ಆರ್ ಸಿ ಇ ಪಿ ಒಪ್ಪಂದಕ್ಕೆ ಭಾರತದ ಒಪ್ಪಿಗೆ ಇಲ್ಲ : ಒಪ್ಪಂದ ಮುಂದೂಡಿಕೆ ಸಾಧ್ಯತೆ

November 4, 2019
7:25 AM

ನವದೆಹಲಿ : ಆರ್ ಸಿ ಇ ಪಿ ಒಪ್ಪಂದದಿಂದ ಭಾರತ ದೂರ ಉಳಿಯುವ ನಿರ್ಧಾರವನ್ನು ಸೂಚ್ಯವಾಗಿ ತಿಳಿಸಿದ ಬೆನ್ನಲ್ಲೇ ಬ್ಯಾಂಕಾಕ್‌ ನಲ್ಲಿ ಭಾನುವಾರ ನಡೆದ ಸಭೆಯಲ್ಲಿ ಒಪ್ಪಂದವನ್ನು ಅಂತಿಮಗೊಳಿಸುವ ನಿರೀಕ್ಷೆ ಹುಸಿಯಾಗಿದೆ ಎಂದು ತಿಳಿದುಬಂದಿದೆ. ಹೀಗಾಗಿ ಒಂದು ವರ್ಷದ ಮಟ್ಟಿಗೆ ಈ ಒಪ್ಪಂದವನ್ನು  ಮುಂದೂಡುವ ಬಗ್ಗೆ ಕರಡು ಹೇಳಿಕೆಯಲ್ಲಿ ತಿಳಿಸಲಾಗಿದೆ. ಭಾರತವೂ ಒಂದು ವರ್ಷದ ಅವಧಿಗೆ ಈ ಒಪ್ಪಂದದಲ್ಲಿ ಭಾಗಿಯಾಗುವುದಿಲ್ಲ ಎಂದು ತಿಳಿಸಿತ್ತು.

16 ದೇಶಗಳು ಒಳಗೊಂಡಿರುವ ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ಒಪ್ಪಂದ(ಆರ್‌ಸಿಇಪಿ) ಮುಂದೂಡುವ ಚಿಂತನೆ ನಡೆದಿದೆ. ಈ ಒಪ್ಪಂದದ ಕೆಲವು ಅಂಶಗಳ ಬಗ್ಗೆ ಭಾರತವು ಆಕ್ಷೇಪ ವ್ಯಕ್ತಪಡಿಸಿ ತಾನು ದೂರ ಉಳಿಯುವ ಬಗ್ಗೆ ಸೂಚ್ಯವಾಗಿ ತಿಳಿಸಿತ್ತು. ಈ ಹಿಂದೆಯೇ ಭಾರತವ ಈ ಬಗ್ಗೆ ಸೂಚನೆಯನ್ನೂ ನೀಡಿತ್ತು. ಅದರ ಜೊತೆಗೆ ಪರ್ಯಾಯ ಒಪ್ಪಂದದ ಕಡೆಗೂ ಚಿಂತನೆ ನಡೆಸಿತ್ತು. ಪ್ರಮುಖವಾಗಿ ಈ ಒಪ್ಪಂದದ ನಂತರ ಚೀನಾ ನಿರ್ಮಿತ ಕಡಿಮೆ ಬೆಲೆಯ ಸರಕುಗಳು ಭಾರತದ ಮಾರುಕಟ್ಟೆಗೆ ಬರುವ ಕಾರಣ  ಸಣ್ಣ ಉದ್ದಿಮೆಗಳಿಗೆ ಸಮಸ್ಯೆಯಾಗಬಹುದು, ದೇಶದ ರೈತರಿಗೂ ಸಮಸ್ಯೆಯಾಗಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಆಕ್ಷೇಪ ಹಾಗೂ ಆತಂಕವನ್ನು  ವ್ಯಕ್ತಪಡಿಸಿದ್ದರು.

ಭಾನುವಾರ ಬ್ಯಾಂಕಾಕ್‌ ನಲ್ಲಿ ನಡೆದ ಸಭೆಯಲ್ಲಿ ಭಾರತ ಎತ್ತಿರುವ ಆಕ್ಷೇಪಗಳ ಬಗ್ಗೆ ಚರ್ಚೆ ನಡೆದು ಒಪ್ಪಂದವನ್ನು ಅಂತಿಮಗೊಳಿಸುವ ತೀರ್ಮಾನಕ್ಕೆ ಬರಲಾಗಲಿಲ್ಲ. ಹೀಗಾಗಿ ಒಂದು ವರ್ಷ ಮುಂದೂಡುವ ನಿರ್ಧಾರಕ್ಕೆ ಬರಲಾಗುತ್ತಿದೆ ಎಂದು ತಿಳಿದುಬಂದಿದೆ. ಆಸಿಯಾನ್’ಗುಂಪಿನ 10 ರಾಷ್ಟ್ರಗಳ ಜೊತೆ ಚೀನಾ, ಭಾರತ, ಜಪಾನ್, ದಕ್ಷಿಣ ಕೊರಿಯಾ, ಆಸ್ಟ್ರೇಲಿಯಾ ,  ನ್ಯೂಜಿಲ್ಯಾಂಡ್ ದೇಶಗಳು ಸೇರಿಕೊಂಡು ಆರ್‌ ಸಿ ಇ ಪಿ ಒಪ್ಪಂದ ರೂಪಿಸಿವೆ. ವಿಶ್ವದ ಜಿಡಿಪಿಯ ಶೇ.30ರಷ್ಟು ಮತ್ತು ವಿಶ್ವದ ಅರ್ಧಾಂಶದಷ್ಟು ಜನತೆ ಈ ಒಪ್ಪಂದದ ವ್ಯಾಪ್ತಿಯಡಿ ಬರುತ್ತಾರೆ. ಭಾರತವು ಒಂದು ವರ್ಷದ ಮಟ್ಟಿಗೆ ಈ ಒಪ್ಪಂದದಲ್ಲಿ  ಭಾಗಿಯಾಗುವುದಿಲ್ಲ ಎಂದು ತಿಳಿಸಿತ್ತು. ನಂತರ ಈ ಬಗ್ಗೆ ನಿರ್ಧಾರವಾಗಲಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!
March 25, 2026
12:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror