Advertisement
MIRROR FOCUS

ಆಶ್ಲೇಷ ಮಳೆಯ ಆಹ್ಲಾದ …….. ಹೊಳೆ, ನದಿಗಳಲ್ಲಿ ತುಂಬಿ ಹರಿದ ನೀರು….

Share

ಇದುವರೆಗೆ  ಮಳೆಯ ಕೊರತೆ ಇತ್ತು. ಈಗ ಆಶ್ಲೇಷ ನಕ್ಷತ್ರದಲ್ಲಿ ಭರ್ಜರಿ ಮಳೆಯಾಗುತ್ತಿದೆ. ಈ ವರ್ಷ ಮೊದಲ ಬಾರಿಗೆ ಹೊಳೆ, ನದಿಗಳಲ್ಲಿ  ನೀರು ತುಂಬಿ ಹರಿದಿದೆ. ಈಗ ಯಬೋ… ಮಳೆಯೇ….! ಅಂತ ಜನರು ಹೇಳಲು ಶುರು ಮಾಡಿದ್ದಾರೆ. ನಿನ್ನೆಯವರೆಗೆ “ಹೊಳೆಯ ಕಸವೂ ತೊಳೆದು ಹೋಗಿಲ್ಲ” ಎನ್ನುತ್ತಿದ್ದವರು ಎಂತಾ ಮಳೆ ಮಾರ್ರೆ ಅಂತ ಹೇಳಲು ಶುರು ಮಾಡಿದ್ದಾರೆ. ಪುತ್ತೂರು  ಸೇರಿದಂತೆ ಕೆಲವು ಕಡೆಗಳಲ್ಲಿ  ತಗ್ಗು ಪ್ರದೇಶಗಳಿಗೆ ನೀರು ಹರಿದಿದೆ. ಭಾಗಮಂಡಲದ ಸುತ್ತಮುತ್ತಲೂ ಉತ್ತಮ ಮಳೆಯಾಗುತ್ತಿದೆ.

Advertisement
Advertisement

 

Advertisement

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸೋಮವಾರದಿಂದ ಉತ್ತಮ ಮಳೆಯಾಗುತ್ತಿದೆ. ಈ ವರ್ಷ ಮೊದಲ ಬಾರಿ ಇಷ್ಟೊಂದು ಪ್ರಮಾಣದಲ್ಲಿ ಮಳೆ ಸುರಿದಿದೆ. ಇದುವರೆಗೆ ಮಳೆ ಇಲ್ಲ, ಮಳೆ ಕಡಿಮೆ ಎನ್ನುತ್ತಿದ್ದವರು  ಈಗ ಎಂತಾ ಮಳೆ ಮಾರ್ರೆ…! ವಾ ಬರ್ಸಯೇ…! ಅಂತ ಹೇಳಲು ಶುರು ಮಾಡಿದ್ದಾರೆ. ಹವಾಮಾನ ಇಲಾಖೆ ಪ್ರಕಾರ ಇನ್ನೂ ಎರಡು ದಿನಗಳ ಕಾಲ ಇದೇ ಪ್ರಮಾಣದಲ್ಲಿ ಮಳೆ ಸುರಿಯುತ್ತದೆ.

 

Advertisement

 

Advertisement

 

Advertisement

 

ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಮುಂಗಾರು ಚುರುಕುಗೊಂಡಿದ್ದು, ಕಾವೇರಿಯ ಉಗಮಸ್ಥಾನ ತಲಕಾವೇರಿ, ಭಾಗಮಂಡಲ ಸುತ್ತಲಮುತ್ತಲ ಪ್ರದೇಶದಲ್ಲಿ ಆಶ್ಲೇಷ ಮಳೆ ರೈತಾಪಿ ವರ್ಗದಲ್ಲಿ ಆಹ್ಲಾದ ಮೂಡಿಸಿದೆ. ಕಾವೇರಿ, ಕನ್ನಿಕೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ನಾಪೋಕ್ಲು-ಭಾಗಮಂಡಲ ರಸ್ತೆಯ ಮೇಲೆ ನೀರು ಹರಿಯಲಾರಂಭಿಸಿದೆ. ಮಳೆ ಇದೇ ರೀತಿ ಮುಂದುವರಿದಲ್ಲಿ ಭಾಗಮಂಡಲದ ಶ್ರೀ ಭಗಂಡೇಶ್ವರ ಕ್ಷೇತ್ರ ಜಲಾವೃತಗೊಳ್ಳುವ ಸಾಧ್ಯತೆ ಇದೆ. ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯಾ ಅವರು  ಭಾಗಮಂಡಲಕ್ಕೆ ಭೇಟಿ ನೀಡಿ ಪ್ರವಾಹ ಪರಿಸ್ಥಿತಿಯನ್ನು ಅವಲೋಕಿಸಿದರು. ರಕ್ಷಣಾ ತಂಡಗಳು ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳನ್ನು ಪರಿಶೀಲಿಸಿದರು. ಬಳಿಕ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ಭಾಗಮಂಡಲ ದೇವಾಲಯ ವ್ಯವಸ್ಥಾಪನಾ ಸಮಿತಿ ಸಭೆ ನಡೆಸಿದರು.

