ಸುಳ್ಯ: ಸುಳ್ಯ- ಆಲೆಟ್ಟಿ ರಸ್ತೆಯ ದುರಸ್ಥಿ ಮಾಡದಿರುವುದನ್ನು ವಿರೋಧಿಸಿ ಡಿ.7 ರಂದು ನಗರ ಪಂಚಾಯತ್ ಮುಂಭಾಗದಲ್ಲಿ ಆಲೆಟ್ಟಿ ಗ್ರಾಮಸ್ಥರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುವುದು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಧರ್ಮಪಾಲ ಕೊಯಿಂಗಾಜೆ ತಿಳಿಸಿದ್ದಾರೆ.
ನ.21ರಂದು ನಾಗಪಟ್ಟಣ ಸೇತುವೆ ಬಳಿ ರಸ್ತೆ ತಡೆ ಮತ್ತು ಪ್ರತಿಭಟನೆಯನ್ನು ಅಲೆಟ್ಟಿ ಗ್ರಾಮದ ಮತ್ತು ಸಾರ್ವಜನಿಕರ ಸಮಸ್ತರ ನೇತೃತ್ವದಲ್ಲಿ ನಡೆಸಿದ ಸಂದರ್ಭದಲ್ಲಿ 15 ದಿನಗಳ ಒಳಗೆ ನಗರ ಪಂಚಾಯತ್ ರಸ್ತೆಯ ದುರಸ್ಥಿ ಮಾಡುವುದಾಗಿ ನಗರ ಪಂಚಾಯತ್ ನ ಮುಖ್ಯಾಧಿಕಾರಿಗಳು ಮತ್ತು ಅಭಿಯಂತರರು ಭರವಸೆ ನೀಡಿದ್ದರು. ಆದರೆ ನಿಗದಿಯ ಸಮಯದಲ್ಲಿ ರಸ್ತೆ ದುರಸ್ಥಿ ಮಾಡದೇ ಇರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುವುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…