ಬೆಳ್ಳಾರೆ: ಮುಕ್ಕೂರು-ಕುಂಡಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ನಡೆಯಲಿರುವ ದಶಮಾನೋತ್ಸವ ಸಂಭ್ರಮದ ಹತ್ತರ ಹುತ್ತರಿ ಕಾರ್ಯಕ್ರಮದ ಪ್ರಯುಕ್ತ ಕ್ರೀಡಾಕೂಟವು ಆ.18 ರಂದು ಮುಕ್ಕೂರು ಶಾಲಾ ವಠಾರದಲ್ಲಿ ನಡೆಯಲಿದೆ.
ಕೃಷ್ಣಪ್ಪ ನಾಯ್ಕ ಅಡ್ಯತಕಂಡ ಉದ್ಘಾಟಿಸಲಿದ್ದಾರೆ. ದಶಮಾನೋತ್ಸವ ಸಮಿತಿ ಅಧ್ಯಕ್ಷ ಕುಂಬ್ರ ದಯಾಕರ ಆಳ್ವ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ದಶಮಾನೋತ್ಸವ ಸಮಿತಿ ಗೌರವಾಧ್ಯಕ್ಷ ತಿರುಮಲೇಶ್ವರ ಭಟ್, ಕಾರ್ಯಾಧ್ಯಕ್ಷ ಉಮೇಶ್ ಕೆಎಂಬಿ, ಹಳೆ ವಿದ್ಯಾರ್ಥಿ ಸಂಘ ಅಧ್ಯಕ್ಷ ಸುಧಾಕರ ರೈ ಕುಂಜಾಡಿ, ಮುಕ್ಕೂರು ಹಾಲು ಉತ್ಪಾದಕರ ಸಂಘದ ನಿರ್ದೇಶಕ ಗುಡ್ಡಪ್ಪ ಗೌಡ ಅಡ್ಯತಕಂಡ, ಮುಕ್ಕೂರು ಶಾಲಾ ಎಸ್‍ಡಿಎಂಸಿ ಅಧ್ಯಕ್ಷ ಕುಂಞಣ್ಣ ನಾಯ್ಕ ಅಡ್ಯಕಂಡ, ಶಿಕ್ಷಕಿ ಅಮೃತ್ತಾ, ಮುಕ್ಕೂರು ಶಾರದೋತ್ಸವ ಸಮಿತಿ ಅಧ್ಯಕ್ಷ ಸಂಜೀವ ಗೌಡ ಬೈಲಂಗಡಿ, ಮುಕ್ಕೂರು ಜ್ಯೋತಿ ಯುವಕ ಮಂಡಲ ಅಧ್ಯಕ್ಷ ನಾರಾಯಣ ಕೊಂಡೆಪ್ಪಾಡಿ ಭಾಗವಹಿಸಲಿದ್ದಾರೆ.
ಮಹಿಳಾ ವಿಭಾಗದಲ್ಲಿ ಹಗ್ಗಜಗ್ಗಾಟ, ತ್ರೋಬಾಲ್, ಸಂಗೀತ ಕುರ್ಚಿ, ಮಡಿಕೆ ಒಡೆಯುವುದು ಹಾಗೂ ಪುರುಷರ ವಿಭಾಗದಲ್ಲಿ ಹಗ್ಗಜಗ್ಗಾಟ, ವಾಲಿಬಾಲ್, ಕಬಡ್ಡಿ, ನಿಧಾನಗತಿ ಬೈಕ್ ರೇಸ್ ಹಾಗೂ ವಿದ್ಯಾರ್ಥಿಗಳ ವಿಭಾಗದಲ್ಲಿ ವಿವಿಧ ಸ್ಪರ್ಧೆಗಳು ನಡೆಯಲಿದೆ. ಎಲ್ಲ ಗುಂಪಾಟಗಳ ತಂಡವನ್ನು ಸ್ಥಳದಲ್ಲಿಯೇ ಆಯ್ಕೆ ಮಾಡಲಾಗುವುದು.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…