Advertisement

ಅದರಲ್ಲೂ ದಕ್ಷಿಣ ಕೊಡಗಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಪರಿಣಾಮವಾಗಿ ವೀರಾಜಪೇಟೆಯಿಂದ ಕೇರಳಕ್ಕೆ ಸಂಪರ್ಕ ಕಲ್ಪಿಸುವ ಅಂತರರಾಜ್ಯ ಹೆದ್ದಾರಿಯ ಮಾಕುಟ್ಟ ಬಳಿ ರಸ್ತೆ ಕುಸಿದಿದ್ದು, ಈ ಮಾರ್ಗದಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ಕಳೆದ ಸಾಲಿನಲ್ಲೂ ಮಾಕುಟ್ಟ ರಸ್ತೆಯಲ್ಲೇ ಪ್ರಥಮ ಭೂಕುಸಿತವಾಗಿದ್ದು, ಅದಾದ ಬಳಿಕ ಜಿಲ್ಲೆಯ ವಿವಿಧೆಡೆಗಳಲ್ಲಿ ಭೂಕುಸಿತ, ಜಲ ಪ್ರಳಯ ಸಂಭವಿಸಿದ್ದರಿಂದ ಕೊಡಗಿನ ಜನತೆ ಇದೀಗ ಆತಂಕಕ್ಕೆ ಒಳಗಾಗಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಆ.5ರಿಂದ 7ರ ಬೆಳಗಿನವರೆಗೆ 115.6ಮಿ.ಮೀ.ನಿಂದ 204.4.ಮಿ.ಮೀ.ನಷ್ಟು ಮಳೆಯಾಗಲಿರುವುದಾಗಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮತ್ತೊಂದೆಡೆ ಆ.7ರಿಂದ 9ರ ಬೆಳಗಿನವರೆಗೆ ಜಿಲ್ಲೆಯಲ್ಲಿ 204.4ಮಿ.ಮೀ.ಗಿಂತಲೂ ಅಧಿಕ ಮಳೆ ಬೀಳುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ಘೋಷಿಸಲಾಗಿದ್ದು, 9ರ ಬೆಳಗಿನಿಂದ ಆ.10ರ ಬೆಳಗಿನವರೆಗೆ ಮತ್ತೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಈ ಅವಧಿಯಲ್ಲಿ ಸಾರ್ವಜನಿಕರು ಹಾಗೂ ಪ್ರವಾಸಿಗರು ಎಚ್ಚರಿಕೆಯಿಂದ ಇರುವಂತೆ ಕೊಡಗು ಜಿಲ್ಲಾಡಳಿತ ಮನವಿ ಮಾಡಿದ್ದು, ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಜಿಲ್ಲಾಡಳಿತ 24*7 ಕಂಟ್ರೋಲ್ ರೂಮ್‍ನ ದೂರವಾಣಿ ಸಂಖ್ಯೆ 08272-221077 ಅಥವಾ ವಾಟ್ಸ್‍ಆಪ್ ಸಂಖ್ಯೆ 8550001077ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ. ಭಾರೀ ಮಳೆಯಿಂದಾಗಿ ಸೋಮವಾರ ಬೆಳಗಿನ ಜಾವ ವೀರಾಜಪೇಟೆ-ಮಾಕುಟ್ಟ ರಸ್ತೆಯ ಒಂದು ಬದಿಯಲ್ಲಿ ಭೂ ಕುಸಿತ ಉಂಟಾಗಿದ್ದು, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಬೆಳ್ಳಂಬೆಳಗ್ಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement

 

Advertisement

 

ಹಾರಂಗಿ ಜಲಾಶಯದ ನೀರಿನ ಮಟ್ಟ: ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಸೋಮವಾರ ಜಲಾಶಯದ 2833.29 ಅಡಿಗಳಿಗೆ ಏರಿಕೆಯಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 2857.71 ಅಡಿ ನೀರು ಸಂಗ್ರಹವಾಗಿತ್ತು. ಪ್ರಸಕ್ತ ಜಲಾಶಯಕ್ಕೆ 1230 ಕ್ಯುಸೆಕ್ ನೀರು ಹರಿದು ಬರುತ್ತಿದ್ದು, ಕಳೆದ ವರ್ಷ ಇದೇ ದಿನಾಂಕದಂದು ನೀರಿನ ಒಳಹರಿವು 5662 ಕ್ಯುಸೆಕ್‍ನಷ್ಟಿತ್ತು. ಇದೀಗ ಜಲಾಶಯದಿಂದ ನದಿಗೆ 30 ಕ್ಯುಸೆಕ್, ನಾಲೆಗೆ 1200 ಕ್ಯುಸೆಕ್ ನೀರನ್ನು ಹೊರಬಿಡಲಾಗುತ್ತಿದ್ದು, ಕಳೆದ ವರ್ಷ ಇದೇ ದಿನಾಂಕದಂದು ನದಿಗೆ 2867, ನಾಲೆಗೆ 1000 ಕ್ಯುಸೆಕ್ ನೀರನ್ನು ಹೊರಬಿಡಲಾಗುತ್ತಿತ್ತು.

Advertisement

ದಕ್ಷಿಣ ಕನ್ನಡದಲ್ಲೂ ಮಳೆಯಬ್ಬರ ಹೆಚ್ಚಾಗಿದ್ದು ಪುತ್ತೂರು ನಗರದಲ್ಲಿ ತೋಡು ಉಕ್ಕಿ ಹರಿದ ಪರಿಣಾಮವಾಗಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ತಕ್ಷಣವೇ ಅಧಿಕಾರಿಗಳು ಕಾರ್ಯುಪ್ರವೃತ್ತರಾಗಿ ಸ್ಥಳಾಂತರ ಪ್ರಕ್ರಿಯೆ ನಡೆಸಲಾಯಿತು. ಕುಮಾರಧಾರಾ, ನೇತ್ರಾವತಿ ನದಿಗಳೂ ಉಕ್ಕಿ ಹರಿಯುತ್ತಿವೆ. ಅಲ್ಲಲ್ಲಿ ಸಣ್ಣಪುಟ್ಟ ಬರೆಗಳು ಕುಸಿತಗೊಂಡಿವೆ.

 

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

8 hours ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

10 hours ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

23 hours ago

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

1 day ago

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

2 days ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

3 days ago