ಆರ್ಟಿಕಲ್ 370 ರದ್ದತಿ ದೇಶದ ಅಭಿವೃದ್ಧಿಗೆ ಪೂರಕ

September 20, 2019
6:00 PM

ಪುತ್ತೂರು: ಭಾರತದ ಸಂವಿಧಾನ ಪ್ರಜಾಪ್ರಭುತ್ವದ ಶ್ರೇಷ್ಟ ಗ್ರಂಥವಾಗಿದೆ. ಸ್ವಾತಂತ್ರ್ಯ, ಸಮಾನತೆ, ಆತ್ಮಗೌರವ ಮತ್ತು ನ್ಯಾಯ ವ್ಯವಸ್ಥೆಯು ಇದರ ಆಧಾರ ಸ್ತಂಭಗಳು. ಇಷ್ಟಾದರೂ ಭಾರತದಲ್ಲಿ ಏಕತೆಯನ್ನು ಸಾಧಿಸಲು ಕಾಶ್ಮೀರ ವಿಚಾರ ಸದಾ ಅಡ್ಡಿಯೇ ಆಗಿತ್ತು. ಹೀಗಾಗಿ ಕೇಂದ್ರ ಸರ್ಕಾರ ಆರ್ಟಿಕಲ್ 370 ವಿಧಿಯನ್ನು ರದ್ದುಗೊಳಿಸಿ ದೇಶದಲ್ಲಿ ದೊಡ್ಡ ಮಟ್ಟದಲ್ಲಾಗುತ್ತಿದ್ದ ಅಸಮಾನತೆಯನ್ನು ಹೋಗಲಾಡಿಸಿದೆ ಎಂದು ಕರ್ನಾಟಕ ವಿಧಾನ ಸಭಾ ಶಾಸಕ ಪಿ. ರಾಜೀವ ಕುಡುಚಿ ಹೇಳಿದರು.

ಅವರು  ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನಾ ಕೇಂದ್ರದಲ್ಲಿ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗ, ಐಕ್ಯುಎಸಿ ಘಟಕದ ಆಶ್ರಯದಲ್ಲಿ ಪೊಲಿಟಿಕಲ್ ಫೋರಂ, ಸ್ನಾತಕೋತ್ತರ ವಾಣಿಜ್ಯ ವಿಭಾಗ, ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಸಹಯೋಗದಲ್ಲಿ ಆಯೋಜಿಸಿದ್ದ ‘ಆರ್ಟಿಕಲ್ 370’ ಎಂಬ ವಿಷಯದ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಮುಖ್ಯ ಉಪನ್ಯಾಸಕರಾಗಿ ಮಾತನಾಡಿದರು.

ಭಾರತ ಒಗ್ಗೂಡುವಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲರ ಕೆಲಸ ದೊಡ್ಡದು. ದೇಶ ವಿಭಜನೆಯ ಸಂದರ್ಭದಲ್ಲಾದ ಕೆಲ ತಪ್ಪುಗಳು ಕಾಶ್ಮೀರಕ್ಕೆ ವಿಶೇಷ ವಿಧಿಯನ್ನು ಕಲ್ಪಿಸಿತ್ತು. ಇದು ಭಾರತದ ಏಕತೆಗೆ ಧಕ್ಕೆಯುಂಟು ಮಾಡುವುದರ ಜೊತೆಗೆ ಅಸಮಾನತೆಯನ್ನು ಸೃಷ್ಟಿಸಿತ್ತು. ಇವೆಲ್ಲವನ್ನು ಮನಗಂಡ ಕೇಂದ್ರ ಸರ್ಕಾರ ಆರ್ಟಿಕಲ್ 370 ವಿಧಿಯನ್ನು ರದ್ದುಗೊಳಿಸುವ ಐತಿಹಾಸಿಕ ನಿರ್ಧಾರ ಕೈಗೊಂಡು ಜನರ ಮೆಚ್ಚುಗೆಗೆ ಪಾತ್ರವಾಗಿದೆ. 370ನೇ ವಿಧಿಯ ರದ್ದತಿಯಿಂದ ದೇಶ ಏಕತೆಯ ಮಂತ್ರ ಜಪಿಸುವಂತಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪದವಿ ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಶಂಕರ ನಾರಾಯಣ ಭಟ್ ಮಾತನಾಡಿ, ಈ ಹಿಂದೆ ಕಾಶ್ಮೀರಕ್ಕೆ ಅನುದಾನದ ಮಹಾಪೂರವೇ ಹರಿದು ಬಂದಿದ್ದರೂ ಅಭಿವೃದ್ಧಿ ಮಾತ್ರ ಮರೀಚಿಕೆಯಾಗಿತ್ತು. 370ನೇ ವಿಧಿಯ ಲಾಭ ಪಡೆದುಕೊಂಡ ಅಂದಿನ ಸರ್ಕಾರಗಳು ಇದನ್ನು ದುರುಪಯೋಗಪಡಿಸಿಕೊಂಡಿತ್ತು. 370ನೇ ವಿಧಿಯ ರದ್ದತಿಯಿಂದಾದರೂ ಕಾಶ್ಮೀರ ಪ್ರಗತಿ ಕಾಣುವಂತಾಗಲಿ ಎಂದು ಅಭಿಪ್ರಾಯಪಟ್ಟರು.

ವಿದ್ಯಾರ್ಥಿನಿ ದೀಪಾ ಪ್ರಸನ್ನ ಪ್ರಾರ್ಥಿಸಿದರು. ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಂಯೋಜಕಿ ಡಾ. ವಿಜಯ ಸರಸ್ವತಿ ಸ್ವಾಗತಿಸಿದರು. ಪೊಲಿಟಿಕಲ್ ಫೋರಂನ ಸಂಯೋಜಕಿ ಅನಿತಾ ಕಾಮತ್ ವಂದಿಸಿದರು. ಸ್ನಾತಕೋತ್ತರ ವಾಣಿಜ್ಯ ಉಪನ್ಯಾಸಕಿ ಲಕ್ಷ್ಮೀ ವಿ. ಭಟ್ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು
September 16, 2026
11:09 PM
by: ದ ರೂರಲ್ ಮಿರರ್.ಕಾಂ
“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ
September 16, 2026
9:14 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ
September 16, 2026
3:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ
September 16, 2026
2:18 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror