Advertisement
ಸುದ್ದಿಗಳು

ಆರ್ಥಿಕ ಕಾಯಿದೆಗಳು ಕಠಿಣವಾಗಿರುವುದರಿಂದ ಸಹಕಾರಿ ಕ್ಷೇತ್ರ ಮುಗ್ಗರಿಸಿದೆ- ಪ್ರಕಾಶ್ ರಾವ್ ಅಭಿಮತ

Share

ಸುಳ್ಯ:  ಆರ್ಥಿಕ ಕಾಯಿದೆಗಳು ಮತ್ತು ನಿಬಂಧನೆಗಳು ಕಠಿಣವಾಗುತ್ತಿರುವುದರಿಂದ ರಾಜ್ಯದಲ್ಲಿ ಸಹಕಾರಿ ಕ್ಷೇತ್ರ ಮುಗ್ಗರಿಸುತ್ತಿದೆ ಎಂದು ಸಹಕಾರ ಸಂಘಗಳ ಮೈಸೂರು ಪ್ರಾಂತ್ಯದ ಜಂಟಿ ನಿಬಂಧಕ ಪ್ರಕಾಶ್ ರಾವ್ ಅಭಿಪ್ರಾಯಪಟ್ಟಿದ್ದಾರೆ.

ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ಬೆಂಗಳೂರು ಹಾಗು ಸುಳ್ಯದ ಶ್ರೀ ವೆಂಕಟರಮಣ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯ ಸಹಯೋಗದಲ್ಲಿ ಮೈಸೂರು ವಿಭಾಗದ ವ್ಯಾಪ್ತಿಗೊಳಪಡುವ ಎಲ್ಲಾ ಜಿಲ್ಲೆಗಳ ಪತ್ತಿನ ಸಹಕಾರ ಸಂಘಗಳ ಆಡಳಿತ ಮಂಡಳಿ ನಿರ್ದೇಶಕರು,ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಹಾಗು ಸಿಬ್ಬಂದಿಗಳಿಗೆ ಸುಳ್ಯ ಕೆ.ವಿ.ಜಿ. ಆಯುರ್ವೇದ ಕಾಲೇಜಿನ ಸಭಾಂಗಣದಲ್ಲಿ ನಡೆದ ಶೈಕ್ಷಣಿಕ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಆರ್ಥಿಕ ಹಿನ್ನಡೆ ಇದ್ದರೂ ಜನರಿಗೆ ತಕ್ಷಣ ಸ್ಪಂಧಿಸುವ ಸಂಸ್ಥೆಗಳೆಂದರೆ ಕ್ರೆಡಿಟ್ ಕೋ ಆಪರೇಟಿವ್ ಸಂಸ್ಥೆಗಳು. ಆದರೆ ಇತ್ತೀಚಿನ ದಿನಗಳಲ್ಲಿ ಕಾನೂನು ನಿಬಂಧನೆಗಳು ಕಠಿಣವಾದಂತೆ ಕ್ರೆಡಿಟ್ ಸೊಸೈಟಿಗಳಿಗೂ ಹಿನ್ನಡೆ ಆಗಿದೆ. ಅವುಗಳ ವೇಗಕ್ಕೆ ಕಡಿವಾಣ ಬಿದ್ದಿದೆ. ಸ್ವಚ್ಛಂದವಾದ ಆರ್ಥಿಕ ವ್ಯವಹಾರದಿಂದ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಗಳು ಇನ್ನಷ್ಟು ಗಟ್ಟಿಯಾಗಿ ಬೆಳೆಯಬೇಕು ಎಂದು ಅವರು ಹೇಳಿದರು. ಸಾಲ ವಸೂಲಾತಿ ಎಂಬುದು ಸವಾಲಿನ ವಿಷಯ. ಎಷ್ಟೇ ಆರ್ಥಿಕ ಹಿನ್ನಡೆ ಇದ್ದರೂ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸಹಕಾರಿ ಕ್ಷೇತ್ರ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಅವರು ಶ್ಲಾಘಿಸಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳದ ಅಧ್ಯಕ್ಷೆ ಕೆ.ಲಲಿತ ಜಿ.ಟಿ.ದೇವೇಗೌಡ ಮಾತನಾಡಿ ಸಹಕಾರಿ ಸಂಸ್ಥೆಗಳನ್ನು ಕಟ್ಟಿ ಬೆಳೆಸುವುದು ಅತ್ಯಂತ ಶ್ರಮದಾಯಕ ಕೆಲಸ. ಅಂತಹಾ ಶ್ರಮದಿಂದಲೇದಲೇ ಸಮಾಜಕ್ಕೆ ಒಳಿತಾಗುತ್ತದೆ ಎಂದರು. ಪತ್ತಿನ ಸಹಕಾರ ಸಂಘಗಳ ಆಡಳಿತ ಮಂಡಳಿ ಮತ್ತು ಸಿಬ್ಬಂದಿಗಳು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಶೈಕ್ಷಣಿಕ ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ. ರಾಜ್ಯ ಸಹಕಾರ ಮಹಾಮಂಡಳಕ್ಕೆ ಬೆಂಗಳೂರಿನಲ್ಲಿ ಸ್ವಂತ ನಿವೇಶನವನ್ನು ಖರೀದಿಸಲಾಗಿದೆ. ಮಹಾಮಂಡಳಕ್ಕೆ ಸ್ವಂತ ಕಟ್ಟಡ ನಿರ್ಮಿಸುವ ಯೋಜನೆ ರೂಪಿಸಲಾಗಿದೆ ಎಂದರು.

ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳದ ಉಪಾಧ್ಯಕ್ಷ ಡಾ.ಬಿ.ಡಿ.ಭೂಕಾಂತ, ನಿರ್ದೇಶಕ ಚಿತ್ತರಂಜನ್ ಬೋಳಾರ್, ಮಾಜಿ ಅಧ್ಯಕ್ಷ ಡಾ.ಶೇಖರ ವಿ.ಮಾಲಿ ಪಾಟೀಲ, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಕೆ.ಎಸ್.ದೇವರಾಜ್, ದ.ಕ.ಜಿಲ್ಲೆಯ ಸಹಕಾರ ಸಂಘಗಳ ಉಪನಿಬಂಧಕ ಪ್ರವೀಣ್ ನಾಯಕ್, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ ಅತಿಥಿಗಳಾಗಿ ಭಾಗವಹಿಸಿದ್ದರು.

ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಕೆ.ಸಿ.ನಾರಾಯಣ ಗೌಡ, ನಿರ್ದೇಶಕರಾದ ಪಿ.ಸಿ.ಜಯರಾಮ, ನಿತ್ಯಾನಂದ ಮುಂಡೋಡಿ, ಚಂದ್ರಾ ಕೋಲ್ಚಾರ್, ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಆಶಾಲತ ಉಪಸ್ಥಿತರಿದ್ದರು.

ಮಹಾಮಂಡಳದ ಸಲಹೆಗಾರ ಕೆ.ಎಸ್.ಗುರುಪ್ರಸಾದ್ ಸ್ವಾಗತಿಸಿ, ವೆಂಕಟರಮಣ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯ ಉಪಾಧ್ಯಕ್ಷ ಪಿ.ಎಸ್.ಗಂಗಾಧರ ವಂದಿಸಿದರು. ಮುಖ್ಯಕಾರ್ಯನಿರ್ವಹಣಾಧಿಕಾರಿ ಕೆ.ಟಿ.ವಿಶ್ವನಾಥ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಾಗಾರದಲ್ಲಿ ಪತ್ತಿನ ಸಹಕಾರ ಸಂಘಗಳಿಗೆ ಸಂಬಂಧಿಸಿ ಆದಾಯ ತೆರಿಗೆ ಮತ್ತು ಸರಕು ಮತ್ತು ಸೇವಾ ತೆರಿಗೆ, ಇ-ಸ್ಟಾಂಪಿಂಗ್, ಸಹಕಾರ ಸಂಘದಲ್ಲಿ ಸಾಲ ವಸೂಲಾತಿ ಪ್ರಕ್ರಿಯೆ ಹಾಗು ಸಹಕಾರ ಸಂಘಗಳ ಚುನಾವಣಾ ನಿಯಮ ಕುರಿತು ಉಪನ್ಯಾಸ ನಡೆಯಿತು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ

ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…

19 hours ago

ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ

ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…

19 hours ago

ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ

ಎಲ್‌ನಿನೋ ವಿದ್ಯಮಾನವು ಡಿಸೆಂಬರ್‌ನಲ್ಲಿ ಗರಿಷ್ಠ ತೀವ್ರತೆ ತಲುಪುವ ಸಾಧ್ಯತೆಯಿದ್ದು, 2027ರ ಫೆಬ್ರವರಿವರೆಗೆ ಮುಂದುವರಿಯಬಹುದು…

20 hours ago

ಹವಾಮಾನ ವರದಿ | 10-10-2026 | ರಾಜ್ಯದಲ್ಲಿ ಇಂದಿನಿಂದ ಮಳೆ ಇಳಿಕೆ ; ಅ.16ರಿಂದ ಹಿಂಗಾರು ಮಳೆ ಆರಂಭದ ಮುನ್ಸೂಚನೆ

ಅಕ್ಟೋಬರ್ 11ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿ ಬಿಸಿಲಿನ ವಾತಾವರಣ ಮುಂದುವರಿಯುವ…

23 hours ago

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ

ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…

2 days ago