ಬೆಂಗಳೂರು: ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ಸಿದ್ದರಾಮಯ್ಯ ಅವರನ್ನು ಗುರುವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ಭೇಟಿ ಮಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವರಾದ ಕೆ.ಎಸ್.ಈಶ್ವರಪ್ಪ, ಬಸವರಾಜ ಬೊಮ್ಮಾಯಿ ಯೋಗಕ್ಷೇಮ ವಿಚಾರಿಸಿ, ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದರು.
ಈ ವೇಳೆ ಸಿಎಂ ಜತೆ ಮಾತನಾಡಿದ ಸಿದ್ದರಾಮಯ್ಯ, ನಾನು ಆರೋಗ್ಯವಾಗಿದ್ದೇನೆ, ಯಾರೂ ಆತಂಕಪಡುವ ಅಗತ್ಯವಿಲ್ಲ. ಇನ್ನು ಎರಡು ದಿನಗಳಲ್ಲಿ ವಾಪಸ್ ಬರಲಿದ್ದೇನೆ’ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಆರೋಗ್ಯ ವಿಚಾರಿಸಿದ ಅಹ್ಮದ್ ಪಟೇಲ್, ಕೆ.ಸಿ.ವೇಣುಗೋಪಾಲ್, ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಅವರ ರಾಜಕೀಯ ಕಾರ್ಯದರ್ಶಿ ಅಹ್ಮದ್ ಪಟೇಲ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ಸಿದ್ದರಾಮಯ್ಯ ಅವರಿಗೆ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel