ಆಹಾರ ಸಾಮಗ್ರಿಗಳ ನಿರಂತರ ಪೂರೈಕೆ: ಜಿಲ್ಲಾಧಿಕಾರಿ ಸೂಚನೆ | ಸಾರ್ವಜನಿಕರು ಆತಂಕಗೊಳ್ಳುವ ಅಗತ್ಯವಿಲ್ಲ| ಒಂದೇ ಬಾರಿಗೆ ಸಾಮಗ್ರಿಗಳನ್ನು ಖರೀದಿಸುವ ಅಗತ್ಯವಿಲ್ಲ |

March 26, 2020
10:33 PM

ಮಂಗಳೂರು : ಜಿಲ್ಲೆಗೆ ಹೊರಜಿಲ್ಲೆಗಳಿಂದ ಬರುವ  ಆಹಾರ ಸಾಮಾಗ್ರಿಗಳು, ದಿನಸಿ ಅಂಗಡಿ, ತರಕಾರಿ,ಹಣ್ಣು ಪೂರೈಕೆಯಲ್ಲಿ ಯಾವುದೇ ಸಮಸ್ಯೆಯಾಗದಂತೆ ನಿಗಾ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ತಿಳಿಸಿದ್ದಾರೆ.

ಅವರು  ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯಲ್ಲಿ ಆಹಾರ ಸೇರಿದಂತೆ  ಅಗತ್ಯ ವಸ್ತುಗಳ ಪೂರೈಕೆ ಸಂಬಂಧಿಸಿ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಜಿಲ್ಲೆಯಲ್ಲಿ ಸಗಟು ಹಾಗೂ ಚಿಲ್ಲರೆ ವ್ಯಾಪಾರಿಗಳಿಗೆ ತರಕಾರಿ, ಅಕ್ಕಿ, ಹಣ್ಣುಹಂಪಲು ಸೇರಿದಂತೆ ಆಹಾರ ಸಾಮಗ್ರಿಗಳ ಪೂರೈಕೆ ನಿರಂತರವಾಗಿರಬೇಕು. ಅಕ್ಕಿ, ಜಿನಸು, ತರಕಾರಿ, ಹಣ್ಣು ಹಂಪಲು  ಸಾಗಿಸುವ ವಾಹನಗಳಿಗೆ ಯಾವುದೇ ಅಡೆತಡೆ ಮಾಡದಂತೆ ಅವರು  ಪೊಲೀಸ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲೆಗೆ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಇತರ ಜಿಲ್ಲೆಗಳಿಂದ ತರಕಾರಿ ಹಣ್ಣು ಹಂಪಲು ಸರಬರಾಜು ಆಗುತ್ತಿದ್ದು, ಅಕ್ಕಿ ಉಡುಪಿಯಿಂದ ರವಾನೆಯಾಗುತ್ತದೆ. ಇಂತಹ ವಾಹನಗಳ ಸಂಚಾರಕ್ಕೆ ಯಾವುದೇ ಕಾರಣಕ್ಕೂ ಅಡೆತಡೆ ಮಾಡದಂತೆ ಅವರು ಸೂಚಿಸಿದರು.

ಸಾರ್ವಜನಿಕರು ಆತಂಕಗೊಳ್ಳುವ ಅಗತ್ಯವಿಲ್ಲ. ಒಂದೇ ಬಾರಿಗೆ ಸಾಮಗ್ರಿಗಳನ್ನು ಖರೀದಿಸುವ ಅಗತ್ಯವಿಲ್ಲ. ಆಹಾರ ಸಾಮಗ್ರಿ ಸಾಕಷ್ಟು ದಾಸ್ತಾನು ಇರುವಂತೆ ಅಹಾರ ಇಲಾಖೆಗೆ ಸೂಚಿಸಲಾಗಿದೆ. ಮಂಗಳೂರು ಮಹಾನಗರ ಪಾಲಿಕೆ ವತಿಯಿಂದಲು ಸ್ಥಳೀಯ ತಂಡ ರಚಿಸಿ ನಿಗಾ ಇಡಲು ಸೂಚಿಸಲಾಗಿದೆ. ಜನರು ಅಂಗಡಿಗಳಲ್ಲಿ ಮುಗಿ ಬೀಳಬಾರದು. ಮಾರುಕಟ್ಟೆಯಲ್ಲಿ ಆಹಾರ ಸಾಮಾಗ್ರಿಗಳ ಸರಬರಾಜು ಕೊರತೆಯಾಗದಂತೆ ನಿಗಾ ಇಡಲಾಗಿದೆ   ಎಂದು ಅವರು  ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ರೂಪಾ,  ಮಹಾನಗರಪಾಲಿಕೆ ಆಯುಕ್ತ ಶಾನಾಡಿ ಅಜಿತ್ ಕುಮಾರ್, ಡಿಸಿಪಿಗಳಾದ ಅರುಣಾಂಶಗಿರಿ, ಲಕ್ಷ್ಮೀಗಣೇಶ್, ಎಎಸ್ಪಿ ವಿಕ್ರಂ ಅಮಾಟೆ,   ಆಹಾರ ಇಲಾಖೆ ಜಂಟೀ ನಿರ್ದೇಶಕ ಮಂಜುನಾಥ್, ತಹಶೀಲ್ದಾರ್ ಗಳು  ಉಪಸ್ಥಿತರಿದ್ದರು.

Advertisement
Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 16-12-2025 | ಮೋಡ ಮಾತ್ರವೇ ಮಳೆ ಇದೆಯೇ…? | ಮುಂದೆ ಚಳಿಯ ಪ್ರಭಾವ ಹೇಗಿರಬಹುದು..?
December 16, 2025
1:47 PM
by: ಸಾಯಿಶೇಖರ್ ಕರಿಕಳ
ಕೂದಲಿಗೆ ಬಳಸುವ ಎಣ್ಣೆಯ ಪ್ರಯೋಜನ
December 16, 2025
7:22 AM
by: ರೂರಲ್‌ ಮಿರರ್ ಸುದ್ದಿಜಾಲ
ಚಳಿಗಾಲದಲ್ಲಿ ಹೃದಯದ ಕಾಳಜಿಯ ಬಗ್ಗೆ ನಿರ್ಲಕ್ಷ್ಯ ಬೇಡ- ಎಚ್ಚರಿಕೆ ಇರಲಿ
December 16, 2025
7:20 AM
by: ರೂರಲ್‌ ಮಿರರ್ ಸುದ್ದಿಜಾಲ
ಮಹಿಳೆಯರಿಗಾಗಿ ಉಚಿತ ಆರಿ ವರ್ಕ್ಸ್ ತರಬೇತಿ
December 16, 2025
7:17 AM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror