ್ಚಿನ ಸಮಸ್ಯೆ ಆಗಿಲ್ಲ. ಈಗ ಆರಾಮವಾಗಿರುವುದಾಗಿ ಹೇಳಿದರು. ರಾಮದಾಸ್ ಮತ್ತು ಅವರ ಸಹೋದರ ಶ್ರೀಕಾಂತ್ ಖಾಸಗೀ ಕಾರ್ಯಕ್ರಮದ ನಿಮಿತ್ತ ಮಂಗಳೂರಿಗೆ ತೆರಳುತ್ತಿದ್ದಾಗ
ಅವರ ಕಾರು ಇಂದು ಬೆಳಿಗ್ಗೆ ಜಾಲ್ಸೂರಿನಲ್ಲಿ ರಸ್ತೆ ಪಕ್ಕದ ಮೋರಿಗೆ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿತು. ಶಾಸಕ ರಾಮದಾಸ್ ಮತ್ತು ಚಾಲಕ ಅಲ್ಪಸ್ವಲ್ಪ ಗಾಯಗೊಂಡಿದ್ದರು. ಅವರಿಗೆ ಕೆವಿಜಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್‌ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…
ಗುಜ್ಜೆ ಮತ್ತು ಕಡಲೆ ಬಳಸಿ ತಯಾರಿಸುವ ಸಾಂಪ್ರದಾಯಿಕ ಗಸಿ ರುಚಿಕರ ಆಹಾರ. ಚಪಾತಿ…
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…