ಸುಳ್ಯ:ಹಿಂದಿನ ಸಮ್ಮಿಶ್ರ ಸರಕಾರ ಮಾಡಿದ್ದ ಸಾಲ ಮನ್ನಾ ಮೊತ್ತವು ರೈತರ ಖಾತೆಗೆ ಜಮೆ ಆಗದೇ ಇರುವುದನ್ನು ಪ್ರತಿಭಟಿಸಿ ರೈತರ ಸಂಘದ ವತಿಯಿಂದ ಸುಳ್ಯ ತಾಲೂಕಿನ ಆಲೆಟ್ಟಿ ಸಹಕಾರಿ ಸಂಘದ ಎದುರಿನಲ್ಲಿ ಅ.16 ರಂದು ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ಮಾತನಾಡಿದ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಯಂ.ವೆಂಕಪ್ಪ ಗೌಡ , 15 ದಿನಗಳ ಒಳಗಾಗಿ ಹಣವನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡದಿದ್ದರೆ ಅಹೋರಾತ್ರಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು. ಈಗಿನ ರಾಜ್ಯ ಸರಕಾರ ಸಾಲ ಮನ್ನಾ ಮಾಡುವುದು ಬಿಡಿ ಹಿಂದಿನ ಸರಕಾರಗಳು ನೀಡಿದ ಹಣವನ್ನು ತಲುಪಿಸುವ ಪ್ರಯತ್ನವನ್ನಾದರೂ ಮಾಡಲೀ. ಸರಕಾರಕ್ಕೆ, ಸಹಕಾರಿ ಸಂಘಗಳಿಗೆ ರೈತರ ಬಗ್ಗೆ ಕಾಳಜಿಯಿದ್ದರೆ ರೈತರ ಖಾತೆಗೆ ಹಣ ತುಂಬುವ ಪ್ರಯತ್ನವನ್ನು ಮಾಡುತ್ತೇವೆಂದು ರೈತರ ಮುಂದೆ ಪ್ರಮಾಣವನ್ನು ಮಾಡಲಿ ಎಂದು ಸವಾಲೆಸದರು. ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಬಂದು ಆಗಿರುವ ಪಾವತಿಯ ಮಾಹಿತಿಯನ್ನು ನೀಡತಕ್ಕದ್ದು, ಇಲ್ಲದಿದ್ದಲ್ಲಿ ಅಹೋರಾತ್ರಿ ಪ್ರತಿಭಟನೆಯನ್ನು ಮಾಡಲು ಹಿಂದೇಟು ಹಾಕುವುದಿಲ್ಲವೆಂದು ಎಚ್ಚರಿಸಿದರು.
ರೈತ ಸಂಘದ ಅಧ್ಯಕ್ಷ ಲೋಲಜಾಕ್ಷ ಭೂತಕಲ್ಲು ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.
ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು…
ಸಾಮಾಜಿಕ ವ್ಯವಸ್ಥೆಯಲ್ಲಿ ‘ಸೇವೆ’ಗೆ ಮೌಲ್ಯ ನಿರ್ಧರಿಸಲು ಕಷ್ಟಸಾಧ್ಯ. ಆತ್ಮಾರ್ಥ ಸೇವೆಗಳು ಸದ್ದಾಗುವುದಿಲ್ಲ. ಫಕ್ಕನೆ…
15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…
ಭವಿಷ್ಯ ಕೆ ಪಿ, 8 ನೇ ತರಗತಿ, ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ…
ರಾಜ್ಯದ ವಿವಿದೆಡೆ ಸದ್ಯ ಸಾಧಾರಣ ಮಳೆಯಾಗುತ್ತಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಕೂಡಾ…