ಆರ್ ಸಿ ಇ ಪಿ ಬಗ್ಗೆ ಆತಂಕ ಬೇಡ- ಸಂಸದ ನಳಿನ್ ಕುಮಾರ್ ಕಟೀಲ್

November 1, 2019
8:34 PM

ಸುಳ್ಯ: ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ(ಆರ್‍ಸಿಇಪಿ) ಕುರಿತು ರೈತರು ಯಾವುದೇ ಆತಂಕಪಡುವ ಅಗತ್ಯವಿಲ್ಲ. ಆರ್‍ಸಿಇಪಿ ಈಗ ಚರ್ಚೆಯಲ್ಲಿದೆಯಷ್ಟೆ. ರೈತರಿಗೆ ವಿರೋಧವಾಗುವ ಯಾವುದೇ ಯೋಜನೆ ಜಾರಿಯಾಗುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಸುಳ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಆರ್‍ಸಿಇಪಿ ಸಂಬಂಧಪಟ್ಟು ಕೇಂದ್ರ ಸರ್ಕಾರ ಈಗಾಗಲೇ ಕೃಷಿಕರು ಮತ್ತು ಟ್ರೇಡ್ ಯೂನಿಯನ್‍ಗಳ ಜೊತೆ ಮಾತುಕತೆ ನಡೆಸಿದೆ. ಆರ್‍ಸಿಇಪಿ ನೇರವಾಗಿ ಹೇರಿಕೆ ಮಾಡುವುದಿಲ್ಲ ಎಂದು ಪ್ರಧಾನಿಯವರೇ ಸ್ಪಷ್ಟ ಪಡಿಸಿದ್ದಾರೆ. ಈ ವಿಚಾರದಲ್ಲಿ ರೈತರಲ್ಲಿ ಯಾವುದೇ ಆತಂಕ ಬೇಡ. ರೈತ ವಿರೋಧಿ ಯೋಜನೆಯನ್ನು ಸರಕಾರ ಜಾರಿಗೊಳಿಸುವುದಿಲ್ಲ. ರಾಜ್ಯದಲ್ಲಿಯೂ ಅಡಿಕೆ ಕೃಷಿ ಇದೆ. ಹಾಲಿನ ವ್ಯವಹಾರ ನಡೆಸುವವರಿದ್ದಾರೆ. ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿಗಳು ಕೂಡಾ ಕೇಂದ್ರಕ್ಕೆ ಪತ್ರ ಬರೆದಿದ್ದಾರೆ. ಯಾವುದೇ ಯೋಜನೆ ರೈತರಿಗೆ ತೊಂದರೆ ಆಗುತ್ತದೆ ಅಂದರೆ ನಾವು ಎಲ್ಲರೂ ಸೇರಿ ಅದನ್ನು ವಿರೋಧಿಸುತ್ತೇವೆ ಎಂದು ಹೇಳಿದರು.

ಅಡಿಕೆ ಹಳದಿ ಎಲೆ ರೋಗಕ್ಕೆ ಪರಿಹಾರದ ಕುರಿತು ಸಂಸದರ ಗಮನ ಸೆಳೆದಾಗ, ಜಿಲ್ಲೆಯ ಎಲ್ಲ ಅಡಿಕೆ ಬಳೆಗಾರರ ನಾಯಕರನ್ನು ಕರೆದು ಮುಖ್ಯಮಂತ್ರಿಗಳು ಮಾತನಾಡಿದ್ದಾರೆ. ಅವರಿಗೆ ಬೇಕಾದ ರೀತಿಯಲ್ಲಿ ಪರಿಹಾರ ನೀಡುವ ಬಗ್ಗೆ ಮುಖ್ಯಮಂತ್ರಿಗಳು ನಿರ್ಧಾರ ಕೈಗೊಳ್ಳುತ್ತಾರೆ ಎಂದು ಹೇಳಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ
August 23, 2026
7:58 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ
August 23, 2026
3:24 PM
by: ಸಾಯಿಶೇಖರ್ ಕರಿಕಳ
ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ
August 23, 2026
2:16 PM
by: ದ ರೂರಲ್ ಮಿರರ್.ಕಾಂ
ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ
August 23, 2026
12:18 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror