ಪುತ್ತೂರು: ಭಾರತದ ಸಂವಿಧಾನ ಪ್ರಜಾಪ್ರಭುತ್ವದ ಶ್ರೇಷ್ಟ ಗ್ರಂಥವಾಗಿದೆ. ಸ್ವಾತಂತ್ರ್ಯ, ಸಮಾನತೆ, ಆತ್ಮಗೌರವ ಮತ್ತು ನ್ಯಾಯ ವ್ಯವಸ್ಥೆಯು ಇದರ ಆಧಾರ ಸ್ತಂಭಗಳು. ಇಷ್ಟಾದರೂ ಭಾರತದಲ್ಲಿ ಏಕತೆಯನ್ನು ಸಾಧಿಸಲು ಕಾಶ್ಮೀರ ವಿಚಾರ ಸದಾ ಅಡ್ಡಿಯೇ ಆಗಿತ್ತು. ಹೀಗಾಗಿ ಕೇಂದ್ರ ಸರ್ಕಾರ ಆರ್ಟಿಕಲ್ 370 ವಿಧಿಯನ್ನು ರದ್ದುಗೊಳಿಸಿ ದೇಶದಲ್ಲಿ ದೊಡ್ಡ ಮಟ್ಟದಲ್ಲಾಗುತ್ತಿದ್ದ ಅಸಮಾನತೆಯನ್ನು ಹೋಗಲಾಡಿಸಿದೆ ಎಂದು ಕರ್ನಾಟಕ ವಿಧಾನ ಸಭಾ ಶಾಸಕ ಪಿ. ರಾಜೀವ ಕುಡುಚಿ ಹೇಳಿದರು.
ಅವರು ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನಾ ಕೇಂದ್ರದಲ್ಲಿ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗ, ಐಕ್ಯುಎಸಿ ಘಟಕದ ಆಶ್ರಯದಲ್ಲಿ ಪೊಲಿಟಿಕಲ್ ಫೋರಂ, ಸ್ನಾತಕೋತ್ತರ ವಾಣಿಜ್ಯ ವಿಭಾಗ, ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಸಹಯೋಗದಲ್ಲಿ ಆಯೋಜಿಸಿದ್ದ ‘ಆರ್ಟಿಕಲ್ 370’ ಎಂಬ ವಿಷಯದ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಮುಖ್ಯ ಉಪನ್ಯಾಸಕರಾಗಿ ಮಾತನಾಡಿದರು.
ಭಾರತ ಒಗ್ಗೂಡುವಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲರ ಕೆಲಸ ದೊಡ್ಡದು. ದೇಶ ವಿಭಜನೆಯ ಸಂದರ್ಭದಲ್ಲಾದ ಕೆಲ ತಪ್ಪುಗಳು ಕಾಶ್ಮೀರಕ್ಕೆ ವಿಶೇಷ ವಿಧಿಯನ್ನು ಕಲ್ಪಿಸಿತ್ತು. ಇದು ಭಾರತದ ಏಕತೆಗೆ ಧಕ್ಕೆಯುಂಟು ಮಾಡುವುದರ ಜೊತೆಗೆ ಅಸಮಾನತೆಯನ್ನು ಸೃಷ್ಟಿಸಿತ್ತು. ಇವೆಲ್ಲವನ್ನು ಮನಗಂಡ ಕೇಂದ್ರ ಸರ್ಕಾರ ಆರ್ಟಿಕಲ್ 370 ವಿಧಿಯನ್ನು ರದ್ದುಗೊಳಿಸುವ ಐತಿಹಾಸಿಕ ನಿರ್ಧಾರ ಕೈಗೊಂಡು ಜನರ ಮೆಚ್ಚುಗೆಗೆ ಪಾತ್ರವಾಗಿದೆ. 370ನೇ ವಿಧಿಯ ರದ್ದತಿಯಿಂದ ದೇಶ ಏಕತೆಯ ಮಂತ್ರ ಜಪಿಸುವಂತಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪದವಿ ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಶಂಕರ ನಾರಾಯಣ ಭಟ್ ಮಾತನಾಡಿ, ಈ ಹಿಂದೆ ಕಾಶ್ಮೀರಕ್ಕೆ ಅನುದಾನದ ಮಹಾಪೂರವೇ ಹರಿದು ಬಂದಿದ್ದರೂ ಅಭಿವೃದ್ಧಿ ಮಾತ್ರ ಮರೀಚಿಕೆಯಾಗಿತ್ತು. 370ನೇ ವಿಧಿಯ ಲಾಭ ಪಡೆದುಕೊಂಡ ಅಂದಿನ ಸರ್ಕಾರಗಳು ಇದನ್ನು ದುರುಪಯೋಗಪಡಿಸಿಕೊಂಡಿತ್ತು. 370ನೇ ವಿಧಿಯ ರದ್ದತಿಯಿಂದಾದರೂ ಕಾಶ್ಮೀರ ಪ್ರಗತಿ ಕಾಣುವಂತಾಗಲಿ ಎಂದು ಅಭಿಪ್ರಾಯಪಟ್ಟರು.
ವಿದ್ಯಾರ್ಥಿನಿ ದೀಪಾ ಪ್ರಸನ್ನ ಪ್ರಾರ್ಥಿಸಿದರು. ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಂಯೋಜಕಿ ಡಾ. ವಿಜಯ ಸರಸ್ವತಿ ಸ್ವಾಗತಿಸಿದರು. ಪೊಲಿಟಿಕಲ್ ಫೋರಂನ ಸಂಯೋಜಕಿ ಅನಿತಾ ಕಾಮತ್ ವಂದಿಸಿದರು. ಸ್ನಾತಕೋತ್ತರ ವಾಣಿಜ್ಯ ಉಪನ್ಯಾಸಕಿ ಲಕ್ಷ್ಮೀ ವಿ. ಭಟ್ ಕಾರ್ಯಕ್ರಮ ನಿರೂಪಿಸಿದರು.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…